AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಸಮಾರೋಪ ಸಮಾರಂಭದಲ್ಲಿ ಯಾರೆಲ್ಲ ಪ್ರದರ್ಶನ ನೀಡಲಿದ್ದಾರೆ? ಇಲ್ಲಿದೆ ಸಂಪೂರ್ಣ ವಿವರ

IPL 2025 Closing Ceremony: ಐಪಿಎಲ್ 2025ರ ಸಮಾರೋಪ ಸಮಾರಂಭವು ಭಾರತೀಯ ಸೇನೆಗೆ ವಿಶೇಷ ಗೌರವ ಸಲ್ಲಿಸುವ ಮೂಲಕ ಇನ್ನಷ್ಟು ವಿಶೇಷವಾಗಲಿದೆ. ಪ್ರಸಿದ್ಧ ಗಾಯಕ ಶಂಕರ್ ಮಹಾದೇವನ್ ಅವರು ಆಪರೇಷನ್ ಸಿಂಧೂರ್​ನ ವೀರರು ಮತ್ತು ಪಹಲ್ಗಾಮ್ ದಾಳಿಯಲ್ಲಿ ಮಡಿದವರನ್ನು ಸ್ಮರಿಸಲಿದ್ದಾರೆ. ಸಮಾರಂಭವು ಸಂಜೆ 6 ಗಂಟೆಗೆ ಆರಂಭವಾಗಲಿದ್ದು, ಸ್ಟಾರ್ ಸ್ಪೋರ್ಟ್ಸ್ ಮತ್ತು ಜಿಯೋ ಸಿನ್ನಿಮಾ ಅಪ್ಲಿಕೇಶನ್‌ನಲ್ಲಿ ನೇರ ಪ್ರಸಾರವಾಗಲಿದೆ.

IPL 2025: ಸಮಾರೋಪ ಸಮಾರಂಭದಲ್ಲಿ ಯಾರೆಲ್ಲ ಪ್ರದರ್ಶನ ನೀಡಲಿದ್ದಾರೆ? ಇಲ್ಲಿದೆ ಸಂಪೂರ್ಣ ವಿವರ
Ipl 2025
ಪೃಥ್ವಿಶಂಕರ
|

Updated on:Jun 02, 2025 | 8:10 PM

Share

ಐಪಿಎಲ್ 2025 (IPL 2025) ರ ಪ್ರಶಸ್ತಿ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ (RCB vs PBKS) ನಡುವೆ ಜೂನ್ 3 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಸೀಸನ್‌ನಲ್ಲಿ ಎರಡೂ ತಂಡಗಳು ಅದ್ಭುತ ಪ್ರದರ್ಶನ ನೀಡಿದ್ದು ಫೈನಲ್‌ನಲ್ಲಿ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡಿವೆ. ಈಗ ಎರಡೂ ತಂಡಗಳ ಆಟಗಾರರು ಫೈನಲ್‌ನಲ್ಲೂ ಅದ್ಭುತ ಪ್ರದರ್ಶನ ನೀಡುವುದನ್ನು ಕಾಣಬಹುದು. ಈ ಮೊದಲು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಫೈನಲ್ ಪಂದ್ಯವನ್ನು ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ ಭಾರತ-ಪಾಕಿಸ್ತಾನ ಉದ್ವಿಗ್ನತೆಯಿಂದಾಗಿ, ಪಂದ್ಯಾವಳಿಯನ್ನು 10 ದಿನಗಳವರೆಗೆ ನಿಲ್ಲಿಸಲಾಯಿತು. ಈಗ ಈ ಫೈನಲ್ ಪಂದ್ಯವು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಫೈನಲ್‌ಗೂ ಮೊದಲು, ಅಹಮದಾಬಾದ್‌ನಲ್ಲಿ ಸಮಾರೋಪ ಸಮಾರಂಭವೂ (Closing Ceremony) ನಡೆಯಲಿದ್ದು, ಇದರಲ್ಲಿ ಅನೇಕ ಸೆಲೆಬ್ರೆಟಿಗಳು ಪ್ರದರ್ಶನ ನೀಡಲಿದ್ದಾರೆ.

ಐಪಿಎಲ್ 2025 ಸಮಾರೋಪ ಸಮಾರಂಭ

ಈ ಬಾರಿಯ ಸಮಾರೋಪ ಸಮಾರಂಭವೂ ತುಂಬಾ ವಿಶೇಷವಾಗಿರಲಿದೆ. ಪ್ರಸಿದ್ಧ ಗಾಯಕ ಶಂಕರ್ ಮಹಾದೇವನ್ ಅವರು ಭಾರತೀಯ ಸಶಸ್ತ್ರ ಪಡೆಗಳಿಗೆ ಅದ್ಭುತ ರೀತಿಯಲ್ಲಿ ಗೌರವ ಸಲ್ಲಿಸಲಿದ್ದಾರೆ. ಅವರ ಪ್ರದರ್ಶನವು ಆಪರೇಷನ್ ಸಿಂಧೂರ್‌ನಲ್ಲಿ ಭಾಗಿಯಾಗಿದ್ದ ವೀರ ಸೈನಿಕರನ್ನು ಗೌರವಿಸುತ್ತದೆ ಮತ್ತು ಪಹಲ್ಗಾಮ್ ದಾಳಿಯಲ್ಲಿ ಪ್ರಾಣ ಕಳೆದುಕೊಂಡವರನ್ನು ಸ್ಮರಿಸಲಾಗುತ್ತದೆ. ಸಮಾರೋಪ ಸಮಾರಂಭವು ಭಾರತೀಯ ಕಾಲಮಾನ ಸಂಜೆ 6:00 ಗಂಟೆಗೆ ಆರಂಭವಾಗಲಿದೆ. ಇದರ ನೇರ ಪ್ರಸಾರವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಮತ್ತು ಜಿಯೋಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಇರುತ್ತದೆ.

IPL 2025: ಮಳೆಯಿಂದ ಐಪಿಎಲ್ ಫೈನಲ್ ರದ್ದಾದರೆ ಯಾವ ತಂಡಕ್ಕೆ ಚಾಂಪಿಯನ್‌ ಕಿರೀಟ?

ಪಂಜಾಬ್-ಆರ್‌ಸಿಬಿ ನಡುವೆ ಪೈಪೋಟಿ

ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ಮತ್ತು ಪಂಜಾಬ್ ನಡುವೆ ಕಠಿಣ ಸ್ಪರ್ಧೆ ನಿರೀಕ್ಷಿಸಲಾಗಿದೆ. ಈ ಎರಡೂ ತಂಡಗಳ ನಡುವೆ ಇಲ್ಲಿಯವರೆಗೆ 36 ಐಪಿಎಲ್ ಪಂದ್ಯಗಳು ನಡೆದಿದ್ದು, ಇದರಲ್ಲಿ ಪಂಜಾಬ್ ಕಿಂಗ್ಸ್ 18 ಪಂದ್ಯಗಳನ್ನು ಗೆದ್ದಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು 18 ಪಂದ್ಯಗಳನ್ನು ಗೆದ್ದಿದೆ. ಕ್ವಾಲಿಫೈಯರ್-1 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ಕಿಂಗ್ಸ್ ವಿರುದ್ಧ ಜಯಗಳಿಸಿತು. ಇನ್ನು ಪಂಜಾಬ್ ಕಿಂಗ್ಸ್ ಬಗ್ಗೆ ಹೇಳುವುದಾದರೆ, ಶ್ರೇಯಸ್ ಪಡೆ, ಕ್ವಾಲಿಫೈಯರ್ -2 ರಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿ ಫೈನಲ್‌ಗೆ ಲಗ್ಗೆ ಇಟ್ಟಿದೆ. ಈ ಸೀಸನ್‌ನಲ್ಲಿ ಎರಡೂ ತಂಡಗಳ ನಡುವೆ ಮೂರು ಪಂದ್ಯಗಳು ನಡೆದಿದ್ದು, ಆರ್‌ಸಿಬಿ ಎರಡು ಪಂದ್ಯಗಳನ್ನು ಗೆದ್ದಿದ್ದರೆ, ಪಂಜಾಬ್ ಒಂದು ಪಂದ್ಯವನ್ನು ಗೆದ್ದಿದೆ. ಅಂತಹ ಪರಿಸ್ಥಿತಿಯಲ್ಲಿ, ಈ ಫೈನಲ್ ಪಂದ್ಯವು ತುಂಬಾ ರೋಮಾಂಚನಕಾರಿಯಾಗಿರುತ್ತದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:06 pm, Mon, 2 June 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ