AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಉಚಿತ ಬಸ್, ಮೆಟ್ರೋ ಸೌಲಭ್ಯ; ಅಭಿಮಾನಿಗಳಿಗೆ ಬಂಪರ್ ಗಿಫ್ಟ್ ನೀಡಿದ ಸಿಎಸ್​ಕೆ

Chennai Super Kings IPL 2025: ಐಪಿಎಲ್ 2025ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ತನ್ನ ಅಭಿಮಾನಿಗಳಿಗೆ ವಿಶೇಷ ಉಡುಗೊರೆ ನೀಡಿದೆ. ಚೆನ್ನೈನಲ್ಲಿ ನಡೆಯುವ ಪಂದ್ಯಗಳಿಗೆ ಬರುವ ಅಭಿಮಾನಿಗಳು ಮೆಟ್ರೋ ಮತ್ತು ಬಸ್‌ನಲ್ಲಿ ಉಚಿತ ಪ್ರಯಾಣ ಮಾಡಬಹುದು. ಪಂದ್ಯದ ಟಿಕೆಟ್ ಹೊಂದಿರುವವರು ಈ ಸೌಲಭ್ಯ ಪಡೆಯಬಹುದು. ಚೆನ್ನೈ ಮೆಟ್ರೋ ಮತ್ತು ಸಾರಿಗೆ ನಿಗಮದೊಂದಿಗೆ ಸಿಎಸ್‌ಕೆ ಈ ಒಪ್ಪಂದ ಮಾಡಿಕೊಂಡಿದೆ.

IPL 2025: ಉಚಿತ ಬಸ್, ಮೆಟ್ರೋ ಸೌಲಭ್ಯ; ಅಭಿಮಾನಿಗಳಿಗೆ ಬಂಪರ್ ಗಿಫ್ಟ್ ನೀಡಿದ ಸಿಎಸ್​ಕೆ
ಸಿಎಸ್​ಕೆ
ಪೃಥ್ವಿಶಂಕರ
|

Updated on: Mar 16, 2025 | 4:42 PM

Share

18ನೇ ಆವೃತ್ತಿಯ ಐಪಿಎಲ್ (IPL 2025) ಆರಂಭಕ್ಕೆ ಇನ್ನು 6 ದಿನ ಮಾತ್ರ ಬಾಕಿ ಉಳಿದಿವೆ. ಮಾರ್ಚ್​ 22 ರಿಂದ ಆರಂಭವಾಗಲಿರುವ ಈ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಆ ಬಳಿಕ ಟೂರ್ನಿಯ ಎರಡನೇ ದಿನದಂದು ಎರಡನೇ ಪಂದ್ಯದಲ್ಲಿ ಮತ್ತೆರಡು ಬಲಿಷ್ಠ ತಂಡಗಳಾದ ಚೆನ್ನೈ ಸೂಪರ್ ಕಿಂಗ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಚೆನ್ನೈನ ತವರು ಮೈದಾನವಾದ ಎಂಎ ಚಿದಂಬರಂ ಮೈದಾನದಲ್ಲಿ ತಮ್ಮ ತಮ್ಮ ಮೊದಲ ಪಂದ್ಯವನ್ನು ಆಡಲಿವೆ. ಆದರೆ ಈ ಪಂದ್ಯಕ್ಕೂ ಮುನ್ನ ಸಿಎಸ್​ಕೆ (CSK) ಫ್ರಾಂಚೈಸಿ ತನ್ನ ತವರು ಅಭಿಮಾನಿಗಳಿಗೆ ವಿಶೇಷ ಉಡುಗೊರೆಯನ್ನು ನೀಡಿದೆ.

ಉಚಿತ ಪ್ರಯಾಣದ ಭಾಗ್ಯ

ಎಲ್ಲಾ ತಂಡಗಳಂತೆ ಚೆನ್ನೈ ಸೂಪರ್ ಕಿಂಗ್ಸ್ ಕೂಡ ತನ್ನ ತವರಿನಲ್ಲಿ ಅಂದರೆ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ 7 ಪಂದ್ಯಗಳನ್ನು ಆಡಲಿದೆ. ಈ 7 ಪಂದ್ಯಗಳಿಗೂ ಅಭಿಮಾನಿಗಳನ್ನು ಸೆಳೆಯಲು ವಿಶೇಷ ಯೋಜನೆಯನ್ನು ಹಾಕಿಕೊಂಡಿರುವ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ, ಚೆನ್ನೈ ಮೆಟ್ರೋ ರೈಲು ಲಿಮಿಟೆಡ್ ಮತ್ತು ಮೆಟ್ರೋಪಾಲಿಟನ್ ಸಾರಿಗೆ ನಿಗಮದೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ. ಇದರ ಅಡಿಯಲ್ಲಿ ಸಿಎಸ್​ಕೆ ಅಭಿಮಾನಿಗಳು ಮೆಟ್ರೋ ಮತ್ತು ಬಸ್‌ನಲ್ಲಿ ಉಚಿತ ಪ್ರಯಾಣ ಮಾಡುವ ಅವಕಾಶ ಹೊಂದಿದ್ದಾರೆ.

ಇದನ್ನೂ ಓದಿ
Image
‘ಹಿಂದೆ ಏನೇ ನಡೆದರೂ ಅದರಲ್ಲಿ ನನಗೆ ತೃಪ್ತಿ ಇದೆ’; ಕೊಹ್ಲಿ
Image
ಐಪಿಎಲ್‌ನಲ್ಲಿ ಅಧಿಕ ಬಾರಿ ಸೊನ್ನೆಗೆ ಔಟಾದ ಟಾಪ್ 5 ಬ್ಯಾಟರ್​ಗಳಿವರು
Image
ಐಪಿಎಲ್ 2025: 5 ತಂಡಗಳಿಗೆ ನೂತನ ನಾಯಕರ ನೇಮಕ
Image
ಐಪಿಎಲ್​ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಐವರು ಬೌಲರ್‌ಗಳು ಇವರೇ..

ಉಚಿತ ಬಸ್, ಮೆಟ್ರೋ ಸೌಲಭ್ಯ ಪಡೆಯುವುದು ಹೇಗೆ?

ಚೆನ್ನೈನಲ್ಲಿ ನಡೆಯುವ ಪಂದ್ಯಗಳನ್ನು ನೋಡಲು ಕ್ರೀಡಾಂಗಣಕ್ಕೆ ತೆರಳುವ ಅಭಿಮಾನಿಗಳಿಗೆ ಸಿಎಸ್​ಕೆ ಫ್ರಾಂಚೈಸಿ ಉಚಿತ ಬಸ್ ಮತ್ತು ಮೆಟ್ರೋ ಪ್ರಯಾಣದ ಸೌಲಭ್ಯ ಒದಗಿಸಿದೆ. ಈ ಸೌಲಭ್ಯವನ್ನು ಬಳಸಿಕೊಳ್ಳಲು ಇಚ್ಚಿಸುವ ಅಭಿಮಾನಿಗಳು ಆ ದಿನದಂದು ನಡೆಯುವ ಪಂದ್ಯದ ಟಿಕೆಟ್ ಅನ್ನು ಖರೀದಿಸಿರಬೇಕು. ಯಾರ ಕೈಯಲ್ಲಿ ಅಂದಿನ ಪಂದ್ಯ ಟಿಕೆಟ್ ಇರುತ್ತದೆಯೋ, ಅವರು ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ ಮೆಟ್ರೋದಲ್ಲಿ ಪ್ರಯಾಣಿಸಲು ಸಾಧ್ಯವಾಗುತ್ತದೆ. ಬಾರ್‌ಕೋಡ್ ಹೊಂದಿರುವ ಟಿಕೆಟ್‌ಗಳು ಮೆಟ್ರೋ ಟಿಕೆಟ್‌ಗಳಂತೆ ಕಾರ್ಯನಿರ್ವಹಿಸುತ್ತವೆ. ಇದರಿಂದಾಗಿ ಯಾವುದೇ ಅಭಿಮಾನಿಗಳು ಸಾಲಿನಲ್ಲಿ ನಿಲ್ಲಬೇಕಾಗಿಲ್ಲ.

ಇದನ್ನೂ ಓದಿ: IPL 2025: ಲಕ್ಷ ಮುಟ್ಟಿದ ಚೆನ್ನೈ vs ಮುಂಬೈ ಪಂದ್ಯದ ಟಿಕೆಟ್ ಬೆಲೆ..!

ಸಿಎಸ್​ಕೆ ತಂಡ: ರುತುರಾಜ್ ಗಾಯಕ್‌ವಾಡ್ (ನಾಯಕ), ಶಿವಂ ದುಬೆ, ರವೀಂದ್ರ ಜಡೇಜಾ, ಮಥೀಶ ಪತಿರಾಣ,ಎಂಎಸ್ ಧೋನಿ, ಡೆವೊನ್ ಕಾನ್ವೆ, ರಾಹುಲ್ ತ್ರಿಪಾಠಿ, ರಚಿನ್ ರವೀಂದ್ರ, ಆರ್ ಅಶ್ವಿನ್, ಖಲೀಲ್ ಅಹ್ಮದ್, ನೂರ್ ಅಹ್ಮದ್, ವಿಜಯ್ ಶಂಕರ್, ಸ್ಯಾಮ್ ಕರನ್, ಶೇಕ್ ರಶೀದ್, ಅಂಶುಲ್ ಕಾಂಬೋಜ್, ಮುಖೇಶ್ ಚೌಧರಿ, ದೀಪಕ್ ಹೂಡಾ, ಗುರ್ಜಪ್ನೀತ್ ಸಿಂಗ್, ನಾಥನ್ ಎಲ್ಲಿಸ್, ಜೇಮಿ ಓವರ್ಟನ್, ಕಮಲೇಶ್ ನಾಗರಕೋಟಿ, ರಾಮಕೃಷ್ಣ ಘೋಷ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ