
18ನೇ ಆವೃತ್ತಿಯ ಐಪಿಎಲ್ (IPL 2025) ಆರಂಭಕ್ಕೆ ಇನ್ನು 6 ದಿನ ಮಾತ್ರ ಬಾಕಿ ಉಳಿದಿವೆ. ಮಾರ್ಚ್ 22 ರಿಂದ ಆರಂಭವಾಗಲಿರುವ ಈ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಆ ಬಳಿಕ ಟೂರ್ನಿಯ ಎರಡನೇ ದಿನದಂದು ಎರಡನೇ ಪಂದ್ಯದಲ್ಲಿ ಮತ್ತೆರಡು ಬಲಿಷ್ಠ ತಂಡಗಳಾದ ಚೆನ್ನೈ ಸೂಪರ್ ಕಿಂಗ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಚೆನ್ನೈನ ತವರು ಮೈದಾನವಾದ ಎಂಎ ಚಿದಂಬರಂ ಮೈದಾನದಲ್ಲಿ ತಮ್ಮ ತಮ್ಮ ಮೊದಲ ಪಂದ್ಯವನ್ನು ಆಡಲಿವೆ. ಆದರೆ ಈ ಪಂದ್ಯಕ್ಕೂ ಮುನ್ನ ಸಿಎಸ್‌ಕೆ (CSK) ಫ್ರಾಂಚೈಸಿ ತನ್ನ ತವರು ಅಭಿಮಾನಿಗಳಿಗೆ ವಿಶೇಷ ಉಡುಗೊರೆಯನ್ನು ನೀಡಿದೆ.
ಎಲ್ಲಾ ತಂಡಗಳಂತೆ ಚೆನ್ನೈ ಸೂಪರ್ ಕಿಂಗ್ಸ್ ಕೂಡ ತನ್ನ ತವರಿನಲ್ಲಿ ಅಂದರೆ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ 7 ಪಂದ್ಯಗಳನ್ನು ಆಡಲಿದೆ. ಈ 7 ಪಂದ್ಯಗಳಿಗೂ ಅಭಿಮಾನಿಗಳನ್ನು ಸೆಳೆಯಲು ವಿಶೇಷ ಯೋಜನೆಯನ್ನು ಹಾಕಿಕೊಂಡಿರುವ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ, ಚೆನ್ನೈ ಮೆಟ್ರೋ ರೈಲು ಲಿಮಿಟೆಡ್ ಮತ್ತು ಮೆಟ್ರೋಪಾಲಿಟನ್ ಸಾರಿಗೆ ನಿಗಮದೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ. ಇದರ ಅಡಿಯಲ್ಲಿ ಸಿಎಸ್‌ಕೆ ಅಭಿಮಾನಿಗಳು ಮೆಟ್ರೋ ಮತ್ತು ಬಸ್‌ನಲ್ಲಿ ಉಚಿತ ಪ್ರಯಾಣ ಮಾಡುವ ಅವಕಾಶ ಹೊಂದಿದ್ದಾರೆ.
CMRL Partners with CSK to Enhance Metro Services for IPL 2025
Chennai Metro Rail Limited (CMRL) is pleased to announce its collaboration with Chennai Super Kings Cricket Limited (CSKCL) to provide seamless and hassle-free travel for cricket fans attending the IPL 2025 matches… pic.twitter.com/52onlssEay
— Chennai Metro Rail (@cmrlofficial) March 15, 2025
ಚೆನ್ನೈನಲ್ಲಿ ನಡೆಯುವ ಪಂದ್ಯಗಳನ್ನು ನೋಡಲು ಕ್ರೀಡಾಂಗಣಕ್ಕೆ ತೆರಳುವ ಅಭಿಮಾನಿಗಳಿಗೆ ಸಿಎಸ್‌ಕೆ ಫ್ರಾಂಚೈಸಿ ಉಚಿತ ಬಸ್ ಮತ್ತು ಮೆಟ್ರೋ ಪ್ರಯಾಣದ ಸೌಲಭ್ಯ ಒದಗಿಸಿದೆ. ಈ ಸೌಲಭ್ಯವನ್ನು ಬಳಸಿಕೊಳ್ಳಲು ಇಚ್ಚಿಸುವ ಅಭಿಮಾನಿಗಳು ಆ ದಿನದಂದು ನಡೆಯುವ ಪಂದ್ಯದ ಟಿಕೆಟ್ ಅನ್ನು ಖರೀದಿಸಿರಬೇಕು. ಯಾರ ಕೈಯಲ್ಲಿ ಅಂದಿನ ಪಂದ್ಯ ಟಿಕೆಟ್ ಇರುತ್ತದೆಯೋ, ಅವರು ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ ಮೆಟ್ರೋದಲ್ಲಿ ಪ್ರಯಾಣಿಸಲು ಸಾಧ್ಯವಾಗುತ್ತದೆ. ಬಾರ್‌ಕೋಡ್ ಹೊಂದಿರುವ ಟಿಕೆಟ್‌ಗಳು ಮೆಟ್ರೋ ಟಿಕೆಟ್‌ಗಳಂತೆ ಕಾರ್ಯನಿರ್ವಹಿಸುತ್ತವೆ. ಇದರಿಂದಾಗಿ ಯಾವುದೇ ಅಭಿಮಾನಿಗಳು ಸಾಲಿನಲ್ಲಿ ನಿಲ್ಲಬೇಕಾಗಿಲ್ಲ.
ಇದನ್ನೂ ಓದಿ: IPL 2025: ಲಕ್ಷ ಮುಟ್ಟಿದ ಚೆನ್ನೈ vs ಮುಂಬೈ ಪಂದ್ಯದ ಟಿಕೆಟ್ ಬೆಲೆ..!
ಸಿಎಸ್‌ಕೆ ತಂಡ: ರುತುರಾಜ್ ಗಾಯಕ್‌ವಾಡ್ (ನಾಯಕ), ಶಿವಂ ದುಬೆ, ರವೀಂದ್ರ ಜಡೇಜಾ, ಮಥೀಶ ಪತಿರಾಣ,ಎಂಎಸ್ ಧೋನಿ, ಡೆವೊನ್ ಕಾನ್ವೆ, ರಾಹುಲ್ ತ್ರಿಪಾಠಿ, ರಚಿನ್ ರವೀಂದ್ರ, ಆರ್ ಅಶ್ವಿನ್, ಖಲೀಲ್ ಅಹ್ಮದ್, ನೂರ್ ಅಹ್ಮದ್, ವಿಜಯ್ ಶಂಕರ್, ಸ್ಯಾಮ್ ಕರನ್, ಶೇಕ್ ರಶೀದ್, ಅಂಶುಲ್ ಕಾಂಬೋಜ್, ಮುಖೇಶ್ ಚೌಧರಿ, ದೀಪಕ್ ಹೂಡಾ, ಗುರ್ಜಪ್ನೀತ್ ಸಿಂಗ್, ನಾಥನ್ ಎಲ್ಲಿಸ್, ಜೇಮಿ ಓವರ್ಟನ್, ಕಮಲೇಶ್ ನಾಗರಕೋಟಿ, ರಾಮಕೃಷ್ಣ ಘೋಷ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ