AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಪಂಜಾಬ್ ವಿರುದ್ಧ ಸೋತು ಲೀಗ್ ಹಂತದಲ್ಲೇ ಪ್ರಯಾಣ ಮುಗಿಸಿದ ಧೋನಿ ತಂಡ

CSK Loses IPL 2025 Match 49 to PBKS: ಚೆನ್ನೈ ಸೂಪರ್ ಕಿಂಗ್ಸ್ ತಂಡವು 2025ರ ಐಪಿಎಲ್‌ನ 49ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೋಲನುಭವಿಸಿತು. ಸ್ಯಾಮ್ ಕರನ್ ಅವರ 88 ರನ್‌ಗಳ ಅದ್ಭುತ ಇನ್ನಿಂಗ್ಸ್‌ನ ಹೊರತಾಗಿಯೂ, ಸಿಎಸ್‌ಕೆ 190 ರನ್‌ಗಳಿಗೆ ಸೀಮಿತವಾಯಿತು. ಪ್ರಭ್ಸಿಮ್ರನ್ ಸಿಂಗ್ ಮತ್ತು ಶ್ರೇಯಸ್ ಅಯ್ಯರ್ ಅವರ ಅರ್ಧಶತಕಗಳ ನೆರವಿನಿಂದ ಪಂಜಾಬ್ ಕಿಂಗ್ಸ್ ಸುಲಭ ಗೆಲುವು ಸಾಧಿಸಿತು. ಚಾಹಲ್ ಅವರ ಅದ್ಭುತ ಬೌಲಿಂಗ್ ಕೂಡ ಪಂಜಾಬ್ ಗೆಲುವಿಗೆ ಕಾರಣವಾಯಿತು. ಈ ಸೋಲಿನೊಂದಿಗೆ ಸಿಎಸ್‌ಕೆ ಪ್ಲೇ ಆಫ್‌ನಿಂದ ಹೊರಬಿತ್ತು.

IPL 2025: ಪಂಜಾಬ್ ವಿರುದ್ಧ ಸೋತು ಲೀಗ್ ಹಂತದಲ್ಲೇ ಪ್ರಯಾಣ ಮುಗಿಸಿದ ಧೋನಿ ತಂಡ
Pbks
ಪೃಥ್ವಿಶಂಕರ
|

Updated on:Apr 30, 2025 | 11:44 PM

Share

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ಕಿಂಗ್ಸ್ (CSK vs PBKS) ನಡುವೆ ನಡೆದ 2025 ರ ಐಪಿಎಲ್​ನ (IPL 2025) 49ನೇ ಪಂದ್ಯದಲ್ಲೂ ಸಿಎಸ್​ಕೆ ತಂಡ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್‌ಕೆ 190 ರನ್ ಕಲೆಹಾಕಿತು. ಇದಕ್ಕೆ ಪ್ರತಿಯಾಗಿ ಪಂಜಾಬ್ ಕಿಂಗ್ಸ್ ಕೊನೆಯ ಓವರ್​ನಲ್ಲಿ ಪಂದ್ಯವನ್ನು ಗೆದ್ದುಕೊಂಡಿತು. ಪಂಜಾಬ್ ಪರ ಪ್ರಭ್ಸಿಮ್ರನ್ ಸಿಂಗ್ ಮತ್ತು ಶ್ರೇಯಸ್ ಅಯ್ಯರ್ ಅರ್ಧಶತಕ ಇನ್ನಿಂಗ್ಸ್ ಆಡಿದರೆ, ಬೌಲಿಂಗ್​ನಲ್ಲಿ ಮಿಂಚಿದ ಚಾಹಲ್ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಈ ಗೆಲುವಿನೊಂದಿಗೆ ಪಂಜಾಬ್ ಪಾಯಿಂಟ್ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದರೆ, ಸಿಎಸ್​ಕೆ ತಂಡ ಅಧಿಕೃತವಾಗಿ ಪ್ಲೇಆಫ್ ರೇಸ್‌ನಿಂದ ಹೊರಬಿತ್ತು.

190 ರನ್ ಗಳಿಸಿದ ಸಿಎಸ್‌ಕೆ

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್‌ಕೆ ಉತ್ತಮ ಆರಂಭ ಪಡೆಯಲು ಸಾಧ್ಯವಾಗಲಿಲ್ಲ. ಶೇಖ್ ರಶೀದ್ 12 ಎಸೆತಗಳಲ್ಲಿ 11 ರನ್ ಗಳಿಸಿ ಔಟಾದರೆ, 3.1 ಓವರ್‌ಗಳಲ್ಲಿ, ಆಯುಷ್ ಮ್ಹಾತ್ರೆ ರೂಪದಲ್ಲಿ ಸಿಎಸ್‌ಕೆ ಎರಡನೇ ವಿಕೆಟ್ ಕಳೆದುಕೊಂಡತು. ಆದಾಗ್ಯೂ, ಮೂರನೇ ಕ್ರಮಾಂಕದಲ್ಲಿ ಅದ್ಭುತವಾಗಿ ಬ್ಯಾಟಿಂಗ್ ಮಾಡಿದ ಸ್ಯಾಮ್ ಕರನ್ 47 ಎಸೆತಗಳಲ್ಲಿ 88 ರನ್ ಕಲೆಹಾಕಿದರು. ಅವರ ಇನ್ನಿಂಗ್ಸ್‌ನಲ್ಲಿ 9 ಬೌಂಡರಿ ಮತ್ತು 4 ಸಿಕ್ಸರ್‌ಗಳು ಸೇರಿದ್ದವು.

ಇವರಲ್ಲದೆ, ರವೀಂದ್ರ ಜಡೇಜಾ 12 ಎಸೆತಗಳಲ್ಲಿ 17 ರನ್ ಗಳಿಸಿದರೆ, ಡೆವಾಲ್ಡ್ ಬ್ರೆವಿಸ್ 26 ಎಸೆತಗಳಲ್ಲಿ 32 ರನ್ ಗಳಿಸಿ ಔಟಾದರು. ಒಟ್ಟಾರೆಯಾಗಿ, ಸ್ಯಾಮ್ ಕರನ್ ಹೊರತುಪಡಿಸಿ, ಸಿಎಸ್​ಕೆಯ ಬೇರೆ ಯಾವುದೇ ಬ್ಯಾಟ್ಸ್‌ಮನ್ ಹೆಚ್ಚಿನ ಪರಿಣಾಮ ಬೀರಲು ಸಾಧ್ಯವಾಗಲಿಲ್ಲ. ಹೀಗಾಗಿ ಧೋನಿ ಸೇನೆ 19.2 ಓವರ್‌ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 190 ರನ್ ಗಳಿಸಿತು.

IPL 2025: ಹೀನಾಯ ಪ್ರದರ್ಶನ; 8 ಎಸೆತಗಳಲ್ಲಿ 5 ವಿಕೆಟ್ ಕಳೆದುಕೊಂಡ ಸಿಎಸ್​ಕೆ

ಪಂಜಾಬ್​ಗೆ ಸುಲಭ ಜಯ

191 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಪಂಜಾಬ್ ತಂಡವು ಸಾಧಾರಣ ಆರಂಭವನ್ನು ಪಡೆಯಿತು. ಪಂಜಾಬ್ ತಂಡಕ್ಕೆ ಪ್ರಿಯಾಂಶ್ ಆರ್ಯ ರೂಪದಲ್ಲಿ ಮೊದಲ ಹೊಡೆತ ಬಿದ್ದಿತು. ಅವರು 15 ಎಸೆತಗಳಲ್ಲಿ 23 ರನ್ ಗಳಿಸಿ ಔಟಾದರು. ಆದರೆ, ಮತ್ತೊಬ್ಬ ಆರಂಭಿಕ ಪ್ರಭ್ಸಿಮ್ರನ್ ಸಿಂಗ್ 36 ಎಸೆತಗಳಲ್ಲಿ 54 ರನ್​ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ಅವರ ಇನ್ನಿಂಗ್ಸ್‌ನಲ್ಲಿ 5 ಬೌಂಡರಿಗಳು ಮತ್ತು 3 ಸಿಕ್ಸರ್‌ಗಳು ಸೇರಿದ್ದವು. ಇವರಲ್ಲದೆ ಶ್ರೇಯಸ್ ಅಯ್ಯರ್ ಕೂಡ ಅರ್ಧಶತಕ ಗಳಿಸಿದರು. ಅಯ್ಯರ್ 41 ಎಸೆತಗಳಲ್ಲಿ 5 ಬೌಂಡರಿ ಮತ್ತು 4 ಸಿಕ್ಸರ್‌ಗಳ ಸಹಾಯದಿಂದ 72 ರನ್​ಗಳ ಗೆಲುವಿನ ಇನ್ನಿಂಗ್ಸ್ ಆಡಿದರು. ಈ ಇಬ್ಬರ ಆಟದಿಂದಾಗಿ ಪಂಜಾಬ್ ತಂಡ ಚೆನ್ನೈ ತಂಡವನ್ನು 4 ವಿಕೆಟ್‌ಗಳಿಂದ ಸೋಲಿಸಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:41 pm, Wed, 30 April 25

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ