IPL 2025: ಕಿಂಗ್ಸ್ vs ಕಿಂಗ್ಸ್: CSK ತಂಡಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ

IPL 2025 CSK vs PBKS: ಏಪ್ರಿಲ್ 30 ರಂದು ನಡೆಯಲಿರುವ ಐಪಿಎಲ್​ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಚೆನ್ನೈನಲ್ಲಿ ಜರುಗಲಿರುವ ಈ ಪಂದ್ಯವು ಸಿಎಸ್​ಕೆ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲಿ ಗೆದ್ದರೆ ಮಾತ್ರ ಧೋನಿ ಪಡೆ ಪ್ಲೇಆಫ್ ರೇಸ್​ನಲ್ಲಿ ಕಾಣಿಸಿಕೊಳ್ಳಲಿದೆ.

IPL 2025: ಕಿಂಗ್ಸ್ vs ಕಿಂಗ್ಸ್: CSK ತಂಡಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ
Csk

Updated on: Apr 30, 2025 | 12:05 PM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 49ನೇ ಮ್ಯಾಚ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಪಂಜಾಬ್ ಕಿಂಗ್ಸ್ (PBKS) ತಂಡಗಳು ಮುಖಾಮುಖಿಯಾಗಲಿದೆ. ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಸಿಎಸ್​ಕೆ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲಿ ಗೆದ್ದರೆ ಮಾತ್ರ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಪ್ಲೇಆಫ್ ರೇಸ್​ನಲ್ಲಿ ಉಳಿದುಕೊಳ್ಳಬಹುದು.

ಒಂದು ವೇಳೆ ಪಂಜಾಬ್ ಕಿಂಗ್ಸ್ ವಿರುದ್ಧ ಸೋತರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ಲೇಆಫ್ ಕನಸು ಕಮರಲಿದೆ. ಏಕೆಂದರೆ ಈಗಾಗಲೇ 4 ತಂಡಗಳು 12 ಅಂಕಗಳನ್ನು ಕಲೆಹಾಕಿದೆ. ಇತ್ತ ಚೆನ್ನೈ ಸೂಪರ್ ಕಿಂಗ್ಸ್ ಕಳೆದ 9 ಪಂದ್ಯಗಳಿಂದ ಗಳಿಸಿರುವುದು ಕೇವಲ 4 ಅಂಕಗಳು ಮಾತ್ರ.

ಇನ್ನುಳಿದ 5 ಪಂದ್ಯಗಳು ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಮಾಡು ಇಲ್ಲವೇ ಮಡಿ ಪಂದ್ಯಗಳು. ಈ 5 ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ ಮಾತ್ರ ಸಿಎಸ್​ಕೆ ಒಟ್ಟು 14 ಅಂಕಗಳನ್ನು ಪಡೆಯಬಹುದು. ಒಂದು ವೇಳೆ ಪಂಜಾಬ್ ಕಿಂಗ್ಸ್  ಎದುರು ಸೋತರೆ ಸಿಎಸ್​ಕೆ ತಂಡವು ಉಳಿದ 4 ಮ್ಯಾಚ್​ಗಳಲ್ಲೂ ಗೆದ್ದರೂ 12 ಅಂಕಗಳನ್ನು ಮಾತ್ರ ಪಡೆಯಲು ಸಾಧ್ಯವಾಗುತ್ತದೆ.

ಇದನ್ನೂ ಓದಿ
PSL 2025: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ RCB ಮಾಜಿ ಆಟಗಾರರು
ಪ್ರಿಯಾಂಶ್ ಆರ್ಯನ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್
ಕ್ರಿಸ್​ ಗೇಲ್ ದಾಖಲೆ ಜಸ್ಟ್ ಮಿಸ್: ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
ಉಲ್ಟಾ ಹೊಡೆದ RCB ಕಪ್ ಗೆಲ್ಲಬಾರದು ಎಂದಿದ್ದ ಅಂಬಾಟಿ ರಾಯುಡು

ಅತ್ತ ಈಗಾಗಲೇ ಆರ್​ಸಿಬಿ 14 ಪಾಯಿಂಟ್ಸ್ ಹಾಗೂ ಉಳಿದ 3 ತಂಡಗಳು 12 ಅಂಕಗಳನ್ನು ಪಡೆದಿದೆ. ಈ ತಂಡಗಳು ಮುಂದಿನ ಪಂದ್ಯಗಳಲ್ಲಿ ತಲಾ ಒಂದು ಜಯ ಸಾಧಿಸಿದರೆ ಸಿಎಸ್​ಕೆ ತಂಡವು ಅಧಿಕೃತವಾಗಿ ಹೊರಬೀಳಲಿದೆ. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಪ್ಲೇಆಫ್ ರೇಸ್​ನಲ್ಲಿ ಉಳಿಯಬೇಕಿದ್ದರೆ ಪಂಜಾಬ್ ಕಿಂಗ್ಸ್ ವಿರುದ್ಧ ಜಯ ಸಾಧಿಸಲೇಬೇಕು.

ಹೀಗಾಗಿ ಪಂಜಾಬ್ ಕಿಂಗ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಕಿಂಗ್ಸ್ ಕದನದಲ್ಲಿ ಸಿಎಸ್​ಕೆ ತಂಡಕ್ಕೆ ಗೆಲುವು ಅನಿವಾರ್ಯ. ಒಂದು ವೇಳೆ ಸೋತರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡವು ಪ್ಲೇಆಫ್ ರೇಸ್​ನಿಂದ ಹೊರಬೀಳುವುದು ಬಹುತೇಕ ಖಚಿತವಾಗಲಿದೆ. ಅದರಂತೆ ಚೆಪಾಕ್ ಸ್ಟೇಡಿಯಂನಲ್ಲಿ ನಡೆಯಲಿರುವ ನಿರ್ಣಾಯಕ ಪಂದ್ಯದಲ್ಲಿ ಸಿಎಸ್​ಕೆ ತಂಡವು ಗೆಲುವಿನ ನಗೆ ಬೀರಲಿದೆಯಾ ಕಾದು ನೋಡಬೇಕಿದೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡ: ಶೇಕ್ ರಶೀದ್, ಆಯುಷ್ ಮ್ಹಾತ್ರೆ, ದೀಪಕ್ ಹೂಡಾ, ಸ್ಯಾಮ್ ಕರನ್, ರವೀಂದ್ರ ಜಡೇಜಾ, ಡೆವಾಲ್ಡ್ ಬ್ರೆವಿಸ್, ಶಿವಂ ದುಬೆ, ಎಂಎಸ್ ಧೋನಿ (ನಾಯಕ), ನೂರ್ ಅಹ್ಮದ್,  ಮಥೀಶ ಪತಿರಾಣ, ಅನ್ಶುಲ್ ಕಾಂಬೋಜ್, ರವಿಚಂದ್ರನ್  ಅಶ್ವಿನ್ಮ ವಿಜಯ್ ಶಂಕರ್, ಕಮಲೇಶ್ ನಾಗರಕೋಟಿ, ರಾಹುಲ್ ತ್ರಿಪಾಠಿ, ಶ್ರೇಯಸ್ ಗೋಪಾಲ್, ಡೆವೊನ್ ಕಾನ್ವೇ, ರಚಿನ್ ರವೀಂದ್ರ, ಮುಖೇಶ್ ಚೌಧರಿ, ನಾಥನ್ ಎಲ್ಲಿಸ್, ಆಂಡ್ರೆ ಸಿದ್ದಾರ್ಥ್ ಸಿ, ವಂಶ್ ಬೇಡಿ, ಖಲೀಲ್ ಅಹ್ಮದ್.

ಇದನ್ನೂ ಓದಿ: IPL 2025: ಎಡಗೈ ದಾಂಡಿಗರ ಸಿಡಿಲಬ್ಬರಕ್ಕೆ RCB ದಾಖಲೆ ಧೂಳೀಪಟ

ಪಂಜಾಬ್ ಕಿಂಗ್ಸ್ ತಂಡ: ಪ್ರಿಯಾಂಶ್ ಆರ್ಯ, ಪ್ರಭ್​ಸಿಮ್ರಾನ್ ಸಿಂಗ್, ಶ್ರೇಯಸ್ ಅಯ್ಯರ್ (ನಾಯಕ), ಜೋಶ್ ಇಂಗ್ಲಿಸ್, ನೆಹಾಲ್ ವಧೇರಾ, ಶಶಾಂಕ್ ಸಿಂಗ್, ಗ್ಲೆನ್ ಮ್ಯಾಕ್ಸ್‌ವೆಲ್, ಅಝ್ಮತುಲ್ಲಾ ಒಮರ್​ಝಾಹಿ, ಮಾರ್ಕೊ ಯಾನ್ಸೆನ್, ಅರ್ಶ್‌ದೀಪ್ ಸಿಂಗ್, ಯುಜ್ವೇಂದ್ರ ಚಹಲ್, ಹರ್‌ಪ್ರೀತ್ ಬ್ರಾರ್, ಮುಶೀರ್ ಖಾನ್, ಮಾರ್ಕಸ್ ಸ್ಟೊಯಿನಿಸ್, ಕ್ಸೇವಿಯರ್ ಬಾರ್ಟ್ಲೆಟ್, ವಿಷ್ಣು ವಿನೋದ್, ಯಶ್ ಠಾಕೂರ್, ಆರೋನ್ ಹಾರ್ಡಿ, ಕುಲದೀಪ್ ಸೇನ್, ಹರ್ನೂರ್ ಸಿಂಗ್, ಪೈಲಾ ಅವಿನಾಶ್.