Virat Kohli: ವಿರಾಟ್ ಕೊಹ್ಲಿಯನ್ನು ಮುತ್ತಿದ ಚೆನ್ನೈ ಫ್ಯಾನ್ಸ್

|

Updated on: Mar 27, 2025 | 11:30 AM

IPL 2025 CSK vs RCB: ಮಾರ್ಚ್ 28 ರಂದು ನಡೆಯಲಿರುವ ಐಪಿಎಲ್​ನ 8ನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಸಿಎಸ್​ಕೆ ತಂಡದ ತವರು ಮೈದಾನದ ಚೆಪಾಕ್ (ಎಂಎ ಚಿದಂಬರಂ ಸ್ಟೇಡಿಯಂ) ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯವು ಇದೀಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

Virat Kohli: ವಿರಾಟ್ ಕೊಹ್ಲಿಯನ್ನು ಮುತ್ತಿದ ಚೆನ್ನೈ ಫ್ಯಾನ್ಸ್
Virat Kohli
Follow us on

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 8ನೇ ಪಂದ್ಯಕ್ಕಾಗಿ ವಿರಾಟ್ ಕೊಹ್ಲಿ (Virat Kohli) ಸಜ್ಜಾಗುತ್ತಿದ್ದಾರೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ಪಡೆ ಕಠಿಣ ತಾಲೀಮಿನಲ್ಲಿ ತೊಡಗಿಸಿಕೊಂಡಿದೆ. ಇತ್ತ ಅಭ್ಯಾಸಕ್ಕಾಗಿ ವಿರಾಟ್ ಕೊಹ್ಲಿ ಆಗಮಿಸಿರುವುದು ಗೊತ್ತಾಗುತ್ತಿದ್ದಂತೆ ಸ್ಟೇಡಿಯಂಗೆ ಅಭಿಮಾನಿಗಳ ಪ್ರವಾಹವೇ ಹರಿದು ಬಂದಿದೆ.

ಅಲ್ಲದೆ ವಿರಾಟ್ ಕೊಹ್ಲಿ ಅಭ್ಯಾಸ ನಡೆಸುತ್ತಿದ್ದ ವೇಳೆ ಅವರನ್ನು ಹುರಿದುಂಬಿಸಿದರು. ಹೀಗೆ ಅಭ್ಯಾಸ ಮುಗಿಯುವವರೆಗೆ ಕಾದು ಕುಳಿತಿದ್ದ ಫ್ಯಾನ್ಸ್​ ಜೊತೆ ಕಿಂಗ್ ಕೊಹ್ಲಿ ಫೋಟೋ ಕ್ಲಿಕ್ಕಿಸಿಕೊಂಡರು. ಅಲ್ಲದೆ ಕೆಲ ಅಭಿಮಾನಿಗಳಿಗೆ ಆಟೋಗ್ರಾಫ್​ ಅನ್ನು ನೀಡಿದರು. ಇದೀಗ ಚೆನ್ನೈ ಅಭಿಮಾನಿಗಳೊಂದಿಗೆ ವಿರಾಟ್ ಕೊಹ್ಲಿ ಕಾಣಿಸಿಕೊಂಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಅಭಿಮಾನಿಗಳೊಂದಿಗೆ ವಿರಾಟ್ ಕೊಹ್ಲಿ:

IPL 2025: Virat Kohli delights fans at Chepauk with autographs & unforgettable memories

ಇದನ್ನೂ ಓದಿ
ಯುಜ್ವೇಂದ್ರ ಚಹಲ್-ಧನಶ್ರೀ ವರ್ಮಾ ವಿಚ್ಛೇದನಕ್ಕೆ ಇದುವೇ ಅಸಲಿ ಕಾರಣ
RCB ದಾಖಲೆ ಧೂಳೀಪಟ ಮಾಡಿದ ಡೆಲ್ಲಿ ಬಾಯ್ಸ್
David Warner: ಡೇವಿಡ್ ವಾರ್ನರ್​ಗೆ ಒಲಿದ ನಾಯಕತ್ವ..!
VIDEO: ಎಂಎಸ್ ಧೋನಿ ಎಂಟ್ರಿಗೆ ಕಿವಿ ಮುಚ್ಚಿ ಕೂತ ನೀತಾ ಅಂಬಾನಿ

ಸಾಂಪ್ರದಾಯಿಕ ಎದುರಾಳಿಗಳ ಕದನ:

ಮಾರ್ಚ್ 28 ರಂದು ನಡೆಯಲಿರುವ ಐಪಿಎಲ್​ನ 8ನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಸಿಎಸ್​ಕೆ ತಂಡದ ತವರು ಮೈದಾನದ ಚೆಪಾಕ್ (ಎಂಎ ಚಿದಂಬರಂ ಸ್ಟೇಡಿಯಂ) ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯವು ಇದೀಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಏಕೆಂದರೆ ಕಳೆದ ಸೀಸನ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪ್ಲೇಆಫ್ ರೇಸ್​ನಿಂದ ಹೊರಬೀಳಲು ಮುಖ್ಯ ಕಾರಣ ಆರ್​ಸಿಬಿ. ಉಭಯ ತಂಡಗಳ ಪಾಲಿಗೆ ನಿರ್ಣಾಯಕವಾಗಿದ್ದ ಈ ಪಂದ್ಯದಲ್ಲಿ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಬಗ್ಗು ಬಡಿದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇಆಫ್ ಹಂತಕ್ಕೇರಿತ್ತು.

ಇದೀಗ ಈ ಸೋಲಿನ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ ಸಿಎಸ್​ಕೆ ಪಡೆ. ಇತ್ತ ಕೆಕೆಆರ್ ವಿರುದ್ಧ ಭರ್ಜರಿ ಜಯ ಸಾಧಿಸಿರುವ ಆರ್​ಸಿಬಿ ಸಿಎಸ್​ಕೆ ತಂಡವನ್ನು ಸಹ ಬಗ್ಗು ಬಡಿಯುವ ಹುಮ್ಮಸ್ಸಿನಲ್ಲಿದೆ. ಹೀಗಾಗಿ ಮಾರ್ಚ್ 28 ರಂದು ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಲಿಯಾಮ್ ಲಿವಿಂಗ್​ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹ್ಯಾಝಲ್​ವುಡ್, ರಾಸಿಖ್ ಸಲಾಂ, ಸುಯೇಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ನುವಾನ್ ತುಷಾರ, ರೊಮಾರಿಯೋ ಶೆಫರ್ಡ್, ಜೇಕಬ್ ಬೆಥೆಲ್, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕಾರ, ದೇವದತ್​ ಪಡಿಕ್ಕಲ್, ಮೋಹಿತ್ ರಾಠಿ, ಅಭಿನಂದನ್ ಸಿಂಗ್, ಲುಂಗಿ ಎನ್​ಗಿಡಿ.

ಇದನ್ನೂ ಓದಿ: VIDEO: ಮೈದಾನಕ್ಕೆ ನುಗ್ಗಿದ ರಿಯಾನ್ ಪರಾಗ್ ಅಭಿಮಾನಿ: ಆಮೇಲೇನಾಯ್ತು ನೀವೇ ನೋಡಿ

ಚೆನ್ನೈ ಸೂಪರ್ ಕಿಂಗ್ಸ್ ತಂಡ: ರುತುರಾಜ್ ಗಾಯಕ್ವಾಡ್ (ನಾಯಕ), ಡೆವೊನ್ ಕಾನ್ವೇ, ರಚಿನ್ ರವೀಂದ್ರ, ವಿಜಯ್ ಶಂಕರ್, ರವೀಂದ್ರ ಜಡೇಜಾ, ಶಿವಂ ದುಬೆ, ಎಂಎಸ್ ಧೋನಿ (ವಿಕೆಟ್ ಕೀಪರ್), ಸ್ಯಾಮ್ ಕರನ್, ರವಿಚಂದ್ರನ್ ಅಶ್ವಿನ್, ಮಥೀಶ ಪತಿರಾಣ, ಕಮಲೇಶ್ ನಾಗರಕೋಟಿ, ನಾಥನ್ ಎಲ್ಲಿಸ್, ಮುಖೇಶ್ ಚೌಧರಿ, ರಾಹುಲ್ ತ್ರಿಪಾಠಿ, ದೀಪಕ್ ಹೂಡಾ, ಶೇಕ್ ರಶೀದ್, ಅಂಶುಲ್ ಕಾಂಬೋಜ್, ಶ್ರೇಯಸ್ ಗೋಪಾಲ್, ನೂರ್ ಅಹ್ಮದ್, ಗುರ್ಜಪ್ನೀತ್ ಸಿಂಗ್, ರಾಮಕೃಷ್ಣ ಘೋಷ್, ಆಂಡ್ರೆ ಸಿದ್ದಾರ್ಥ್ ಸಿ, ವಂಶ್ ಬೇಡಿ, ಜೇಮಿ ಓವರ್ಟನ್.