RCB ವಿರುದ್ಧ ಸೋತರೂ CSK ತಂಡವನ್ನು ಹಾಡಿ ಹೊಗಳಿದ ಅಂಬಾಟಿ ರಾಯುಡು

IPL 2025 RCB vs CSK: ಐಪಿಎಲ್​ ಸೀಸನ್-18ರ 52ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್​ಗಳಲ್ಲಿ 213 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 211 ರನ್​ ಕಲೆಹಾಕಲಷ್ಟೇ ಶಕ್ತರಾದರು. ಈ ಮೂಲಕ ಆರ್​ಸಿಬಿ ತಂಡ 2 ರನ್​ಗಳ ರೋಚಕ ಜಯ ಸಾಧಿಸಿದೆ.

RCB ವಿರುದ್ಧ ಸೋತರೂ CSK ತಂಡವನ್ನು ಹಾಡಿ ಹೊಗಳಿದ ಅಂಬಾಟಿ ರಾಯುಡು
Ambati Rayudu

Updated on: May 05, 2025 | 7:54 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 52ನೇ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಮಹೇಂದ್ರ ಸಿಂಗ್ ಧೋನಿ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಪರ ವಿರಾಟ್ ಕೊಹ್ಲಿ (62), ಜೇಕಬ್ ಬೆಥೆಲ್ (55) ಹಾಗೂ ರೊಮಾರಿಯೊ ಶೆಫರ್ಡ್ (53) ಅರ್ಧಶತಕ ಬಾರಿಸಿ ಮಿಂಚಿದ್ದರು. ಈ ಅರ್ಧಶತಕಗಳ ನೆರವಿನೊಂದಿಗೆ ಆರ್​ಸಿಬಿ ತಂಡ 20 ಓವರ್​ಗಳಲ್ಲಿ 213 ರನ್ ಕಲೆಹಾಕಿತು.

ಈ ಗುರಿಯನ್ನು ಬೆನ್ನತ್ತಿದ ಚೆನ್ಣೈ ಸೂಪರ್ ಕಿಂಗ್ಸ್ ಪರ ಆಯುಷ್ ಮ್ಹಾತ್ರೆ 94 ರನ್ ಬಾರಿಸಿದರೆ, ರವೀಂದ್ರ ಜಡೇಜಾ ಅಜೇಯ 77 ರನ್ ಸಿಡಿಸಿದ್ದರು. ಇದಾಗ್ಯೂ ಅಂತಿಮ ಓವರ್​ನಲ್ಲಿ 15 ರನ್​ಗಳ ಗುರಿ ಪಡೆದ ಸಿಎಸ್​ಕೆ ತಂಡವು 2 ರನ್​​ನಿಂದ ಸೋಲೊಪ್ಪಿಕೊಂಡಿತು. ಈ ವಿರೋಚಿತ ಸೋಲನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಆಟಗಾರ ಹಾಡಿ ಹೊಗಳಿದ್ದಾರೆ.

ಆರ್​ಸಿಬಿ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಅತ್ಯುತ್ತಮ ಪ್ರದರ್ಶನ ನೀಡಿದೆ. ಇದಾಗ್ಯೂ  ಸಿಎಸ್‌ಕೆ ಪಂದ್ಯವನ್ನು ಸೋತಿದ್ದು ದುರದೃಷ್ಟಕರ. ಒಟ್ಟಾರೆಯಾಗಿ ನೋಡುವುದಾದರೆ ಇದು ಈ ಸೀಸನ್​ನಲ್ಲಿನ ಸಿಎಸ್​ಕೆ ತಂಡ ಬೆಸ್ಟ್​ ಫರ್ಫಾಮೆನ್ಸ್. ಹೀಗಾಗಿ ಈ ಸೋಲಿನ ಹೊರತಾಗಿಯೂ ಸಿಎಸ್​ಕೆ ಉತ್ತಮ ಕ್ರಿಕೆಟ್ ಆಡಿದೆ ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.

ಇದನ್ನೂ ಓದಿ
ಬೋಲ್ಡ್ ಫೋಟೋಗೆ ಬೌಲ್ಡ್ ಆಗಿ ಸ್ಪಷ್ಟನೆ ನೀಡಿದ ವಿರಾಟ್ ಕೊಹ್ಲಿ
IPL 2025: ಪ್ಲೇಆಫ್​ ಆಡಲಿರುವ 4 ತಂಡಗಳನ್ನು ಹೆಸರಿಸಿದ ಅಂಬಾಟಿ ರಾಯುಡು
IPL 2025: ಕರುಣ್ ನಾಯರ್ ಡಕೌಟ್: ಈ ಬಾರಿ ಮುಂಬೈ ಇಂಡಿಯನ್ಸ್ ಚಾಂಪಿಯನ್ಸ್?
IPL ನಲ್ಲಿ ಬದಲಾವಣೆ: ರೌಂಡ್ ರಾಬಿನ್ ಸ್ವರೂಪ, ಒಂದು ತಂಡಕ್ಕೆ 18 ಪಂದ್ಯ

ಆರ್​ಸಿಬಿ ತಂಡದ ಗೆಲುವಿಗೆ ಕಾರಣ ಅವರ ಬ್ಯಾಟಿಂಗ್. ಮೊದಲ ಇನಿಂಗ್ಸ್​ನಲ್ಲಿ ಅವರು ಬೃಹತ್ ಮೊತ್ತ ಪೇರಿಸುವಲ್ಲಿ ಯಶಸ್ವಿಯಾದರು. ಇತ್ತ ಸಿಎಸ್​ಕೆ ತಂಡವು ಉತ್ತಮ ಪೈಪೋಟಿ ನೀಡಿದರೂ, ಕೊನೆಯ ಓವರ್​ನಲ್ಲಿ ಸೋಲೊಪ್ಪಿಕೊಂಡಿದೆ. ಆದರೆ ಸಿಎಸ್​ಕೆ ತಂಡವು ಅತ್ಯುತ್ತಮ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದೆ ಎಂದೇ ಹೇಳಬಹುದು.

ಪಂದ್ಯದ ಕೊನೆಯ ಓವರ್‌ನಲ್ಲಿ ಯಶ್ ದಯಾಳ್ ಉತ್ತಮವಾಗಿ ಬೌಲಿಂಗ್ ಮಾಡಿದರು. ದಯಾಳ್ ತಮ್ಮ ಮೇಲಿನ ನಂಬಿಕೆಯನ್ನು ಉಳಿಸಿಕೊಳ್ಳುತ್ತಿದ್ದಾರೆ. ಇದು ಪ್ರಶಸ್ತಿಯನ್ನು ಗೆಲ್ಲಲು ಬಯಸುವ ತಂಡಕ್ಕೆ ಪ್ಲಸ್ ಪಾಯಿಂಟ್. ಇಂತಹ ಪ್ರದರ್ಶನ ನೀಡುವುದರಿಂದ ಹೆಚ್ಚಿನ ಆತ್ಮ ವಿಶ್ವಾಸ ಸಿಗುತ್ತದೆ ಎಂದು ರಾಯುಡು ಅಭಿಪ್ರಾಯಪಟ್ಟರು.

ಇದನ್ನೂ ಓದಿ: PSL ಗೆ ಕೈಕೊಟ್ಟು IPL ಗೆ ಎಂಟ್ರಿ ಕೊಟ್ಟ ಸ್ಫೋಟಕ ದಾಂಡಿಗ

ಒಟ್ಟಿನಲ್ಲಿ ಈ ಪಂದ್ಯದಲ್ಲಿ ಆರ್​ಸಿಬಿ ತಂಡ ಗೆದ್ದರೂ, ಸಿಎಸ್​ಕೆ ತಂಡದಿಂದ ಅತ್ಯುತ್ತಮ ಪ್ರದರ್ಶನ ಮೂಡಿಬಂದಿರುವುದು ಪ್ಲಸ್ ಪಾಯಿಂಟ್ ಎಂದು ಅಂಬಾಟಿ ರಾಯುಡು ಜಿಯೋ ಹಾಟ್​ಸ್ಟಾರ್​​ನ ಪ್ಯಾನೆಲ್ ಚರ್ಚೆಯಲ್ಲಿ ಹೇಳಿದ್ದಾರೆ.