AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಸೇಡು ತೀರಿಸಿಕೊಳ್ಳುವ ತವಕದಲ್ಲಿ ಆರ್​ಸಿಬಿ; ಡೆಲ್ಲಿ ಗದ್ದುಗೆ ಏರುತ್ತಾ ರಜತ್ ಪಡೆ?

IPL 2025: DC vs RCB: ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಏಪ್ರಿಲ್ 27 ರಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಐಪಿಎಲ್ 2025 ರ 46ನೇ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಸಂಜೆ 7:30ಕ್ಕೆ ಆರಂಭವಾಗುವ ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರ ವೀಕ್ಷಿಸಬಹುದು. ಮೊದಲ ಪಂದ್ಯದಲ್ಲಿ ಡೆಲ್ಲಿ ಗೆದ್ದಿರುವುದರಿಂದ ಆರ್‌ಸಿಬಿ ಸೇಡು ತೀರಿಸಿಕೊಳ್ಳಲು ಹೋರಾಡಲಿದೆ.

IPL 2025: ಸೇಡು ತೀರಿಸಿಕೊಳ್ಳುವ ತವಕದಲ್ಲಿ ಆರ್​ಸಿಬಿ; ಡೆಲ್ಲಿ ಗದ್ದುಗೆ ಏರುತ್ತಾ ರಜತ್ ಪಡೆ?
Rcb Vs Dc
ಪೃಥ್ವಿಶಂಕರ
|

Updated on:Apr 26, 2025 | 9:44 PM

Share

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿರುವ ಐಪಿಎಲ್ 2025 ರ 46ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ. ಲೀಗ್​ನಲ್ಲಿ ಉಭಯ ತಂಡಗಳ ನಡುವೆ ಇದು ಎರಡನೇ ಪಂದ್ಯವಾಗಿದ್ದು, ಆರ್​ಸಿಬಿ ತನ್ನ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿದೆ. ಈ ಹಿಂದೆ ಉಭಯ ತಂಡಗಳ ನಡುವೆ ನಡೆದಿದ್ದ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್, ಆರ್​ಸಿಬಿ ತಂಡವನ್ನು ಬೆಂಗಳೂರಿನಲ್ಲಿ ಮಣಿಸುವಲ್ಲಿ ಯಶಸ್ವಿಯಾಗಿತ್ತು. ಇದೀಗ ಆರ್​ಸಿಬಿ ಡೆಲ್ಲಿ ತಂಡವನ್ನು ಅವರ ನೆಲದಲ್ಲಿ ಮಣಿಸಿ ಸೇಡು ತೀರಿಸಿಕೊಳ್ಳುವ ಗುರಿ ಹೊಂದಿದೆ.

ಆರ್​ಸಿಬಿ ಹಾಗೂ ಡೆಲ್ಲಿ ನಡುವಿನ ಐಪಿಎಲ್ 46ನೇ ಪಂದ್ಯ ಯಾವಾಗ ನಡೆಯಲಿದೆ?

ಆರ್​ಸಿಬಿ ಹಾಗೂ ಡೆಲ್ಲಿ ನಡುವಿನ ಐಪಿಎಲ್ 46ನೇ ಪಂದ್ಯ ಏಪ್ರಿಲ್ 27 ರಂದು ನಡೆಯಲಿದೆ.

ಆರ್​ಸಿಬಿ ಹಾಗೂ ಡೆಲ್ಲಿ ನಡುವಿನ ಐಪಿಎಲ್ 46ನೇ ಪಂದ್ಯ ಎಲ್ಲಿ ನಡೆಯಲಿದೆ?

ಆರ್​ಸಿಬಿ ಹಾಗೂ ಡೆಲ್ಲಿ ನಡುವಿನ ಐಪಿಎಲ್ 46ನೇ ಪಂದ್ಯ ಡೆಲ್ಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ.

ಆರ್​ಸಿಬಿ ಹಾಗೂ ಡೆಲ್ಲಿ ನಡುವಿನ ಐಪಿಎಲ್ 46ನೇ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಆರ್​ಸಿಬಿ ಹಾಗೂ ಡೆಲ್ಲಿ ನಡುವಿನ ಐಪಿಎಲ್ 46ನೇ ಪಂದ್ಯ ಸಂಜೆ 7:30ಕ್ಕೆ ಆರಂಭವಾಗಲಿದೆ.

ಆರ್​ಸಿಬಿ ಹಾಗೂ ಡೆಲ್ಲಿ ನಡುವಿನ ಐಪಿಎಲ್ 46ನೇ ಪಂದ್ಯದ ನೇರ ಪ್ರಸಾರ ವೀಕ್ಷಿಸುವುದು ಹೇಗೆ?

ಆರ್​ಸಿಬಿ ಹಾಗೂ ಡೆಲ್ಲಿ ನಡುವಿನ ಐಪಿಎಲ್ 46ನೇ ಪಂದ್ಯದ ನೇರಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್​ವರ್ಕ್​ನ ವಿವಿದ ಚಾನೆಲ್​ಗಳಲ್ಲಿ ವೀಕ್ಷಿಸಬಹುದು.

ದೆಹಲಿ ಕ್ಯಾಪಿಟಲ್ಸ್: ಕರುಣ್ ನಾಯರ್, ಹ್ಯಾರಿ ಬ್ರೂಕ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಫಾಫ್ ಡು ಪ್ಲೆಸಿಸ್, ಟ್ರಿಸ್ಟಾನ್ ಸ್ಟಬ್ಸ್, ಅಭಿಷೇಕ್ ಪೊರೆಲ್, ಡೊನೊವನ್ ಫೆರೇರಾ, ಕೆಎಲ್ ರಾಹುಲ್, ಅಕ್ಷರ್ ಪಟೇಲ್ (ನಾಯಕ), ಸಮೀರ್ ರಿಜ್ವಿ, ಅಶುತೋಷ್ ಶರ್ಮಾ, ದರ್ಶನ್ ನಲ್ಕಂಡೆ, ಅಜಯ್ ಜಾದವ್ ಮಂಡಲ್, ವಿಪ್ರಜ್ ನಿಗಮ್, ಮನ್ವಂತ್ ಕುಮಾರ್ ಎಲ್, ತ್ರಿಪುರಾನ ವಿಜಯ್, ಮಾಧವ್ ತಿವಾರಿ, ಕುಲದೀಪ್ ಯಾದವ್, ದುಷ್ಮಂತ ಚಮೀರಾ, ಮಿಚೆಲ್ ಸ್ಟಾರ್ಕ್, ಮೋಹಿತ್ ಶರ್ಮಾ, ಟಿ. ನಟರಾಜನ್. ಮುಖೇಶ್ ಕುಮಾರ್.

ಆರ್‌ಸಿಬಿ: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ (ನಾಯಕ), ಸ್ವಸ್ತಿಕ್ ಚಿಕಾರಾ, ದೇವದತ್ ಪಡಿಕ್ಕಲ್, ಜಿತೇಶ್ ಶರ್ಮಾ, ಫಿಲಿಪ್ ಸಾಲ್ಟ್, ಮನೋಜ್ ಭಾಂಡಗೆ, ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಲಿಯಾಮ್ ಲಿವಿಂಗ್‌ಸ್ಟೋನ್, ರೊಮಾರಿಯೊ ಶೆಫರ್ಡ್, ಜೇಕಬ್ ಬೆಥೆಲ್, ಸ್ವಪ್ನಿಲ್ ಸಿಂಗ್, ಭುವನೇಶ್ವರ್ ಕುಮಾರ್, ನುಂಗ್ ಹಝ್‌ಲೆವುಡ್, ನುಂಗ್ ಹಜಲ್‌ವುಡ್ ದಯಾಳ್, ರಸಿಖ್ ದಾರ್ ಸಲಾಂ, ಸುಯಶ್ ಶರ್ಮಾ, ಮೋಹಿತ್ ರಾಠಿ, ಅಭಿನಂದನ್ ಸಿಂಗ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:42 pm, Sat, 26 April 25

ಬೆಂಕಿ ಜ್ವಾಲೆಗೆ 4 ಅಂಗಡಿಗಳು ಸುಟ್ಟು ಕರಕಲು: ಅಷ್ಟಕ್ಕೂ ಆಗಿದ್ದೇನು?
ಬೆಂಕಿ ಜ್ವಾಲೆಗೆ 4 ಅಂಗಡಿಗಳು ಸುಟ್ಟು ಕರಕಲು: ಅಷ್ಟಕ್ಕೂ ಆಗಿದ್ದೇನು?
ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ
ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ
ಬಿಗ್ ಬಾಸ್ ಧನುಷ್​​ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್​​ಮೆಂಟ್
ಬಿಗ್ ಬಾಸ್ ಧನುಷ್​​ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್​​ಮೆಂಟ್
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ