KL Rahul Century: ಗುಜರಾತ್ ವಿರುದ್ಧ ದಾಖಲೆಯ ಶತಕ ಸಿಡಿಸಿದ ಕನ್ನಡಿಗ ಕೆಎಲ್ ರಾಹುಲ್
KL Rahul's IPL 2025 Century: ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೇರಿದ ನಂತರ ಕೆಎಲ್ ರಾಹುಲ್ ಅವರ ಆಟದಲ್ಲಿ ಗಮನಾರ್ಹ ಬದಲಾವಣೆ ಕಂಡುಬಂದಿದೆ. ಐಪಿಎಲ್ 2025ರಲ್ಲಿ ಅತ್ಯುತ್ತಮ ಫಾರ್ಮ್‌ನಲ್ಲಿರುವ ಅವರು ಗುಜರಾತ್ ಟೈಟನ್ಸ್ ವಿರುದ್ಧ ಶತಕ ಸಿಡಿಸಿ ಮಿಂಚಿದ್ದಾರೆ. 3 ವರ್ಷಗಳ ಬಳಿಕ ಅವರು ಐಪಿಎಲ್‌ನಲ್ಲಿ ಶತಕ ಗಳಿಸಿದ್ದು ಇದು ಅವರ 5ನೇ ಐಪಿಎಲ್ ಶತಕವಾಗಿದೆ.

ಡೆಲ್ಲಿ ಕ್ಯಾಪಿಟಲ್ಸ್ (DC) ಸೇರಿದ ನಂತರ ಕನ್ನಡಿಗ ಕೆಎಲ್ ರಾಹುಲ್ (KL Rahul) ಅವರ ಆಟ ಸಂಪೂರ್ಣವಾಗಿ ಬದಲಾಗಿದೆ. ಈ ಸೀಸನ್‌ನಲ್ಲಿ ಅತ್ಯುತ್ತಮ ಫಾರ್ಮ್‌ನಲ್ಲಿರುವ ರಾಹುಲ್, ಪ್ರತಿ ಪಂದ್ಯದಲ್ಲೂ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡುತ್ತಿದ್ದಾರೆ. ಇಂದು ನಡೆದ ಗುಜರಾತ್ ಟೈಟನ್ಸ್ (GT) ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ರಾಹುಲ್, ಈ ಸೀಸನ್‌ನಲ್ಲಿ ತಮ್ಮ ಮೊದಲ ಶತಕ ಸಿಡಿಸಿ ಮಿಂಚಿದ್ದಾರೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಈ ಸೀಸನ್ನ 60ನೇ ಪಂದ್ಯದಲ್ಲಿ ರಾಹುಲ್ 60 ಎಸೆತಗಳಲ್ಲಿ ಶತಕ ಪೂರೈಸಿದರು. ಇದರೊಂದಿಗೆ 3 ವರ್ಷಗಳ ನಂತರ ರಾಹುಲ್ ಐಪಿಎಲ್‌ನಲ್ಲಿ ಶತಕದ ಬರ ನೀಗಿಸಿಕೊಂಡಿದ್ದಾರೆ.
8 ಸಾವಿರ ರನ್ ಪೂರ್ಣ
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭ ಕಳಪೆಯಾಗಿತ್ತು. ಫಾಫ್ ಡು ಪ್ಲೆಸಿಸ್ ಅವರನ್ನು ಅರ್ಷದ್ ಖಾನ್ ಕೇವಲ 5 ರನ್‌ಗಳಿಗೆ ಔಟ್ ಮಾಡಿದರು. ಇದಾದ ನಂತರ, ಆರಂಭಿಕ ಆಟಗಾರನಾಗಿ ಮೈದಾನಕ್ಕೆ ಬಂದಿದ್ದ ಕೆ.ಎಲ್. ರಾಹುಲ್ ಇನ್ನಿಂಗ್ಸ್ ಜವಾಬ್ದಾರಿ ವಹಿಸಿಕೊಂಡು ಅಭಿಷೇಕ್ ಪೊರೆಲ್ ಜೊತೆಗೂಡಿ ಎರಡನೇ ವಿಕೆಟ್‌ಗೆ 90 ರನ್‌ಗಳ ಜೊತೆಯಾಟ ನಡೆಸಿದರು. ಇದೇ ವೇಳೆ ರಾಹುಲ್ 35 ಎಸೆತಗಳಲ್ಲಿ ಈ ಸೀಸನ್ನ ನಾಲ್ಕನೇ ಅರ್ಧಶತಕವನ್ನು ಪೂರೈಸಿದರು. ಇದರೊಂದಿಗೆ ಟಿ20 ಕ್ರಿಕೆಟ್‌ನಲ್ಲಿ 8 ಸಾವಿರ ರನ್‌ಗಳನ್ನು ಸಹ ಪೂರ್ಣಗೊಳಿಸಿದರು.
𝘽𝙖𝙩 𝙧𝙖𝙞𝙨𝙚𝙙. 𝙈𝙤𝙢𝙚𝙣𝙩 𝙤𝙬𝙣𝙚𝙙 🌟
KL Rahul soaks in the applause after a stunning 💯
Updates ▶ https://t.co/4flJtatmxc #TATAIPL | #DCvGT | @DelhiCapitals | @klrahul pic.twitter.com/xVuEzXaa9u
— IndianPremierLeague (@IPL) May 18, 2025
5ನೇ ಐಪಿಎಲ್ ಶತಕ
35 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ರಾಹುಲ್ ಇನ್ನಿಂಗ್ಸ್‌ನ 19 ನೇ ಓವರ್‌ನಲ್ಲಿ ತಮ್ಮ ಶತಕವನ್ನು ಪೂರ್ಣಗೊಳಿಸಿದರು. 60ನೇ ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ ರಾಹುಲ್ ತಮ್ಮ ಐಪಿಎಲ್ ವೃತ್ತಿಜೀವನದ 5ನೇ ಶತಕವನ್ನು ಪೂರ್ಣಗೊಳಿಸಿದರು. ರಾಹುಲ್ ಅವರ ಈ ಇನ್ನಿಂಗ್ಸ್ನಲ್ಲಿ 12 ಬೌಂಡರಿ ಮತ್ತು 4 ಸಿಕ್ಸರ್‌ಗಳು ಸೇರಿದ್ದವು. ರಾಹುಲ್ ಅವರ ಶತಕದ ವಿಶೇಷವೆಂದರೆ ಐಪಿಎಲ್ 2025 ರಲ್ಲಿ ಶತಕ ಗಳಿಸಿದ ಮೊದಲ ಬಲಗೈ ಬ್ಯಾಟ್ಸ್‌ಮನ್ ಎನಿಸಿಕೊಂಡರು. ಇದಕ್ಕೂ ಮೊದಲು, ಪ್ರಸ್ತುತ ಸೀಸನ್‌ನಲ್ಲಿ ದಾಖಲಾದ ಎಲ್ಲಾ ನಾಲ್ಕು ಶತಕಗಳು ಎಡಗೈ ಬ್ಯಾಟ್ಸ್‌ಮನ್‌ಗಳದ್ದಾಗಿದ್ದವು.
IPL 2025: ಮತ್ತೊಂದು ಗೆಲ್ಲುವ ಪಂದ್ಯ ಕೈಚೆಲ್ಲಿದ ರಾಜಸ್ಥಾನ್; ಆರ್ಸಿಬಿಗೆ ಹೆಚ್ಚಿದ ಸಂಕಷ್ಟ
3 ವರ್ಷಗಳ ನಂತರ ಶತಕ
ರಾಹುಲ್ 65 ಎಸೆತಗಳಲ್ಲಿ 14 ಬೌಂಡರಿ ಮತ್ತು 4 ಸಿಕ್ಸರ್‌ಗಳಿಂದ ಅಜೇಯ 112 ರನ್ ಬಾರಿಸಿ ಪೆವಿಲಿಯನ್ಗೆ ಮರಳಿದರು. ಈ ಶತಕದೊಂದಿಗೆ ರಾಹುಲ್ 3 ವರ್ಷಗಳ ಕಾಯುವಿಕೆಗೂ ಅಂತ್ಯ ಹಾಡಿದರು. ಇದಕ್ಕೂ ಮೊದಲು, ಐಪಿಎಲ್ 2022 ರ ಸೀಸನ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕನಾಗಿ 2 ಶತಕ ಬಾರಿಸಿದ್ದರು. ಒಟ್ಟಾರೆಯಾಗಿ, ಇದು ರಾಹುಲ್ ಅವರ ಐಪಿಎಲ್ ವೃತ್ತಿಜೀವನದಲ್ಲಿ 5 ನೇ ಶತಕವಾಗಿದೆ. ಈ ಮೂಲಕ ರಾಹುಲ್ ಐಪಿಎಲ್‌ನಲ್ಲಿ ಅತಿ ಹೆಚ್ಚು ಶತಕ ಗಳಿಸಿದವರಲ್ಲಿ ಗಿಲ್ (4) ಅವರನ್ನು ಹಿಂದಿಕ್ಕಿದರು. ಈ ಪಟ್ಟಿಯಲ್ಲಿ ರಾಹುಲ್ ಈಗ ನಾಲ್ಕನೇ ಸ್ಥಾನಕ್ಕೆ ಬಂದಿದ್ದಾರೆ. ಈ ವಿಚಾರದಲ್ಲಿ ರಾಹುಲ್‌ಗಿಂತ ವಿರಾಟ್ ಕೊಹ್ಲಿ (8), ಜೋಸ್ ಬಟ್ಲರ್ (7) ಮತ್ತು ಕ್ರಿಸ್ ಗೇಲ್ (6) ಇದ್ದಾರೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:46 pm, Sun, 18 May 25
