IPL 2025: ಐಪಿಎಲ್ 2025ರ 4ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ. ವಿಶಾಖಪಟ್ಟಣದ ವೈಎಸ್ಆರ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಕನ್ನಡಿಗ ಕೆಎಲ್ ರಾಹುಲ್ (KL Rahul) ಕಣಕ್ಕಿಳಿಯುವುದು ಅನುಮಾನ. ವೈಯುಕ್ತಿಕ ಕಾರಣಗಳಿಂದಾಗಿ ರಾಹುಲ್ ಮೊದಲ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆಯಿದೆ ಎಂದು ಅಕ್ಷರ್ ಪಟೇಲ್ ತಿಳಿಸಿದ್ದಾರೆ.
ಕೆಎಲ್ ರಾಹುಲ್ ಅವರು ಈಗಾಗಲೇ ಡೆಲ್ಲಿ ಕ್ಯಾಪಿಟಲ್ಸ್ ಬಳಗವನ್ನು ಸೇರಿಕೊಂಡಿದ್ದಾರೆ. ಆದರೆ ಅವರು ಮೊದಲ ಪಂದ್ಯದಲ್ಲಿ ಆಡುವುದು ಅನುಮಾನ. ಇದಕ್ಕೆ ಮುಖ್ಯ ಕಾರಣ ರಾಹುಲ್ ಅವರ ಪತ್ನಿ ಆಥಿಯಾ ಶೆಟ್ಟಿ ತಾಯಿಯಾಗುತ್ತಿರುವುದು. ಹೀಗಾಗಿ ರಾಹುಲ್ ಮೊದಲ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆಯಿದೆ.
ಕೆಎಲ್ ರಾಹುಲ್ ಲಭ್ಯತೆಯ ಬಗ್ಗೆ ಮಾತನಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ಅವರು ತಂಡವನ್ನು ಸೇರಿಕೊಂಡಿದ್ದಾರೆ. ಆದರೆ ಅವರು ಆಡುತ್ತಾರೋ ಇಲ್ಲವೋ ಎಂಬುದು ಇನ್ನೂ ಸಹ ಖಚಿತವಾಗಿಲ್ಲ. ಮತ್ತೊಂದೆಡೆ, ಡಿಸಿಯ ಹೊಸ ಮುಖ್ಯ ಕೋಚ್ ಹೇಮಾಂಗ್ ಬದಾನಿ ಕೂಡ ರಾಹುಲ್ ಅವರ ಬ್ಯಾಟಿಂಗ್ ಸ್ಥಾನವನ್ನು ಸಸ್ಪೆನ್ಸ್‌ನಲ್ಲಿ ಇರಿಸಿದ್ದಾರೆ.
ಕೆಎಲ್ ರಾಹುಲ್ ತುರ್ತಾಗಿ ಮನೆಗೆ ಹಿಂತಿರುಗುವ ಸಾಧ್ಯತೆಯಿಲ್ಲದಿದ್ದರೆ ಮಾತ್ರ ಅವರು ಲಕ್ನೋ ಸೂಪರ್ ಜೈಂಟ್ಸ್ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ. ಹೀಗಾಗಿಯೇ ಪಂದ್ಯದ ಆರಂಭದವರೆಗೆ ಕಾದು ನೋಡಲು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ನಿರ್ಧರಿಸಿದೆ.
ಏಕೆಂದರೆ ರಾಹುಲ್-ಆಥಿಯಾ ಶೆಟ್ಟಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಹೀಗಾಗಿ ಪತ್ನಿ ಆಸ್ಪತ್ರೆಗೆ ದಾಖಲಾದರೆ ಅವರು ಮನೆಗೆ ಹಿಂತಿರುಗಬೇಕಾಗದ ಪರಿಸ್ಥಿತಿ ಎದುರಾಗಬಹುದು. ಇದೇ ಕಾರಣದಿಂದಾಗಿ ಟಾಸ್ವರೆಗೂ ಕಾದು ನೋಡಿದ ಬಳಿಕ ಕೆಎಲ್ ರಾಹುಲ್ ಅವರನ್ನು ಕಣಕ್ಕಿಳಿಸಲು ಡೆಲ್ಲಿ ಕ್ಯಾಪಿಟಲ್ಸ್ ಕೋಚ್ ಹೇಮಂಗ್ ಬದಾನಿ ನಿರ್ಧರಿಸಿದ್ದಾರೆ.
ಇದಕ್ಕೂ ಮುನ್ನ ಕೆಎಲ್ ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎನ್ನಲಾಗಿತ್ತು. ಇದಾಗ್ಯೂ ಅವರು ಡೆಲ್ಲಿ ಬಳಗವನ್ನು ಸೇರಿಕೊಂಡಿದ್ದಾರೆ. ಆದರೀಗ ವೈಯುಕ್ತಿಕ ಕಾರಣಗಳಿಂದಾಗಿ ಮೊದಲ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆಯಿದೆ.
ಇದನ್ನೂ ಓದಿ: IPL 2025: ಬರೆದಿಟ್ಕೊಳ್ಳಿ, ಈ ಸಲ ಕಪ್ ಇವರದ್ದೆ… ಎಬಿಡಿ ಭವಿಷ್ಯ
Published On - 9:54 am, Mon, 24 March 25