
ಐಪಿಎಲ್ 2025 (IPL 2025) ರ 46ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (DC vs RCB) ತಂಡಗಳು ಮುಖಾಮುಖಿಯಾಗಿವೆ. ಎರಡೂ ತಂಡಗಳು ಉತ್ತಮ ಫಾರ್ಮ್‌ನಲ್ಲಿದ್ದು, ಇಂದಿನ ಪಂದ್ಯವನ್ನು ಗೆಲ್ಲುವ ತಂಡಕ್ಕೆ ಅಗ್ರ ಸ್ಥಾನ ಸಿಗಲಿದೆ. ಹೀಗಾಗಿ ಉಭಯ ತಂಡಗಳು ಗೆಲುವಿನ ಮೇಲೆ ಕಣ್ಣಿಟ್ಟಿವೆ. ಪ್ರಸ್ತುತ, ಡೆಲ್ಲಿ ತಂಡವು 12 ಅಂಕ ಮತ್ತು ಉತ್ತಮ ನೆಟ್ ರನ್ರೇಟ್ನೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಆರ್‌ಸಿಬಿ ಕೂಡ 12 ಅಂಕಗಳನ್ನು ಹೊಂದಿದ್ದು, 3ನೇ ಸ್ಥಾನದಲ್ಲಿದೆ. ಇನ್ನು ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು ಟಾಸ್ ಗೆದ್ದ ಆರ್‌ಸಿಬಿ ನಾಯಕ ರಜತ್ ಪಾಟಿದರ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇದರ ಜೊತೆಗೆ ಉಭಯ ತಂಡಗಳ ಪ್ಲೇಯಿಂಗ್ 11 ಕೂಡ ಹೊರಬಿದ್ದಿದೆ.
ಮೇಲೆ ಹೇಳಿದಂತೆ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ ನಾಯಕ ರಜತ್ ಪಾಟಿದರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಇದರ ಜೊತೆಗೆ ಆಡುವ ಹನ್ನೊಂದರ ಬಳಗದ ಬಗ್ಗೆ ಮಾಹಿತಿ ನೀಡಿದ ರಜತ್, ಆರಂಭಿಕ ಫಿಲ್ ಸಾಲ್ಟ್ ಬದಲಿಗೆ ಮತ್ತೊಬ್ಬ ಯುವ ಆಂಗ್ಲ ಬ್ಯಾಟರ್ ಜಾಕೋಬ್ ಬೆಥೆಲ್ ಆಡಲಿದ್ದಾರೆ ಎಂದರು. ಹಾಗೆಯೇ ಫಿಲ್ ಸಾಲ್ಟ್ ಅಲಭ್ಯತೆಯ ಬಗ್ಗೆ ಮಾಹಿತಿ ನೀಡಿದ ರಜತ್, ಸಾಲ್ಟ್ ಅವರು ಜ್ವರದಿಂದ ಬಳಲುತ್ತಿರುವ ಕಾರಣ ಅವರು ಈ ಪಂದ್ಯವನ್ನು ಆಡುತ್ತಿಲ್ಲ ಎಂದರು. ಇತ್ತ ಡೆಲ್ಲಿ ತಂಡದಲ್ಲೂ ಬದಲಾವಣೆಗಳಾಗಿದ್ದು, ಫಾಫ್ ಡುಪ್ಲೆಸಿಸ್ ಮತ್ತೆ ತಂಡವನ್ನು ಸೇರಿಕೊಂಡಿದ್ದಾರೆ.
ಎರಡೂ ತಂಡಗಳ ನಡುವಿನ ಹೆಡ್ ಟು ಹೆಡ್ ದಾಖಲೆಯನ್ನು ನೋಡಿದರೆ, ಇಲ್ಲಿಯವರೆಗೆ 32 ಪಂದ್ಯಗಳು ನಡೆದಿವೆ. ಇದರಲ್ಲಿ ದೆಹಲಿ 12 ಪಂದ್ಯಗಳನ್ನು ಗೆದ್ದಿದ್ದರೆ, ಬೆಂಗಳೂರು 19 ಪಂದ್ಯಗಳನ್ನು ಗೆದ್ದಿದೆ. ಒಂದು ಪಂದ್ಯ ಯಾವುದೇ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ. 2021 ರಿಂದ, ಡೆಲ್ಲಿ ತಂಡವು ಆರ್‌ಸಿಬಿ ವಿರುದ್ಧ ಆಡಿರುವ ಏಳು ಪಂದ್ಯಗಳಲ್ಲಿ ಎರಡರಲ್ಲಿ ಮಾತ್ರ ಗೆದ್ದಿದೆ. ಹಾಗೆಯೇ ದೆಹಲಿ ತಂಡವು ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿರುದ್ಧ 10 ಪಂದ್ಯಗಳನ್ನು ಆಡಿದ್ದು, ಆರು ಪಂದ್ಯಗಳಲ್ಲಿ ಸೋತಿದ್ದು, ತವರು ನೆಲದಲ್ಲಿ ಆರ್‌ಸಿಬಿ ವಿರುದ್ಧ ಕೇವಲ ನಾಲ್ಕು ಪಂದ್ಯಗಳನ್ನು ಮಾತ್ರ ಗೆದ್ದಿದೆ.
DC vs RCB Live Score, IPL 2025: ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ
ಡೆಲ್ಲಿ ಕ್ಯಾಪಿಟಲ್ಸ್: ಫಾಫ್ ಡು ಪ್ಲೆಸಿಸ್, ಅಭಿಷೇಕ್ ಪೊರೆಲ್, ಕರುಣ್ ನಾಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ವಿಪ್ರಜ್ ನಿಗಮ್, ಮಿಚೆಲ್ ಸ್ಟಾರ್ಕ್, ದುಷ್ಮಂತ ಚಮೀರಾ, ಕುಲ್ದೀಪ್ ಯಾದವ್, ಮುಖೇಶ್ ಕುಮಾರ್.
ಇಂಪ್ಯಾಕ್ಟ್ ಪ್ಲೇಯರ್ಸ್: ಅಶುತೋಷ್ ಶರ್ಮಾ, ಮೋಹಿತ್ ಶರ್ಮಾ, ಜೇಕ್ ಫ್ರೇಸರ್ ಮೆಕ್‌ಗುರ್ಕ್, ಮಾಧವ್ ತಿವಾರಿ, ವಿಜಯ್.
🪙 CAN’T KEEP CALM ‘COS RAJAT WINS THE TOSS! 😌
We bowl first. There’s one forced change to the XI! 😔
Bethell 🔄 Salt, who misses the game due to illness! 🤒#PlayBold #ನಮ್ಮRCB #IPL2025 #DCvRCB @qatarairways pic.twitter.com/fK8paYNXtv
— Royal Challengers Bengaluru (@RCBTweets) April 27, 2025
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಜೇಕಬ್ ಬೆಥೆಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ರೊಮಾರಿಯೊ ಶೆಫರ್ಡ್, ಭುವನೇಶ್ವರ್ ಕುಮಾರ್, ಸುಯಾಶ್ ಶರ್ಮಾ, ಜೋಶ್ ಹೇಜಲ್‌ವುಡ್, ಯಶ್ ದಯಾಲ್.
ಇಂಪ್ಯಾಕ್ಟ್ ಪ್ಲೇಯರ್ಸ್: ದೇವದತ್ ಪಡಿಕ್ಕಲ್, ಲಿಯಾಮ್ ಲಿವಿಂಗ್‌ಸ್ಟೋನ್, ರಸಿಖ್ ದಾರ್ ಸಲಾಂ, ಮನೋಜ್ ಭಾಂಡಗೆ, ಸ್ವಪ್ನಿಲ್ ಸಿಂಗ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:17 pm, Sun, 27 April 25