Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಧಶತಕ ಬಾರಿಸಿದರೂ ಕಾನ್ವೆಗೆ ಬ್ಯಾಟಿಂಗ್​ ನಿಲ್ಲಿಸಿ ಬರುವಂತೆ ಸೂಚಿಸಿದ CSK 

Punjab Kings vs Chennai Super Kings: ಇಂಡಿಯನ್ ಪ್ರೀಮಿಯರ್ ಲೀಗ್​ನ​ (ಐಪಿಎಲ್ 2025) 22ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 219 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 201 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ.

ಅರ್ಧಶತಕ ಬಾರಿಸಿದರೂ ಕಾನ್ವೆಗೆ ಬ್ಯಾಟಿಂಗ್​ ನಿಲ್ಲಿಸಿ ಬರುವಂತೆ ಸೂಚಿಸಿದ CSK 
Devon Conway
Follow us
ಝಾಹಿರ್ ಯೂಸುಫ್
|

Updated on:Apr 09, 2025 | 9:15 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ರಿಟೈರ್ಡ್​ ಔಟ್ ಹೊಸ ಕಾರ್ಯತಂತ್ರವಾಗಿ ಮಾರ್ಪಡುತ್ತಿದೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ತಿಲಕ್ ವರ್ಮಾ (Tilak Varma) ಅವರನ್ನು ರಿಟೈರ್ಡ್ ಔಟ್ ಮಾಡಿತ್ತು. ಅಂದರೆ ಬ್ಯಾಟಿಂಗ್ ಮಾಡುತ್ತಿದ್ದ ವೇಳೆ ಮರಳುಂತೆ ಸೂಚಿಸುವುದು. ಇದೀಗ ಇದೇ ತಂತ್ರವನ್ನು ಚೆನ್ನೈ ಸೂಪರ್ ಕಿಂಗ್ಸ್ ಕೂಡ ಪ್ರಯೋಗಿಸಿದೆ. ಅದು ಸಹ ಅರ್ಧಶತಕ ಬಾರಿಸಿ ಕ್ರೀಸ್​ನಲ್ಲಿದ್ದ ಡೆವೊನ್ ಕಾನ್ವೆ (Devon Conway) ಮೇಲೆ.

ಚಂಡೀಗಢ್​ನ ಪಿಸಿಎ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 219 ರನ್ ಕಲೆಹಾಕಿತು. ಈ ಕಠಿಣ ಗುರಿ ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ರಚಿನ್ ರವೀಂದ್ರ ಹಾಗೂ ಡೆವೊನ್ ಕಾನ್ವೆ ಉತ್ತಮ ಆರಂಭ ಒದಗಿಸಿದ್ದರು.

ಇದನ್ನೂ ಓದಿ
Image
ಹುಡುಗಿಯಾಗಿ ಬದಲಾದ ಟೀಮ್ ಇಂಡಿಯಾದ ಮಾಜಿ ಆಟಗಾರನ ಪುತ್ರ
Image
VIDEO: ವಿರಾಟ್ ಕೊಹ್ಲಿಗೆ ಬೌಲಿಂಗ್: ಭಾವುಕರಾಗಿ ಅರ್ಧದಲ್ಲೇ ನಿಂತ ಸಿರಾಜ್
Image
11ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ವಿಶ್ವ ದಾಖಲೆ ಬರೆದ ನಸೀಮ್ ಶಾ
Image
MS Dhoni: ಕೇವಲ 3 ರನ್​: ಗ್ರೇಟ್​ ಫಿನಿಶರ್ ಫಿನಿಶ್..!

ಪವರ್​ಪ್ಲೇನಲ್ಲಿ 59 ರನ್ ಬಾರಿಸಿದ ಈ ಜೋಡಿಯು ಬೃಹತ್ ಮೊತ್ತದ ಚೇಸಿಂಗ್​ಗೆ ಭದ್ರ ಬುನಾದಿ ಹಾಕಿದ್ದರು. ಆದರೆ ಆ ಬಳಿಕ ರಚಿನ್ ರವೀಂದ್ರ (36) ವಿಕೆಟ್ ಒಪ್ಪಿಸಿದರು. ಇದಾಗ್ಯೂ ಇನಿಂಗ್ಸ್ ಕಟ್ಟುವ ಕಾಯಕಕ್ಕೆ ಕೈಹಾಕಿದ ಡೆವೊನ್ ಕಾನ್ವೆ ಉತ್ತಮ ಹೊಡೆತಗಳ ಮೂಲಕ ಗಮನ ಸೆಳೆದರು.

ಅಲ್ಲದೆ 49 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 69 ರನ್ ಬಾರಿಸಿದ್ದಾರೆ.  ಆದರೆ ಅಂತಿಮ ಹಂತದ ವೇಳೆ ರನ್ ಗತಿಯನ್ನು ಹೆಚ್ಚಿಸುವಲ್ಲಿ ಕಾನ್ವೆ ವಿಫಲರಾಗಿದ್ದಾರೆ. ಹೀಗಾಗಿ 18ನೇ ಓವರ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಕೋಚ್ ಡಗೌಟ್​ಗೆ ಮರಳುವಂತೆ ಸೂಚಿಸಿದ್ದರು. ಹೀಗಾಗಿ ಡೆವೊನ್ ಕಾನ್ವೆ ರಿಟೈರ್ಡ್ ಔಟ್ ಆಗಿ ಪೆವಿಲಿಯನ್​ಗೆ ಹಿಂತಿರುಗಿದ್ದಾರೆ.

ಡೆವೊನ್ ಕಾನ್ವೆ ಪೆವಿಲಿಯನ್​ಗೆ ಹಿಂತಿರುಗಿರುವುದು:

ಆ ಬಳಿಕ ಕ್ರೀಸ್​ಗೆ ಆಗಮಿಸಿದ ರವೀಂದ್ರ ಜಡೇಜಾ ಹಾಗೂ ಮಹೇಂದ್ರ ಸಿಂಗ್ ಧೋನಿ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಪ್ರಯತ್ನಿಸಿದರು. ಇದಾಗ್ಯೂ ಪಂಜಾಬ್ ಕಿಂಗ್ಸ್ ತಂಡದ ಅತ್ಯುತ್ತಮ ಬೌಲಿಂಗ್​ ಕಾರಣ ಚೆನ್ನೈ ಸೂಪರ್ ಕಿಂಗ್ಸ್ ತಂಡ 18 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಇದನ್ನೂ ಓದಿ: IPL 2025: ಗೆಲುವಿನ ಬೆನ್ನಲ್ಲೇ RCB ನಾಯಕ ರಜತ್ ಪಾಟಿದಾರ್​ಗೆ ದಂಡ ವಿಧಿಸಿದ ಬಿಸಿಸಿಐ

ಇನ್ನು ಈ ರಿಟೈರ್ಡ್ ಔಟ್​ನೊಂದಿಗೆ ಐಪಿಎಲ್​ ಇತಿಹಾಸದಲ್ಲಿ ಔಟಾಗದೇ ಇನಿಂಗ್ಸ್ ಕೊನೆಗೊಳಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಡೆವೊನ್ ಕಾನ್ವೆ ಹೆಸರು ಕೂಡ ಸೇರ್ಪಡೆಯಾಯಿತು. ಅದು ಸಹ 5ನೇ ಆಟಗಾರನಾಗಿ. ಅಂದರೆ ಇದಕ್ಕೂ ಮುನ್ನ ಐಪಿಎಲ್​ನಲ್ಲಿ ನಾಲ್ವರು ಬ್ಯಾಟರ್​ಗಳು ರಿಟೈರ್ಡ್ ಔಟ್ ಆಗಿ ಇನಿಂಗ್ಸ್ ಅಂತ್ಯಗೊಳಿಸಿದ್ದಾರೆ. ಅವರೆಂದರೆ…

  1. ರವಿಚಂದ್ರನ್ ಅಶ್ವಿನ್ vs ಲಕ್ನೋ ಸೂಪರ್ ಜೈಂಟ್ಸ್, ಮುಂಬೈ, 2022
  2. ಅಥರ್ವ್ ಥೈಡೆ vs ಡೆಲ್ಲಿ ಕ್ಯಾಪಿಟಲ್ಸ್, ಧರ್ಮಶಾಲಾ, 2023
  3. ಸಾಯಿ ಸುದರ್ಶನ್ vs ಮುಂಬೈ ಇಂಡಿಯನ್ಸ್, ಅಹಮದಾಬಾದ್, 2023
  4. ತಿಲಕ್ ವರ್ಮಾ vs ಲಕ್ನೋ ಲಕ್ನೋ ಸೂಪರ್ ಜೈಂಟ್ಸ್, ಲಕ್ನೋ, 2025
  5. ಡೆವೊನ್ ಕಾನ್ವೇ vs ಪಂಜಾಬ್ ಕಿಂಗ್ಸ್, ಮುಲ್ಲನ್ಪುರ, 2025

Published On - 9:04 am, Wed, 9 April 25

ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ವಿಂಗ್ ಕಮಾಂಡರ್ ವಿರುದ್ಧ ಎಫ್​ಐಅರ್ ದಾಖಲಾಗಿದೆ: ಪರಮೇಶ್ವರ್
ವಿಂಗ್ ಕಮಾಂಡರ್ ವಿರುದ್ಧ ಎಫ್​ಐಅರ್ ದಾಖಲಾಗಿದೆ: ಪರಮೇಶ್ವರ್