
ಐಪಿಎಲ್ 2025 (IPL 2025) ರ ಪ್ರಯಾಣ ಕೊನೆಯ ಹಂತ ತಲುಪಿದೆ. ರಜತ್ ಪಾಟಿದಾರ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಪಂಜಾಬ್ ತಂಡವನ್ನು ಸೋಲಿಸುವ ಮೂಲಕ ಈಗಾಗಲೇ ಫೈನಲ್‌ಗೆ ಸ್ಥಾನ ಖಚಿತಪಡಿಸಿಕೊಂಡಿದೆ. ಮುಂಬೈ ಮತ್ತು ಪಂಜಾಬ್ (MI vs PBKS) ನಡುವಿನ ಎರಡನೇ ಕ್ವಾಲಿಫೈಯರ್ ಪಂದ್ಯವು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ಫೈನಲ್ನಲ್ಲಿ ಆರ್ಸಿಬಿ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಶಿಖರ್ ಧವನ್ (Shikhar Dhawan) ಒಂದು ದೊಡ್ಡ ಭವಿಷ್ಯ ನುಡಿದಿದ್ದಾರೆ.
‘ಇಂಡಿಯಾ ಟುಡೇ’ ಗೆ ನೀಡಿದ ಸಂದರ್ಶನದಲ್ಲಿ ಧವನ್, ಮುಂಬೈ ಇಂಡಿಯನ್ಸ್ ತಂಡವನ್ನು ಐಪಿಎಲ್ 2025 ರ ವಿಜೇತರನ್ನಾಗಿ ಆಯ್ಕೆ ಮಾಡಿದ್ದಾರೆ. ಮುಂಬೈ ಪ್ರಸ್ತುತ ಬಹಳ ಸಮತೋಲಿತ ಮತ್ತು ಬಲಿಷ್ಠ ತಂಡದಂತೆ ಕಾಣುತ್ತಿದೆ, ಸರಿಯಾದ ಸಮಯದಲ್ಲಿ ವೇಗವನ್ನು ಪಡೆದುಕೊಂಡಿದೆ. ಹೀಗಾಗಿ ನಾನು ಮುಂಬೈ ಇಂಡಿಯನ್ಸ್ ಚಾಂಪಿಯನ್ ಆಗುತ್ತದೆ ಎಂದು ಭಾವಿಸುತ್ತೇನೆ. ಇದು ತುಂಬಾ ಬಲಿಷ್ಠ ಮತ್ತು ಸಮತೋಲಿತ ತಂಡ ಎಂದಿದ್ದಾರೆ. ವಾಸ್ತವವಾಗಿ ಧವನ್ ಅವರ ಹೇಳಿಕೆ ಹಲವರಿಗೆ ಆಘಾತವನ್ನುಂಟು ಮಾಡಿದೆ. ಏಕೆಂದರೆ ಧವನ್ ಹಲವು ವರ್ಷಗಳಿಂದ ಪಂಜಾಬ್ ಪರ ಆಡಿದ್ದರು. ಹೀಗಾಗಿ ಧವನ್ ಪಂಜಾಬ್ ಪರ ಬ್ಯಾಟ್ ಬೀಸುತ್ತಾರೆ ಎಂದು ನಿರೀಕ್ಷಿಸಿದ್ದರು. ಆದರೆ ಧವನ್ ಮುಂಬೈ ಪರ ಬ್ಯಾಟ್ ಬೀಸಿದ್ದಾರೆ.
IPL 2025: ಮುಂಬೈ ವಿರುದ್ಧ ಟಾಸ್ ಗೆದ್ದ ಪಂಜಾಬ್; ಎರಡು ತಂಡಗಳಲ್ಲೂ ಒಂದೊಂದು ಬದಲಾವಣೆ
ಧವನ್ 2022 ರಿಂದ 2024 ರವರೆಗೆ ಪಂಜಾಬ್ ಕಿಂಗ್ಸ್ ಪರ ಆಡಿದ್ದರು, ಅಲ್ಲದೆ 17 ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದರು. ಆದಾಗ್ಯೂ ಧವನ್ ಅವರ ನಾಯಕತ್ವದಲ್ಲಿ ಪಂಜಾಬ್ ಕೇವಲ ಆರು ಪಂದ್ಯಗಳನ್ನು ಗೆದ್ದಿತು. ಇದೇ ವೇಳೆ ಗಾಯಗೊಂಡ ಧವನ್ ಅನೇಕ ಪಂದ್ಯಗಳಿಂದ ಹೊರಗುಳಿದಿದ್ದರು. ಅವರ ನಾಯಕತ್ವದಲ್ಲಿ ಪಂಜಾಬ್ ತಂಡ ಪ್ಲೇಆಫ್‌ಗೂ ತಲುಪಲಿಲ್ಲ. ಆದರೆ ವೈಯಕ್ತಿಕವಾಗಿ ಧವನ್ ಅವರ ಪ್ರದರ್ಶನ ಉತ್ತಮವಾಗಿತ್ತು. ಪಂಜಾಬ್ ಜೊತೆಗಿನ ಮೂರು ಸೀಸನ್ಗಳಲ್ಲಿ, ಧವನ್ 37.88 ರ ಸರಾಸರಿಯಲ್ಲಿ 985 ರನ್ ಗಳಿಸಿದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:57 pm, Sun, 1 June 25