IPL 2025: ಗುಜರಾತ್ ವಿರುದ್ಧ ಟಾಸ್ ಗೆದ್ದ ಮುಂಬೈ; ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ

Mumbai Indians vs Gujarat Titans Eliminator: ಐಪಿಎಲ್ 2025 ರ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಟೈಟನ್ಸ್ ತಂಡಗಳು ಭೇಟಿಯಾಗುತ್ತಿವೆ. ಪಾಯಿಂಟ್ಸ್ ಪಟ್ಟಿಯಲ್ಲಿ ಮೂರನೇ ಮತ್ತು ನಾಲ್ಕನೇ ಸ್ಥಾನದಲ್ಲಿರುವ ಈ ಎರಡು ತಂಡಗಳಿಗೆ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ. ಗೆಲ್ಲುವ ತಂಡ ಜೂನ್ 1 ರಂದು ನಡೆಯುವ ಎರಡನೇ ಕ್ವಾಲಿಫೈಯರ್‌ನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೆಣಸಾಡಲಿದೆ.

IPL 2025: ಗುಜರಾತ್ ವಿರುದ್ಧ ಟಾಸ್ ಗೆದ್ದ ಮುಂಬೈ; ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ
Gt Vs Mi

Updated on: May 30, 2025 | 7:24 PM

ಐಪಿಎಲ್ 2025 (IPL 2025) ರ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಇಂದು ಗುಜರಾತ್ ಟೈಟಾನ್ಸ್ ತಂಡವನ್ನು (MI vs GT) ಎದುರಿಸುತ್ತಿದೆ. ಪಾಯಿಂಟ್ ಪಟ್ಟಿಯಲ್ಲಿ ಗುಜರಾತ್ ಟೈಟಾನ್ಸ್ ಮೂರನೇ ಸ್ಥಾನದಲ್ಲಿದ್ದರೆ, ಮುಂಬೈ ನಾಲ್ಕನೇ ಸ್ಥಾನದಲ್ಲಿದೆ. ಆದ್ದರಿಂದ ಎರಡೂ ತಂಡಗಳು ಎಲಿಮಿನೇಟರ್ ಪಂದ್ಯವನ್ನು ಆಡುತ್ತಿವೆ. ಈ ಪಂದ್ಯದಲ್ಲಿ ಯಾವ ತಂಡ ಸೋತರೂ ಫೈನಲ್‌ಗೆ ಅರ್ಹತೆ ಪಡೆಯುವ ಅವಕಾಶದಿಂದ ಹೊರಗುಳಿಯುತ್ತದೆ. ಅದೇ ಸಮಯದಲ್ಲಿ, ಈ ಪಂದ್ಯವನ್ನು ಗೆಲ್ಲುವ ತಂಡವು ಜೂನ್ 1 ರಂದು ಎರಡನೇ ಕ್ವಾಲಿಫೈಯರ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಕ್ವಾಲಿಫೈಯರ್ -1 ರಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್ ಅನ್ನು 8 ವಿಕೆಟ್‌ಗಳಿಂದ ಸೋಲಿಸಿ ಫೈನಲ್‌ಗೆ ತಲುಪಿತು.

ಟಾಸ್ ಗೆದ್ದ ಮುಂಬೈ

ಎಲಿಮಿನೇಟರ್ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ. ಅಲ್ಲದೆ ತಂಡದಲ್ಲಿ ಪ್ರಮುಖವಾಗಿ 3 ಬದಲಾವಣೆಗಳಾಗಿದ್ದು ಜಾನಿ ಬೈರ್‌ಸ್ಟೋವ್, ರಿಚರ್ಡ್ ಗ್ಲೀಸನ್​ಗೆ ಚೊಚ್ಚಲ ಪಂದ್ಯವನ್ನಾಡುವ ಅವಕಾಶ ಸಿಕ್ಕಿದ್ದರೆ, ಇವರ ಜೊತೆಗೆ ರಾಜ್ ಅಂಗದ್ ಬಾವಾ ಕೂಡ ಮುಂಬೈ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅದೇ ಸಮಯದಲ್ಲಿ, ಗುಜರಾತ್ ಟೈಟನ್ಸ್ ನಾಯಕ ಶುಭಮನ್ ಗಿಲ್ ಆಡುವ 11 ರಲ್ಲಿ ಎರಡು ಬದಲಾವಣೆಗಳನ್ನು ಮಾಡಿದ್ದು, ಜೋಸ್ ಬಟ್ಲರ್ ಬದಲಿಗೆ ಕುಶಾಲ್ ಮೆಂಡಿಸ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಇವರಲ್ಲದೆ, ಅರ್ಷದ್ ಬದಲಿಗೆ ವಾಷಿಂಗ್ಟನ್ ಸುಂದರ್ ಅವರಿಗೆ ಅವಕಾಶ ಸಿಕ್ಕಿದೆ.

IPL 2025: ಆರ್‌ಸಿಬಿ ಚಾಂಪಿಯನ್ ಆಗದಿದ್ದರೆ ನಾನು ವಿಚ್ಛೇದನ ಪಡೆಯುತ್ತೇನೆ..! ಇದೆಂಥಾ ಅಭಿಮಾನ..?

ಎರಡೂ ತಂಡಗಳ ಪ್ಲೇಯಿಂಗ್ 11

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ನಮನ್ ಧೀರ್, ರಾಜ್ ಬಾವಾ, ಮಿಚೆಲ್ ಸ್ಯಾಂಟ್ನರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ, ರಿಚರ್ಡ್ ಗ್ಲೀಸನ್.

ಇಂಪ್ಯಾಕ್ಟ್ ಪ್ಲೇಯರ್: ಕೃಷ್ಣನ್ ಶ್ರೀಜಿತ್, ರಘು ಶರ್ಮಾ, ರಾಬಿನ್ ಮಿಂಜ್, ಅಶ್ವಿನಿ ಕುಮಾರ್, ರೀಸ್ ಟೋಪ್ಲಿ.

ಗುಜರಾತ್ ಟೈಟನ್ಸ್: ಶುಭ್​ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಶಾರುಖ್ ಖಾನ್, ವಾಷಿಂಗ್ಟನ್ ಸುಂದರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಸಾಯಿ ಕಿಶೋರ್, ಜೆರಾಲ್ಡ್ ಕೋಟ್ಜಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ಇಂಪ್ಯಾಕ್ಟ್ ಪ್ಲೇಯರ್: ಶೆರ್ಫೇನ್ ರುದರ್‌ಫೋರ್ಡ್, ಅನುಜ್ ರಾವತ್, ಮಹಿಪಾಲ್ ಲೊಮ್ರೋರ್, ಜಯಂತ್ ಯಾದವ್, ಅರ್ಷದ್ ಖಾನ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:23 pm, Fri, 30 May 25