RCB vs PBKS: ಟಾಸ್ ಗೆದ್ದ ತಂಡ ಆಯ್ಕೆ ಮಾಡುವುದೇನು?

IPL 2025 RCB vs PBKS Final: ಇಂಡಿಯನ್ ಪ್ರೀಮಿಯರ್ ಲೀಗ್​ನ ಮಹಾಸಮರಕ್ಕೆ ಕೌಂಟ್ ಡೌನ್ ಶುರುವಾಗಿದೆ. ಇಂದು ನಡೆಯಲಿರುವ ಐಪಿಎಲ್​ ಸೀಸನ್-18ರ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಸೆಣಸಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಚೊಚ್ಚಲ ಬಾರಿ ಚಾಂಪಿಯನ್​ ಪಟ್ಟ ಅಲಂಕರಿಸಲಿದೆ.

RCB vs PBKS: ಟಾಸ್ ಗೆದ್ದ ತಂಡ ಆಯ್ಕೆ ಮಾಡುವುದೇನು?
Rcb Vs Pbks

Updated on: Jun 03, 2025 | 11:30 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18ರ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಪಂಜಾಬ್ ಕಿಂಗ್ಸ್ (PBKS) ತಂಡಗಳು ಮುಖಾಮುಖಿಯಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟಾಸ್ ಕೂಡ ನಿರ್ಣಾಯಕ ಪಾತ್ರವಹಿಸಬಹುದು. ಏಕೆಂದರೆ ಈ ಮೈದಾನದಲ್ಲಿ ಈವರೆಗೆ 44 ಟಿ20 ಪಂದ್ಯಗಳನ್ನು ಆಡಲಾಗಿದೆ. ಈ ವೇಳೆ ಟಾಸ್ ಗೆದ್ದ ತಂಡಗಳ ಆಯ್ಕೆ ಏನಾಗಿತ್ತು? ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ..

ಅಹದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಈವರೆಗೆ 44 ಟಿ20 ಪಂದ್ಯಗಳನ್ನಾಡಲಾಗಿದೆ. 44 ಪಂದ್ಯಗಳಲ್ಲಿ 12 ತಂಡಗಳು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದೆ. ಈ ವೇಳೆ ಗೆದ್ದಿರುವುದು ಕೇವಲ 5 ಮ್ಯಾಚ್​ಗಳಲ್ಲಿ ಮಾತ್ರ. ಅಂದರೆ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ತಂಡ 7 ಪಂದ್ಯಗಳಲ್ಲಿ ಸೋಲನುಭವಿಸಿದೆ.

ಇನ್ನು 44 ಮ್ಯಾಚ್​ಗಳಲ್ಲಿ 32 ಪಂದ್ಯಗಳಲ್ಲಿ ಟಾಸ್ ಗೆದ್ದ ತಂಡ ಫೀಲ್ಡಿಂಗ್ ಆಯ್ದುಕೊಂಡ ಇತಿಹಾಸವಿದೆ. ಈ ವೇಳೆ ಚೇಸಿಂಗ್ ಮಾಡಿದ ತಂಡ 15 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು 16 ಪಂದ್ಯಗಳಲ್ಲಿ ಟಾಸ್ ಗೆದ್ದ ತಂಡ ಸೋತರೆ, ಒಂದು ಪಂದ್ಯವು ಟೈನಲ್ಲಿ ಅಂತ್ಯ ಕಂಡಿದೆ.

ಐಪಿಎಲ್ 2025 ರ ಟಾಸ್ ಫಲಿತಾಂಶ:

ಈ ಬಾರಿಯ ಐಪಿಎಲ್​ನಲ್ಲಿ ಅಹಮದಾಬಾದ್​ನಲ್ಲಿ ಒಟ್ಟು 8 ಪಂದ್ಯಗಳನ್ನಾಡಲಾಗಿದೆ. ಈ ವೇಳೆ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ತಂಡ ಗೆದ್ದಿರುವುದು ಕೇವಲ ಒಂದು ಮ್ಯಾಚ್ ಮಾತ್ರ. ಹಾಗೆಯೇ ಉಳಿದ 7 ಪಂದ್ಯಗಳಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿದ ತಂಡ 2 ಬಾರಿ ಮಾತ್ರ ಗೆಲುವು ದಾಖಲಿಸಿದೆ.

ಈ ಅಂಕಿ ಅಂಶಗಳ ಪ್ರಕಾರ, ಟಾಸ್ ಪ್ರಮುಖ ಪಾತ್ರವಹಿಸಲ್ಲ ಎಂದೆನಿಸಬಹುದು. ಆದರೆ ಈ ಬಾರಿಯ ಐಪಿಎಲ್​ನಲ್ಲಿ ಈ ಮೈದಾನದಲ್ಲಿ ಆಡಿದ 8 ಪಂದ್ಯಗಳಲ್ಲಿ ಮೊದಲು ಬ್ಯಾಟ್ ಮಾಡಿದ ತಂಡ 6 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ಚೇಸಿಂಗ್​ನಲ್ಲಿ 2 ತಂಡಗಳು ಮಾತ್ರ ಜಯ ಸಾಧಿಸಿದೆ.

ಅಂದರೆ ಇಲ್ಲಿ ಮೊದಲು ಬ್ಯಾಟ್ ಮಾಡಿದ ತಂಡಗಳ ಗೆಲುವಿನ ಸಂಖ್ಯೆ ಹೆಚ್ಚಿದೆ. ಹೀಗಾಗಿ ಫೈನಲ್ ಪಂದ್ಯದಲ್ಲಿ ಟಾಸ್ ಗೆಲ್ಲುವ ತಂಡ ಮೊದಲು ಬ್ಯಾಟಿಂಗ್​ ಮಾಡುವ ಸಾಧ್ಯತೆ ಹೆಚ್ಚು.

ಇದಾಗ್ಯೂ ಬೃಹತ್ ಮೊತ್ತ ಪೇರಿಸದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂಬುದಕ್ಕೆ ದ್ವಿತೀಯ ಕ್ವಾಲಿಫೈಯರ್ ಪಂದ್ಯದ ಫಲಿತಾಂಶ ಸಾಕ್ಷಿ. ಏಕೆಂದರೆ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದರೂ ಮುಂಬೈ ಇಂಡಿಯನ್ಸ್ ತಂಡ ಪಂಜಾಬ್ ಕಿಂಗ್ಸ್ ವಿರುದ್ಧ ಸೋಲನುಭವಿಸಿತು.

ಇದನ್ನೂ ಓದಿ: IPL 2025: ಫೈನಲ್ ಪಂದ್ಯಕ್ಕೂ ಮುನ್ನ RCB ತಂಡಕ್ಕೆ ಬಿಗ್ ಶಾಕ್: ಪ್ರಮುಖ ಆಟಗಾರ ಡೌಟ್

ಹೀಗಾಗಿ ಇಂದಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡುವ ತಂಡವು ಬೃಹತ್ ಮೊತ್ತ ಪೇರಿಸಬೇಕಾದ ಅನಿವಾರ್ಯತೆ ಇದೆ. ಇಲ್ಲದಿದ್ದರೆ ಚೇಸಿಂಗ್ ಟೀಮ್ ಬೆನ್ನತ್ತಿ ಗೆಲ್ಲುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

 

 

 

 

 

Published On - 11:05 am, Tue, 3 June 25