IPL 2025 Final: ‘ಈ ಸಲ ಕಪ್ ಆರ್‌ಸಿಬಿಗೆ’; ಫೈನಲ್ಗೂ ಮುನ್ನ ಸಟ್ಟಾ ಬಜಾರ್ ಭವಿಷ್ಯ
RCB vs PBKS IPL 2025 Final Prediction: ಐಪಿಎಲ್ 2025ರ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ. ಫಲೋಡಿ ಬಜಾರ್‌ನ ಭವಿಷ್ಯವಾಣಿಯ ಪ್ರಕಾರ, ಆರ್‌ಸಿಬಿ ಗೆಲ್ಲುವ ಸಾಧ್ಯತೆ ಹೆಚ್ಚು. ಆದರೆ ಪಂಜಾಬ್‌ನ ಗೆಲುವು ಕೂಡ ಆಶ್ಚರ್ಯವಲ್ಲ. ಎರಡೂ ತಂಡಗಳು ಉತ್ತಮ ಪ್ರದರ್ಶನ ನೀಡಿವೆ ಮತ್ತು ಫೈನಲ್‌ನಲ್ಲಿ ಯಾರು ಗೆಲ್ಲುತ್ತಾರೆ ಎಂಬುದು ಕುತೂಹಲಕಾರಿಯಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2025) 18 ನೇ ಸೀಸನ್ ಈಗ ಅಂತಿಮ ಹಂತಕ್ಕೆ ಬಂದಿ ನಿಂತಿದೆ. ಇಂದು ಅಂದರೆ ಜೂನ್ 3 ರ ಮಂಗಳವಾರ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲ್ಲಿರುವ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ (RCB vs PBKS) ಚೊಚ್ಚಲ ಪ್ರಶಸ್ತಿಗಾಗಿ ಹೋರಾಟ ನಡೆಸಲಿವೆ. ಎರಡೂ ತಂಡಗಳು ಕಳೆದ 17 ವರ್ಷಗಳಿಂದ ಒಮ್ಮೆಯೂ ಐಪಿಎಲ್ ಪ್ರಶಸ್ತಿ ಗೆದ್ದಿಲ್ಲ. ಹೀಗಾಗಿ ಉಭಯ ತಂಡಗಳಿಗೂ ಈ ಪಂದ್ಯ ಬಹಳ ಮುಖ್ಯವಾಗಿದೆ. ಇದೀಗ ಈ ಫೈನಲ್ ಪಂದ್ಯಕ್ಕೂ ಮುನ್ನ, ನಿಖರ ಭವಿಷ್ಯಕ್ಕೆ ಹೆಸರಾದ ರಾಜಸ್ಥಾನದ ಹೆಸರಾಂತ ಬೆಟ್ಟಿಂಗ್ ಬಜಾರ್, ಫಲೋಡಿ ಬಾಜಿ ಮಾರುಕಟ್ಟೆ (Satta Bazaar Projection), ಆರ್‌ಸಿಬಿ ಮತ್ತು ಪಂಜಾಬ್ ನಡುವೆ ಯಾವ ತಂಡ ಮೊದಲ ಬಾರಿಗೆ ಐಪಿಎಲ್ ಟ್ರೋಫಿಯನ್ನು ಎತ್ತಿ ಹಿಡಿಯುತ್ತದೆ ಎಂದು ಭವಿಷ್ಯ ನುಡಿದಿದೆ.
ಯಾವ ತಂಡಕ್ಕೆ ಚಾಂಪಿಯನ್ ಪಟ್ಟ?
ಫಲೋಡಿ ಸಟ್ಟಾ ಬಜಾರ್‌ನ ಭವಿಷ್ಯವಾಣಿಯ ಪ್ರಕಾರ, ಆರ್‌ಸಿಬಿ ಈ ವರ್ಷ ತನ್ನ ಮೊದಲ ಐಪಿಎಲ್ ಪ್ರಶಸ್ತಿಯನ್ನು ಗೆಲ್ಲಬಹುದು. ಆರ್‌ಸಿಬಿ ಈ ವರ್ಷ ಪಂಜಾಬ್ ವಿರುದ್ಧ ಆಡಿರುವ 3 ಪಂದ್ಯಗಳಲ್ಲಿ 2 ಪಂದ್ಯಗಳನ್ನು ಗೆದ್ದಿದ್ದು, ಫೈನಲ್ ಪಂದ್ಯವನ್ನು ಗೆಲ್ಲುವ ಸಾಧ್ಯತೆ ಹೆಚ್ಚು ಎಂದಿದೆ. ಆದಾಗ್ಯೂ, ಕೆಲವೊಮ್ಮೆ ಈ ರೀತಿಯ ಭವಿಷ್ಯವಾಣಿಗಳು ಸುಳ್ಳಾಗುವ ಸಾಧ್ಯತೆಗಳು ಇವೆ. ಅಂತಹ ಪರಿಸ್ಥಿತಿಯಲ್ಲಿ, ಪಂಜಾಬ್ ಈ ವರ್ಷ ತನ್ನ ಮೊದಲ ಐಪಿಎಲ್ ಪ್ರಶಸ್ತಿಯನ್ನು ಗೆದ್ದರೆ, ಅದು ಆಶ್ಚರ್ಯವೇನಿಲ್ಲ.
ಪಾಯಿಂಟ್ ಪಟ್ಟಿ ಲೆಕ್ಕಾಚಾರ
ಈ ಆವೃತ್ತಿಯಲ್ಲಿ ಆರ್‌ಸಿಬಿ ಮತ್ತು ಪಂಜಾಬ್‌ನ ಪ್ರದರ್ಶನ ಅತ್ಯುತ್ತಮವಾಗಿದೆ. ಗುಂಪು ಹಂತದಲ್ಲಿ ಪಂಜಾಬ್ ಅಗ್ರಸ್ಥಾನದಲ್ಲಿದ್ದರೆ, ಆರ್‌ಸಿಬಿ ಲೀಗ್ ಹಂತವನ್ನು ಎರಡನೇ ಸ್ಥಾನದಲ್ಲಿ ಮುಗಿಸಿತು. ಆದಾಗ್ಯೂ ಈ ಸೀಸನ್‌ನಲ್ಲಿ ಆರ್‌ಸಿಬಿ ತವರಿನ ಹೊರಗೆ ಆಡಿರುವ ಎಲ್ಲಾ ಪಂದ್ಯಗಳನ್ನು ಗೆದ್ದಿರುವುದರಿಂದ ಈ ಅಂಕಿ ಅಂಶ ಕೂಡ ಆರ್ಸಿಬಿಯ ಮನೋಬಲವನ್ನು ಹೆಚ್ಚಿಸಿದೆ. ಆದರೆ 2021 ರಲ್ಲಿ ಅಹಮದಾಬಾದ್‌ನಲ್ಲಿ ನಡೆದಿದ್ದ ಆರ್‌ಸಿಬಿ ಮತ್ತು ಪಂಜಾಬ್ ನಡುವಿನ ಮುಖಾಮುಖಿಯಲ್ಲಿ ಪಂಜಾಬ್ ಗೆಲುವು ಸಾಧಿಸಿತ್ತು. ಆದಾಗ್ಯೂ, ಕ್ವಾಲಿಫೈಯರ್ -1 ಪಂದ್ಯದಲ್ಲಿ ಆರ್‌ಸಿಬಿ ಪಂಜಾಬ್ ತಂಡವನ್ನು ಸೋಲಿಸಿರುವ ಕಾರಣ ಮಂಗಳವಾರ ಯಾವ ತಂಡ ಗೆಲ್ಲುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
ಆರ್‌ಸಿಬಿಗೆ ಅಂಕಿಅಂಶಗಳ ಬೆಂಬಲ; ಕ್ವಾಲಿಫೈಯರ್-1 ಗೆದ್ದ ತಂಡ ಎಷ್ಟು ಬಾರಿ ಚಾಂಪಿಯನ್ ಆಗಿದೆ ಗೊತ್ತಾ?
ಉಭಯ ತಂಡಗಳು
ಆರ್‌ಸಿಬಿ ಸಂಭಾವ್ಯ ಪ್ಲೇಯಿಂಗ್ XI: ವಿರಾಟ್ ಕೊಹ್ಲಿ , ಫಿಲಿಪ್ ಸಾಲ್ಟ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ, ಲಿಯಾಮ್ ಲಿವಿಂಗ್‌ಸ್ಟೋನ್/ ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಯಶ್ ದಯಾಲ್, ಜೋಶ್ ಹೇಜಲ್‌ವುಡ್, ಸುಯಶ್ ಶರ್ಮಾ.
ಇಂಪ್ಯಾಕ್ಟ್ ಪ್ಲೇಯರ್; ಮಯಾಂಕ್ ಅಗರ್ವಾಲ್
ಪಂಜಾಬ್ ಕಿಂಗ್ಸ್ ಸಂಭಾವ್ಯ ಪ್ಲೇಯಿಂಗ್ XI: ಪ್ರಿಯಾಂಶ್ ಆರ್ಯ, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ನಾಯಕ), ನೆಹಾಲ್ ವಧೇರಾ, ಮಾರ್ಕಸ್ ಸ್ಟೊಯಿನಿಸ್, ಶಶಾಂಕ್ ಸಿಂಗ್, ಅಜ್ಮತುಲ್ಲಾ ಓಮರ್ಜಾಯ್, ಕೈಲ್ ಜೇಮಿಸನ್, ವಿಜಯ್‌ಕುಮಾರ್ ವೈಶಾಕ್, ಅರ್ಷ್‌ದೀಪ್ ಸಿಂಗ್, ಯುಜ್ವೇಂದ್ರ ಚಾಹಲ್.
ಇಂಪ್ಯಾಕ್ಟ್ ಪ್ಲೇಯರ್; ಪ್ರಭ್ಸಿಮ್ರಾನ್ ಸಿಂಗ್
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
