IPL 2025: ಈ ಒಂದು ವಿಷಯದಲ್ಲಿ RCB ಗಿಂತ ಮುಂದಿದೆ ಪಂಜಾಬ್ ಕಿಂಗ್ಸ್
IPL 2025 RCB vs PBKS: ಇಂಡಿಯನ್ ಪ್ರೀಮಿಯರ್ ಲೀಗ್ನ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಣಕ್ಕಿಳಿಯಲಿವೆ. ಈ ಬಾರಿಯ ಐಪಿಎಲ್ನಲ್ಲಿ ಉಭಯ ತಂಡಗಳು ಮೂರು ಬಾರಿ ಮೂಖಾಮುಖಿಯಾಗಿದ್ದು, ಈ ವೇಳೆ 2 ಪಂದ್ಯಗಳಲ್ಲಿ ಆರ್ಸಿಬಿ ತಂಡ ಗೆಲುವು ದಾಖಲಿಸಿದೆ. ಇದಾಗ್ಯೂ ಅಹಮದಾಬಾದ್ನಲ್ಲಿ ಪಂಜಾಬ್ ಕಿಂಗ್ಸ್ ತಂಡ ಉತ್ತಮ ಪ್ರದರ್ಶನ ನೀಡಿದ ಇತಿಹಾಸವಿದೆ.

IPL 2025: ಐಪಿಎಲ್ ಸೀಸನ್-18ರ ಮಹಾಸಮರಕ್ಕೆ ಕ್ಷಣಗಣನೆ ಶುರುವಾಗಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಚೊಚ್ಚಲ ಟ್ರೋಫಿಗಾಗಿ ಸೆಣಸಲಿದೆ. ಈ ಪಂದ್ಯದಲ್ಲಿ ಗೆಲ್ಲುವ ಫೇವರೇಟ್ ತಂಡವಾಗಿ ಆರ್ಸಿಬಿ ತಂಡ ಗುರುತಿಸಿಕೊಂಡರೂ, ಈ ಒಂದು ವಿಷಯದಲ್ಲಿ ಪಂಜಾಬ್ ಕಿಂಗ್ಸ್ ಮೇಲುಗೈ ಹೊಂದಿದೆ.
ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈವರೆಗೆ 5 ಪಂದ್ಯಗಳನ್ನಾಡಿದೆ. ಈ ವೇಳೆ ಗೆದ್ದಿರುವುದು ಕೇವಲ 2 ಮ್ಯಾಚ್ಗಳಲ್ಲಿ ಮಾತ್ರ. ಅಂದರೆ ಮೂರು ಪಂದ್ಯಗಳಲ್ಲಿ ಆರ್ಸಿಬಿ ತಂಡ ಸೋಲನುಭವಿಸಿದೆ.
ಇದೇ ಮೈದಾನದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಈವರೆಗೆ 6 ಪಂದ್ಯಗಳನ್ನಾಡಿದೆ. ಈ ವೇಳೆ 4 ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೆ, 2 ಪಂದ್ಯಗಳಲ್ಲಿ ಮಾತ್ರ ಸೋಲನುಭವಿಸಿದೆ.
ಇನ್ನು ಅಹಮದಾಬಾದ್ ಪಿಚ್ನಲ್ಲಿ ಆರ್ಸಿಬಿ ಮತ್ತು ಪಂಜಾಬ್ ಕಿಂಗ್ಸ್ ಒಮ್ಮೆ ಮಾತ್ರ ಮುಖಾಮುಖಿಯಾಗಿದೆ. 2021ರ ನಡೆದ ಪಂದ್ಯದಲ್ಲಿ ಆರ್ಸಿಬಿ ತಂಡವನ್ನು ಪಂಜಾಬ್ ಕಿಂಗ್ಸ್ 34 ರನ್ಗಳಿಂದ ಸೋಲಿಸಿತ್ತು.
ಈ ಮೇಲಿನ ಅಂಕಿ ಅಂಶಗಳನ್ನು ಪರಿಗಣನೆಗೆ ತೆಗೆದುಕೊಂಡರೆ, ಅಹಮದಾಬಾದ್ ಪಿಚ್ನಲ್ಲಿ ಪಂಜಾಬ್ ಕಿಂಗ್ಸ್ ಮೇಲುಗೈ ಹೊಂದಿರುವುದು ಸ್ಪಷ್ಟ. ಅದರಲ್ಲೂ ಈ ಹಿಂದೆ ಆರ್ಸಿಬಿ ತಂಡಕ್ಕೆ ಸೋಲುಣಿಸಿದ ಇತಿಹಾಸವನ್ನು ಸಹ ಹೊಂದಿದ್ದಾರೆ.
ಹೀಗಾಗಿ ಫೈನಲ್ ಪಂದ್ಯದಲ್ಲಿ ಗೆಲ್ಲುವ ಫೇವರೇಟ್ ಆಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗುರುತಿಸಿಕೊಂಡರೂ, ಪಂಜಾಬ್ ಕಿಂಗ್ಸ್ ತಂಡದಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.
