
ಐಪಿಎಲ್ 2025 (IPL 2025) ರ ಫೈನಲ್ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ (RCB vs PBKS) ನಡುವೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪ್ರಾರಂಭವಾಗಿದೆ. ಇದರೊಂದಿಗೆ, ಮೂರು ವರ್ಷಗಳ ನಂತರ ಐಪಿಎಲ್ ಹೊಸ ಚಾಂಪಿಯನ್ ಅನ್ನು ಪಡೆಯಲಿದೆ. ಬೆಂಗಳೂರು ನಾಲ್ಕನೇ ಬಾರಿಗೆ ಫೈನಲ್ ಆಡುತ್ತಿದ್ದು, ಮೊದಲ ಬಾರಿಗೆ ಪ್ರಶಸ್ತಿಯನ್ನು ಗೆಲ್ಲುವ ಭರವಸೆ ಹೊಂದಿದೆ. ಇತ್ತ ಎರಡನೇ ಫೈನಲ್ ಆಡುತ್ತಿರುವ ಪಂಜಾಬ್, ಮೊದಲ ಬಾರಿಗೆ ಚಾಂಪಿಯನ್ ಆಗುವ ಕನಸಿನೊಂದಿಗೆ ಕಣಕ್ಕಿಳಿಯುತ್ತಿದೆ.
ಆರ್‌ಸಿಬಿ ವಿರುದ್ಧದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಆ ಬಳಿಕ ಪ್ಲೇಯಿಂಗ್ 11 ಬಗ್ಗೆ ಮಾತನಾಡಿದ ಶ್ರೇಯಸ್, ಕ್ವಾಲಿಫೈಯರ್ 2 ರಲ್ಲಿ ಕಣಕ್ಕಿಳಿಸಿದ್ದ ತಂಡವನ್ನೇ ಆಡಿಸುವುದಾಗಿ ಹೇಳಿದರು. ಇತ್ತ ಆರ್‌ಸಿಬಿ ಕೂಡ ಪ್ಲೇಯಿಂಗ್-11 ರಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ.
ಅಂದರೆ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾದ ಸ್ಫೋಟಕ ದಾಂಡಿಗ ಟಿಮ್ ಡೇವಿಡ್ ಆಡುತ್ತಾರೆ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಏಕೆಂದರೆ ಇಡೀ ಸೀಸನ್‌ನಲ್ಲಿ ಅವರ ಪ್ರದರ್ಶನ ಅಮೋಘವಾಗಿತ್ತು. ಕೆಳಕ್ರಮಾಂಕದಲ್ಲಿ ತಮ್ಮ ಹೊಡಿಬಡಿ ಆಟದ ಮೂಲಕ ಡೇವಿಡ್ ತಂಡವನ್ನು ಏಕಾಂಗಿಯಾಗಿ ಗೆಲುವಿನ ದಡ ಸೇರಿಸುವ ಕೆಲಸ ಮಾಡಿದ್ದರು. ಆದರೆ ಡೇವಿಡ್ ಇಂಜುರಿಯಿಂದ ಚೇತರಿಸಿಕೊಳ್ಳದ ಕಾರಣ ಅವರ ಬದಲಿಯಾಗಿ ಲಿಯಾಮ್ ಲಿವಿಂಗ್‌ಸ್ಟೋನ್ ಅವರೇ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ.
The Starting XIs of @RCBTweets and @PunjabKingsIPL for the #Final are locked in 🔒💪
Pick your match-winner 👇
Updates ▶ https://t.co/U5zvVhcvdo#TATAIPL | #RCBvPBKS | #TheLastMile pic.twitter.com/6rU2R6Gqsn
— IndianPremierLeague (@IPL) June 3, 2025
ಆರ್‌ಸಿಬಿ ಪ್ಲೇಯಿಂಗ್ XI: ವಿರಾಟ್ ಕೊಹ್ಲಿ , ಫಿಲಿಪ್ ಸಾಲ್ಟ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ, ಲಿಯಾಮ್ ಲಿವಿಂಗ್‌ಸ್ಟೋನ್/ ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಯಶ್ ದಯಾಲ್, ಜೋಶ್ ಹೇಜಲ್‌ವುಡ್, ಸುಯಶ್ ಶರ್ಮಾ.
ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ XI: ಪ್ರಿಯಾಂಶ್ ಆರ್ಯ, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ನಾಯಕ), ನೆಹಾಲ್ ವಧೇರಾ, ಮಾರ್ಕಸ್ ಸ್ಟೊಯಿನಿಸ್, ಶಶಾಂಕ್ ಸಿಂಗ್, ಅಜ್ಮತುಲ್ಲಾ ಓಮರ್ಜಾಯ್, ಕೈಲ್ ಜೇಮಿಸನ್, ವಿಜಯ್‌ಕುಮಾರ್ ವೈಶಾಕ್, ಅರ್ಷ್‌ದೀಪ್ ಸಿಂಗ್, ಯುಜ್ವೇಂದ್ರ ಚಾಹಲ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:15 pm, Tue, 3 June 25