IPL 2025: 11 ದ್ವಿಶತಕ… ಫೈನಲ್ ಪಂದ್ಯದಲ್ಲಿ ರನ್ ಸುರಿಮಳೆ ಖಚಿತ
IPL 2025 RCB vs PBKS: ಇಂಡಿಯನ್ ಪ್ರೀಮಿಯರ್ ಲೀಗ್ನ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಬೃಹತ್ ಮೊತ್ತ ಸ್ಕೋರ್ ಅನ್ನು ನಿರೀಕ್ಷಿಸಬಹುದು.

ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2025) ಫೈನಲ್ ಪಂದ್ಯದಲ್ಲಿ ರನ್ ಸುರಿಮಳೆಯಾಗುವುದು ಖಚಿತ. ಏಕೆಂದರೆ ಈ ಬಾರಿ ಅಹಮದಾಬಾದ್ನಲ್ಲಿ ಆಡಲಾದ 8 ಪಂದ್ಯಗಳಲ್ಲಿ 11 ದ್ವಿಶತಕಗಳ ಸ್ಕೋರ್ಗಳು ಮೂಡಿಬಂದಿವೆ. ಅದರಲ್ಲಿ ಅತ್ಯಧಿಕ ಸ್ಕೋರ್ ಗಳಿಸಿದ್ದು ಪಂಜಾಬ್ ಕಿಂಗ್ಸ್ ತಂಡ. ಅದೇ ಪಂಜಾಬ್ ಪಡೆಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎದುರಿಸುತ್ತಿದೆ.
ಅಹಮದಾಬಾದ್ನಲ್ಲಿ ಈ ಬಾರಿ ನಡೆದ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 243 ರನ್ ಕಲೆಹಾಕಿದರೆ, ಗುಜರಾತ್ ಟೈಟಾನ್ಸ್ 232 ರನ್ಗಳಿಸಿ ಸೋಲೊಪ್ಪಿಕೊಂಡಿತ್ತು.
ಇದೇ ಮೈದಾನದಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ತಂಡವು 196 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ 160 ರನ್ಗಳಿಸಲಷ್ಟೇ ಶಕ್ತರಾಗಿದ್ದರು.
ಅಹಮದಾಬಾದ್ ಸ್ಟೇಡಿಯಂನಲ್ಲಿ ನಡೆದ ಮೂರನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಕಲೆಹಾಕಿದ್ದು ಬರೋಬ್ಬರಿ 217 ರನ್ಗಳು. ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ 159 ರನ್ಗಳಿಗೆ ಆಲೌಟ್ ಆಗಿತ್ತು.
ಇನ್ನು ಈ ಮೈದಾನದಲ್ಲಿ ಆಡಲಾದ 4ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್ಗಳಲ್ಲಿ 203 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 19.2 ಓವರ್ಗಳಲ್ಲಿ 204 ರನ್ ಬಾರಿಸಿ ಜಯಗಳಿಸಿತು.
ಅಹಮದಾಬಾದ್ನಲ್ಲಿ ನಡೆದ 5ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಗುಜರಾತ್ ಟೈಟಾನ್ಸ್ 20 ಓವರ್ಗಳಲ್ಲಿ 224 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಸನ್ರೈಸರ್ಸ್ ಹೈದರಾಬಾದ್ 186 ರನ್ಗಳಿಸಲಷ್ಟೇ ಶಕ್ತರಾಗಿದ್ದರು.
ಈ ಮೈದಾನದಲ್ಲಿ ನಡೆದ ಆರನೇ ಮ್ಯಾಚ್ನಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ಕಲೆಹಾಕಿದ್ದು ಬರೋಬ್ಬರಿ 235 ರನ್ಗಳು. ಈ ಗುರಿಯನ್ನು ಚೇಸ್ ಮಾಡಿದ ಗುಜರಾತ್ ಟೈಟಾನ್ಸ್ 202 ರನ್ಗಳಿಸಿ ಸೋಲೊಪ್ಪಿಕೊಂಡಿದ್ದರು.
ಅಹಮದಾಬಾದ್ನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 230 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 147 ರನ್ಗಳಿಸಿ ಆಲೌಟ್ ಆಗಿತ್ತು.
ಇನ್ನು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್ಗಳಲ್ಲಿ 203 ರನ್ ಕಲೆಹಾಕಿದ್ದರು. ಈ ಗುರಿಯನ್ನು ಪಂಜಾಬ್ ಕಿಂಗ್ಸ್ ತಂಡವು 19 ಓವರ್ಗಳಲ್ಲಿ ಚೇಸ್ ಮಾಡಿದ್ದರು.
ಇದನ್ನೂ ಓದಿ: IPL 2025: ಫೈನಲ್ ಪಂದ್ಯಕ್ಕೂ ಮುನ್ನ RCB ತಂಡಕ್ಕೆ ಬಿಗ್ ಶಾಕ್: ಪ್ರಮುಖ ಆಟಗಾರ ಡೌಟ್
ಅಂದರೆ ಈ ಬಾರಿ ಅಹಮದಾಬಾದ್ನಲ್ಲಿ ಆಡಲಾದ 8 ಪಂದ್ಯಗಳಲ್ಲಿ 11 ಬಾರಿ 200+ ಸ್ಕೋರ್ ಮೂಡಿಬಂದಿವೆ. ಅದರಲ್ಲಿ ಬೃಹತ್ ಮೊತ್ತ ಪೇರಿಸಿದ ತಂಡಗಳು ರೋಚಕ ಜಯ ಸಾಧಿಸಿದೆ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವಣ ಫೈನಲ್ ಪಂದ್ಯದಲ್ಲೂ ಬೃಹತ್ ಮೊತ್ತದ ಸ್ಕೋರ್ ನಿರೀಕ್ಷಿಸಬಹುದು.
