AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025 GT vs MI: ಇಂದು ಗೆಲ್ಲುವ ತಂಡ ಫೈನಲ್​ಗೇರಲ್ಲ..!

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್​ನಲ್ಲಿ ಜಯ ಸಾಧಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಫೈನಲ್​ಗೆ ಪ್ರವೇಶಿಸಿದೆ. ಇನ್ನು ದ್ವಿತೀಯ ಕ್ವಾಲಿಫೈಯರ್​ ಅರ್ಹತೆಗಾಗಿ ಗುಜರಾತ್ ಟೈಟಾನ್ಸ್ ಹಾಗೂ ಮುಂಬೈ ಇಂಡಿಯನ್ಸ್ ಇಂದು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ.

IPL 2025 GT vs MI: ಇಂದು ಗೆಲ್ಲುವ ತಂಡ ಫೈನಲ್​ಗೇರಲ್ಲ..!
Mi Vs Gt
ಝಾಹಿರ್ ಯೂಸುಫ್
|

Updated on:May 30, 2025 | 12:59 PM

Share

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಎಲಿಮಿನೇಟರ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಚಂಡೀಗಢ್​ನ ನ್ಯೂ ಪಿಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ನಿರ್ಣಾಯಕವಾಗಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ನೇರವಾಗಿ ಫೈನಲ್​ಗೆ ಪ್ರವೇಶಿಸಲ್ಲ ಎಂಬುದು ವಿಶೇಷ.

ಅಂದರೆ ಇಂದಿನ ಪಂದ್ಯದಲ್ಲಿ ಜಯಗಳಿಸುವ ತಂಡವು ದ್ವಿತೀಯ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಪಡೆಯಲಿದೆ. ಇನ್ನು ಸೋತ ತಂಡ ಟೂರ್ನಿಯಿಂದ ಹೊರಬೀಳಲಿದೆ. ಹೀಗಾಗಿ ಇಂದಿನ ಪಂದ್ಯವು ಉಭಯ ತಂಡಗಳ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ.

ಫೈನಲ್​ಗೇರುವುದು ಹೇಗೆ?

ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ತಂಡವು ದ್ವಿತೀಯ ಕ್ವಾಲಿಫೈಯರ್​ ಪಂದ್ಯಕ್ಕೆ ಅರ್ಹತೆ ಪಡೆಯಲಿದೆ. ಜೂನ್ 1 ರಂದು ನಡೆಯಲಿರುವ ದ್ವಿತೀಯ ಕ್ವಾಲಿಫೈಯರ್​ನಲ್ಲಿ ಈಗಾಗಲೇ ಪಂಜಾಬ್ ಕಿಂಗ್ಸ್ ತಂಡವಿದೆ. ಅಂದರೆ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋತಿರುವ ಪಂಜಾಬ್ ಕಿಂಗ್ಸ್​ಗೆ ಮತ್ತೊಂದು ಅವಕಾಶವಿದೆ.

ಅದರಂತೆ ದ್ವಿತೀಯ ಕ್ವಾಲಿಫೈಯರ್​ನಲ್ಲಿ ಮೊದಲ ಕ್ವಾಲಿಫೈಯರ್​ನಲ್ಲಿ ಸೋತ ಪಂಜಾಬ್ ಕಿಂಗ್ಸ್ ಹಾಗೂ ಎಲಿಮಿನೇಟರ್ ಪಂದ್ಯದಲ್ಲಿ ಗೆಲ್ಲುವ ತಂಡಗಳು ಮುಖಾಮುಖಿಯಾಗಲಿದೆ.

ಅಂದರೆ ದ್ವಿತೀಯ ಕ್ವಾಲಿಫೈಯರ್​ನಲ್ಲಿ ಪಂಜಾಬ್ ಕಿಂಗ್ಸ್ ಎದುರಾಳಿಯಾಗಿ ಮುಂಬೈ ಇಂಡಿಯನ್ಸ್ ಅಥವಾ ಗುಜರಾತ್ ಟೈಟಾನ್ಸ್ ಕಾಣಿಸಿಕೊಳ್ಳುವುದು ಖಚಿತ.

ಇನ್ನು ದ್ವಿತೀಯ ಕ್ವಾಲಿಫೈಯರ್​ನಲ್ಲಿ ಗೆಲ್ಲುವ ತಂಡ ಫೈನಲ್​ಗೆ ಪ್ರವೇಶಿಸಲಿದೆ. ಒಂದು ವೇಳೆ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಜಯ ಸಾಧಿಸಿದರೆ, ಆರ್​ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ನಡುವೆ ಫೈನಲ್ ಪಂದ್ಯ ಏರ್ಪಡಲಿದೆ.

ಗುಜರಾತ್ ಟೈಟಾನ್ಸ್ – ಮುಂಬೈ ಇಂಡಿಯನ್ಸ್ ಮುಖಾಮುಖಿ:

ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಈವರೆಗೆ 7 ಬಾರಿ ಮುಖಾಮುಖಿಯಾಗಿವೆ. ಈ ವೇಳೆ 5 ಪಂದ್ಯಗಳಲ್ಲಿ ಗುಜರಾತ್ ಟೈಟಾನ್ಸ್ ತಂಡ ಗೆಲುವು ದಾಖಲಿಸಿದೆ. ಇನ್ನು 2 ಬಾರಿ ಮಾತ್ರ ಮುಂಬೈ ಇಂಡಿಯನ್ಸ್ ತಂಡ ಜಯ ಸಾಧಿಸಿದೆ. ಅಂದರೆ ಇಲ್ಲಿ ಅಂಕಿ ಅಂಶಗಳ ಪ್ರಕಾರ ಗುಜರಾತ್ ಟೈಟಾನ್ಸ್ ಮೇಲುಗೈ ಹೊಂದಿದೆ.

ಇದನ್ನೂ ಓದಿ: IPL 2025: ಫೈನಲ್ ಪಂದ್ಯಕ್ಕೂ ಮುನ್ನ RCB ಅಭಿಮಾನಿಗಳಿಗೆ ಗುಡ್ ನ್ಯೂಸ್

ಇದಾಗ್ಯೂ ನಿರ್ಣಾಯಕ ಪಂದ್ಯಗಳಲ್ಲಿ ಒತ್ತಡ ಮೀರಿ ಆಡುವಲ್ಲಿ ಮುಂಬೈ ಇಂಡಿಯನ್ಸ್ ಹೆಸರುವಾಸಿ. ಹೀಗಾಗಿ ಇಂದಿನ ಪಂದ್ಯದಲ್ಲೂ ಉಭಯ ತಂಡಗಳಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

Published On - 12:58 pm, Fri, 30 May 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ