
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನ ಎಲಿಮಿನೇಟರ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಚಂಡೀಗಢ್ನ ನ್ಯೂ ಪಿಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ನಿರ್ಣಾಯಕವಾಗಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ನೇರವಾಗಿ ಫೈನಲ್ಗೆ ಪ್ರವೇಶಿಸಲ್ಲ ಎಂಬುದು ವಿಶೇಷ.
ಅಂದರೆ ಇಂದಿನ ಪಂದ್ಯದಲ್ಲಿ ಜಯಗಳಿಸುವ ತಂಡವು ದ್ವಿತೀಯ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಪಡೆಯಲಿದೆ. ಇನ್ನು ಸೋತ ತಂಡ ಟೂರ್ನಿಯಿಂದ ಹೊರಬೀಳಲಿದೆ. ಹೀಗಾಗಿ ಇಂದಿನ ಪಂದ್ಯವು ಉಭಯ ತಂಡಗಳ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ.
ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ತಂಡವು ದ್ವಿತೀಯ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಪಡೆಯಲಿದೆ. ಜೂನ್ 1 ರಂದು ನಡೆಯಲಿರುವ ದ್ವಿತೀಯ ಕ್ವಾಲಿಫೈಯರ್ನಲ್ಲಿ ಈಗಾಗಲೇ ಪಂಜಾಬ್ ಕಿಂಗ್ಸ್ ತಂಡವಿದೆ. ಅಂದರೆ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋತಿರುವ ಪಂಜಾಬ್ ಕಿಂಗ್ಸ್ಗೆ ಮತ್ತೊಂದು ಅವಕಾಶವಿದೆ.
ಅದರಂತೆ ದ್ವಿತೀಯ ಕ್ವಾಲಿಫೈಯರ್ನಲ್ಲಿ ಮೊದಲ ಕ್ವಾಲಿಫೈಯರ್ನಲ್ಲಿ ಸೋತ ಪಂಜಾಬ್ ಕಿಂಗ್ಸ್ ಹಾಗೂ ಎಲಿಮಿನೇಟರ್ ಪಂದ್ಯದಲ್ಲಿ ಗೆಲ್ಲುವ ತಂಡಗಳು ಮುಖಾಮುಖಿಯಾಗಲಿದೆ.
ಅಂದರೆ ದ್ವಿತೀಯ ಕ್ವಾಲಿಫೈಯರ್ನಲ್ಲಿ ಪಂಜಾಬ್ ಕಿಂಗ್ಸ್ ಎದುರಾಳಿಯಾಗಿ ಮುಂಬೈ ಇಂಡಿಯನ್ಸ್ ಅಥವಾ ಗುಜರಾತ್ ಟೈಟಾನ್ಸ್ ಕಾಣಿಸಿಕೊಳ್ಳುವುದು ಖಚಿತ.
ಇನ್ನು ದ್ವಿತೀಯ ಕ್ವಾಲಿಫೈಯರ್ನಲ್ಲಿ ಗೆಲ್ಲುವ ತಂಡ ಫೈನಲ್ಗೆ ಪ್ರವೇಶಿಸಲಿದೆ. ಒಂದು ವೇಳೆ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಜಯ ಸಾಧಿಸಿದರೆ, ಆರ್ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ನಡುವೆ ಫೈನಲ್ ಪಂದ್ಯ ಏರ್ಪಡಲಿದೆ.
ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಈವರೆಗೆ 7 ಬಾರಿ ಮುಖಾಮುಖಿಯಾಗಿವೆ. ಈ ವೇಳೆ 5 ಪಂದ್ಯಗಳಲ್ಲಿ ಗುಜರಾತ್ ಟೈಟಾನ್ಸ್ ತಂಡ ಗೆಲುವು ದಾಖಲಿಸಿದೆ. ಇನ್ನು 2 ಬಾರಿ ಮಾತ್ರ ಮುಂಬೈ ಇಂಡಿಯನ್ಸ್ ತಂಡ ಜಯ ಸಾಧಿಸಿದೆ. ಅಂದರೆ ಇಲ್ಲಿ ಅಂಕಿ ಅಂಶಗಳ ಪ್ರಕಾರ ಗುಜರಾತ್ ಟೈಟಾನ್ಸ್ ಮೇಲುಗೈ ಹೊಂದಿದೆ.
ಇದನ್ನೂ ಓದಿ: IPL 2025: ಫೈನಲ್ ಪಂದ್ಯಕ್ಕೂ ಮುನ್ನ RCB ಅಭಿಮಾನಿಗಳಿಗೆ ಗುಡ್ ನ್ಯೂಸ್
ಇದಾಗ್ಯೂ ನಿರ್ಣಾಯಕ ಪಂದ್ಯಗಳಲ್ಲಿ ಒತ್ತಡ ಮೀರಿ ಆಡುವಲ್ಲಿ ಮುಂಬೈ ಇಂಡಿಯನ್ಸ್ ಹೆಸರುವಾಸಿ. ಹೀಗಾಗಿ ಇಂದಿನ ಪಂದ್ಯದಲ್ಲೂ ಉಭಯ ತಂಡಗಳಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.
Published On - 12:58 pm, Fri, 30 May 25