IPL 2025: ಟಾಸ್ ಗೆದ್ದ ಗುಜರಾತ್; ಉಭಯ ತಂಡಗಳಲ್ಲೂ ಒಂದೊಂದು ಬದಲಾವಣೆ
SRH vs GT Playing 11: ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ, ಗುಜರಾತ್ ಟೈಟಾನ್ಸ್ ನಾಯಕ ಶುಭ್‌ಮನ್ ಗಿಲ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಹಾಗಾಗೆ ಸನ್‌ರೈಸರ್ಸ್ ಹೈದರಾಬಾದ್ ಮೊದಲು ಬ್ಯಾಟಿಂಗ್ ಮಾಡಲಿದೆ. ಕಳೆದ ಪಂದ್ಯದಿಂದ ಆಡುವ 11 ರ ಬಳಗದಲ್ಲಿ ಎರಡೂ ತಂಡಗಳು ತಲಾ ಒಂದು ಬದಲಾವಣೆ ಮಾಡಿವೆ.

ಐಪಿಎಲ್ 2025 (IPL 2025) ರ 19ನೇ ಪಂದ್ಯ ಗುಜರಾತ್ ಟೈಟನ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ (Sunrisers Hyderabad vs Gujarat Titans) ನಡುವೆ ನಡೆಯುತ್ತಿದೆ. ಶುಭ್‌ಮನ್ ಗಿಲ್ ನಾಯಕತ್ವದ ಗುಜರಾತ್ ಟೈಟನ್ಸ್, ಕಳಪೆ ಆರಂಭದ ನಂತರ ಮತ್ತೆ ಗೆಲುವಿನ ಲಯಕ್ಕೆ ಮರಳಿದೆ. ಮೊದಲ ಪಂದ್ಯದಲ್ಲಿ ಸೋತ ನಂತರ, ಟೈಟನ್ಸ್ ಮುಂದಿನ ಎರಡು ಪಂದ್ಯಗಳಲ್ಲಿ ಅಮೋಘ ಗೆಲುವು ಸಾಧಿಸಿತು. ಆದರೆ ಮೂರನೇ ಪಂದ್ಯದಲ್ಲಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಆಟಗಾರನನ್ನು ನಾಯಕ ಶುಭ್‌ಮನ್ ಮುಂದಿನ ಪಂದ್ಯದಿಂದ ಕೈಬಿಟ್ಟಿದ್ದಾರೆ. ಈ ಸೀಸನ್ನ ತನ್ನ ನಾಲ್ಕನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ, ಗುಜರಾತ್ ಆಡುವ ಹನ್ನೊಂದರ ಬಳಗದಲ್ಲಿ ಒಂದು ಬದಲಾವಣೆಯನ್ನು ಮಾಡಿದ್ದು, ಕಳೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ವಿಕೆಟ್ ಪಡೆದಿದ್ದ ಬೌಲರ್ ಅನ್ನು ಈ ಪಂದ್ಯದಿಂದ ಕೈಬಿಡಲಾಗಿದೆ.
ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ
ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. ಈ ಪಂದ್ಯದಲ್ಲಿ ಗುಜರಾತ್ ತಂಡದ ಪರ ವಾಷಿಂಗ್ಟನ್ ಸುಂದರ್ ಚೊಚ್ಚಲ ಪಂದ್ಯವನ್ನು ಆಡಲಿದ್ದಾರೆ. ಅಂದರೆ ಗುಜರಾತ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಕಳೆದ ಪಂದ್ಯದಲ್ಲಿ ಕೊಹ್ಲಿ ವಿಕೆಟ್ ಉರುಳಿಸಿದ್ದ ಅರ್ಷದ್ ಖಾನ್ ಅವರನ್ನು ಈ ಪಂದ್ಯದಿಂದ ಹೊರಗಿಡಲಾಗಿದೆ. ಅದೇ ಸಮಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದಲ್ಲೂ ಬದಲಾವಣೆ ಮಾಡಲಾಗಿದ್ದು ಹರ್ಷಲ್ ಪಟೇಲ್ ಬದಲಿಗೆ ಜಯದೇವ್ ಉನಾದ್ಕಟ್ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ.
🚨 Toss 🚨@gujarat_titans won the toss and opted to bowl first against @SunRisers
Updates ▶ https://t.co/Y5Jzfr6Vv4#TATAIPL | #SRHvGT pic.twitter.com/NSQEVcAiRt
— IndianPremierLeague (@IPL) April 6, 2025
ಉಭಯ ತಂಡಗಳು
ಸನ್‌ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ನಿತೀಶ್ ಕುಮಾರ್ ರೆಡ್ಡಿ, ಅನಿಕೇತ್ ವರ್ಮಾ, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಕಮಿಂದು ಮೆಂಡಿಸ್, ಪ್ಯಾಟ್ ಕಮಿನ್ಸ್ (ನಾಯಕ), ಹರ್ಷಲ್ ಪಟೇಲ್, ಸಿಮರ್‌ಜೀತ್ ಸಿಂಗ್, ಮೊಹಮ್ಮದ್ ಶಮಿ, ಜೀಶನ್ ಅನ್ಸಾರಿ.
SRH vs GT Live Score, IPL 2025: ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ
ಗುಜರಾತ್ ಟೈಟಾನ್ಸ್: ಸಾಯಿ ಸುದರ್ಶನ್, ಶುಭ್‌ಮನ್ ಗಿಲ್ (ನಾಯಕ), ಜೋಸ್ ಬಟ್ಲರ್ (ವಿಕೆಟ್ ಕೀಪರ್), ಶಾರುಖ್ ಖಾನ್, ರಾಹುಲ್ ತೆವಾಟಿಯಾ, ಅರ್ಷದ್ ಖಾನ್, ರಶೀದ್ ಖಾನ್, ಆರ್ ಸಾಯಿ ಕಿಶೋರ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಇಶಾಂತ್ ಶರ್ಮಾ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:27 pm, Sun, 6 April 25