
ಐಪಿಎಲ್ 2025 (IPL 2025) ರ 64 ನೇ ಪಂದ್ಯ ಗುರುವಾರ ಗುಜರಾತ್ ಟೈಟನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ (GT vs LSG) ನಡುವೆ ನಡೆಯುತ್ತಿದೆ. ಈ ಪಂದ್ಯ ಲಕ್ನೋ ತಂಡಕ್ಕೆ ಕೇವಲ ಔಪಚಾರಿಕವಾಗಿದ್ದರೆ, ಗುಜರಾತ್ ತಂಡಕ್ಕೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಮುಂದುವರೆಯಲು ಅತ್ಯಂತ ಮಹತ್ವದಾಗಿದೆ. ಹೀಗಾಗಿ ಗೆಲ್ಲಲೇಬೇಕಾದ ಒತ್ತಡದೊಂದಿಗೆ ಗಿಲ್ ಪಡೆ ಕಣಕ್ಕಿಳಿದಿದೆ. ಇದು ಮಾತ್ರವಲ್ಲದೆ ಈ ಪಂದ್ಯದಲ್ಲಿ ಗುಜರಾತ್ ತಂಡದ ಜೆರ್ಸಿ ಕೂಡ ಬದಲಾಗಿದೆ. ಸಾಮಾನ್ಯವಾಗಿ ಗುಜರಾತ್ ತಂಡ ನೀಲಿ ಜೆರ್ಸಿಯನ್ನು ಧರಿಸಿ ಆಡುತ್ತದೆ. ಆದರೆ ಲಕ್ನೋ ವಿರುದ್ಧ ಗುಜರಾತ್ ತಂಡ ಲ್ಯಾವೆಂಡರ್ ಬಣ್ಣದ ಜೆರ್ಸಿ ಧರಿಸಿ ಆಡುತ್ತಿದೆ.
ಗುಜರಾತ್ ತಂಡ ತನ್ನ ಜೆರ್ಸಿಯನ್ನು ಬದಲಿಸುವ ಹಿಂದಿರುವ ಕಾರಣವೆಂದರೆ, ಸಾಮಾಜಿಕ ಕಳಕಳಿ. ವಾಸ್ತವವಾಗಿ ಮಾರಕ ಕಾಯಿಲೆ ಕ್ಯಾನ್ಸರ್ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಗುಜರಾತ್ ತಂಡ ಇಂದು ಲ್ಯಾವೆಂಡರ್ ಬಣ್ಣದ ಜೆರ್ಸಿಯನ್ನು ಧರಿಸಿ ಆಡುತ್ತಿದೆ. ಇನ್ನು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯ ಆರಂಭಕ್ಕೂ ಮುನ್ನ ಕ್ರೀಡಾಂಗಣದಲ್ಲಿ ರಾಷ್ಟ್ರಗೀತೆ ನುಡಿಸಲಾಯಿತು. ಭಾರತೀಯ ಸೈನಿಕರಿಗೆ ಗೌರವಾರ್ಥವಾಗಿ ರಾಷ್ಟ್ರಗೀತೆ ನುಡಿಸಲಾಯಿತು. ಇದಕ್ಕೂ ಮೊದಲು, ರಾಜಸ್ಥಾನ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯಗಳಲ್ಲಿಯೂ ರಾಷ್ಟ್ರಗೀತೆ ನುಡಿಸಲಾಗಿತ್ತು.
ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟನ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಲಕ್ನೋ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ. ಇನ್ನು ಉಭಯ ತಂಡಗಳ ಆಡುವ 11 ರ ಬಳಗದ ಬಗ್ಗೆ ಹೇಳುವುದಾದರೆ, ಗುಜರಾತ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆದರೆ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಆಕಾಶ್ ದೀಪ್ ತಂಡಕ್ಕೆ ಮರಳಿದ್ದಾರೆ.
Rohit Sharma: ಐಪಿಎಲ್ ನಂತರ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ರೋಹಿತ್ ಶರ್ಮಾ
ಲಕ್ನೋ ಸೂಪರ್ ಜೈಂಟ್ಸ್: ಮಿಚೆಲ್ ಮಾರ್ಷ್, ಐಡೆನ್ ಮಾರ್ಕ್ರಾಮ್, ನಿಕೋಲಸ್ ಪೂರನ್, ರಿಷಭ್ ಪಂತ್ (ನಾಯಕ), ಆಯುಷ್ ಬಡೋನಿ, ಅಬ್ದುಲ್ ಸಮದ್, ಹಿಮ್ಮತ್ ಸಿಂಗ್, ಶಹಬಾಜ್ ಅಹ್ಮದ್, ಆಕಾಶ್ ದೀಪ್, ಅವೇಶ್ ಖಾನ್, ವಿಲಿಯಂ ಓ’ರೂರ್ಕ್.
ಗುಜರಾತ್ ಟೈಟನ್ಸ್: ಶುಭ್ಮನ್ ಗಿಲ್ (ನಾಯಕ), ಜೋಸ್ ಬಟ್ಲರ್ (ವಿಕೆಟ್ ಕೀಪರ್), ಶೆರ್ಫೇನ್ ರುದರ್‌ಫೋರ್ಡ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಅರ್ಷದ್ ಖಾನ್, ಸಾಯಿ ಕಿಶೋರ್, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:09 pm, Thu, 22 May 25