Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಕೆಎಲ್ ರಾಹುಲ್ ಹೊರಬಿದ್ದ ಬೆನ್ನಲ್ಲೇ ‘ಪವರ್’ ಪಡೆದ LSG​

IPL 2025: ಐಪಿಎಲ್ ಸೀಸನ್-17 ರಲ್ಲಿ ಕೆಎಲ್ ರಾಹುಲ್ ಮುಂದಾಳತ್ವದಲ್ಲಿ ಕಣಕ್ಕಿಳಿದಿದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಪವರ್​ಪ್ಲೇನಲ್ಲಿ ಒಮ್ಮೆಯೂ 60 ಕ್ಕಿಂತ ಹೆಚ್ಚು ರನ್ ಗಳಿಸಿರಲಿಲ್ಲ. ಆದರೆ ಈ ಬಾರಿ LSG ಬ್ಯಾಟರ್​ಗಳು ಮೊದಲ ಪಂದ್ಯದಲ್ಲೇ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಅದರಲ್ಲೂ ಆರಂಭಿಕನಾಗಿ ಕಣಕ್ಕಿಳಿದ ಮಿಚೆಲ್ ಮಾರ್ಷ್ ಅಬ್ಬರಿಸಿ ಬೊಬ್ಬರಿದಿದ್ದಾರೆ.

IPL 2025: ಕೆಎಲ್ ರಾಹುಲ್ ಹೊರಬಿದ್ದ ಬೆನ್ನಲ್ಲೇ 'ಪವರ್' ಪಡೆದ LSG​
Kl Rahul - LSG
Follow us
ಝಾಹಿರ್ ಯೂಸುಫ್
|

Updated on:Mar 25, 2025 | 10:53 AM

ಲಕ್ನೋ ಸೂಪರ್ ಜೈಂಟ್ಸ್ (LSG) ತಂಡವು ಇಂಡಿಯನ್ ಪ್ರೀಮಿಯರ್ ಲೀಗ್​ಗೆ (IPL) ಎಂಟ್ರಿ ಕೊಟ್ಟು ಮೂರು ವರ್ಷಗಳು ಕಳೆದಿವೆ. ಈ ಮೂರು ವರ್ಷಗಳಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಒಟ್ಟು 44 ಪಂದ್ಯಗಳನ್ನಾಡಿತ್ತು. ಈ ನಲವತ್ತ ನಾಲ್ಕು ಪಂದ್ಯಗಳಲ್ಲಿ LSG ಪವರ್​ಪ್ಲೇನಲ್ಲಿ ಪವರ್​ ತೋರಿಸಿದ್ದು ಕೇವಲ 4 ಬಾರಿ ಮಾತ್ರ ಎಂದರೆ ನಂಬಲೇಬೇಕು.

ಅಂದರೆ ಲಕ್ನೋ ಸೂಪರ್ ಜೈಂಟ್ಸ್ ಕಳೆದ 44 ಪಂದ್ಯಗಳಲ್ಲಿ ಪವರ್​ಪ್ಲೇನಲ್ಲಿ 60 ಕ್ಕಿಂತ ಹೆಚ್ಚು ರನ್ ಕಲೆಹಾಕಿದ್ದು ಕೇವಲ 4 ಬಾರಿ ಮಾತ್ರ. ಅದರಲ್ಲೂ ಕಳೆದ ಸೀಸನ್​ನಲ್ಲಿ LSG ಒಮ್ಮೆಯೂ ಮೊದಲ 6 ಓವರ್​ಗಳಲ್ಲಿ 60 ಕ್ಕಿಂತ ಹೆಚ್ಚು ರನ್​ ಗಳಿಸಿರಲಿಲ್ಲ ಎಂಬುದೇ ಅಚ್ಚರಿ.

ಆದರೆ ಈ ಬಾರಿ ಎಲ್ಲವೂ ಬದಲಾದಂತೆ ತೋರುತ್ತಿದೆ. ಏಕೆಂದರೆ ಐಪಿಎಲ್ 2025ರ ಮೊದಲ ಪಂದ್ಯದಲ್ಲೇ ಲಕ್ನೋ ಸೂಪರ್ ಜೈಂಟ್ಸ್ ಬ್ಯಾಟರ್​ಗಳು ಅಬ್ಬರಿಸಿದ್ದಾರೆ.

ಇದನ್ನೂ ಓದಿ
Image
RCBಯಲ್ಲಿ ಬ್ರಿಟಿಷ್ ಪಡೆ... ಸೋತು ಸುಣ್ಣವಾಗಲಿದೆ ಎಂದ ಗಿಲ್​ಕ್ರಿಸ್ಟ್
Image
IPL 2025: ಐಪಿಎಲ್​ ಕಣದಲ್ಲಿದ್ದಾರೆ 13 ಕನ್ನಡಿಗರು
Image
IPL 2025: ಬ್ಯಾನ್ ಬ್ಯಾನ್ ಬ್ಯಾನ್... ಐಪಿಎಲ್ ಆಟಗಾರರಿಗೆ ಬ್ಯಾನ್ ಭೀತಿ
Image
IPL 2025: ಐಪಿಎಲ್​ನಲ್ಲಿ 10 ನಿಮಯಗಳು ಬದಲಾವಣೆ

ವಿಶಾಖಪಟ್ಟಣದ ವೈಎಸ್​ಆರ್​ ಸ್ಟೇಡಿಯಂನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಮೊದಲ ಪಂದ್ಯದ ಮೊದಲ 6 ಓವರ್​ಗಳಲ್ಲೇ ಲಕ್ನೋ ಸೂಪರ್ ಜೈಂಟ್ಸ್ ಬ್ಯಾಟರ್​ಗಳು 64 ರನ್ ಚಚ್ಚಿದ್ದಾರೆ. ಈ ಮೂಲಕ ಕಳೆದ ಸೀಸನ್​ನಲ್ಲಿ LSG ಪಾಲಿಗೆ ಮರೀಚಿಕೆಯಾಗಿದ್ದ ಸ್ಪೋಟಕ ಆರಂಭವನ್ನು ಈ ಬಾರಿ ಮೊದಲ ಪಂದ್ಯದಲ್ಲೇ ಮರಳಿ ಪಡೆದಿದ್ದಾರೆ.

ಕೆಎಲ್ ರಾಹುಲ್ ಔಟ್: ಬದಲಾದ LSG

ಕಳೆದ ಮೂರು ಸೀಸನ್​ಗಳಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಆರಂಭಿಕನಾಗಿ ಕೆಎಲ್ ರಾಹುಲ್ ಕಾಣಿಸಿಕೊಂಡಿದ್ದರು. ಕೆಎಲ್​ಆರ್​ ಅವರ ನಿಧಾನಗತಿಯ ಬ್ಯಾಟಿಂಗ್ LSG ಪಾಲಿಗೆ ಹಲವು ಬಾರಿ ತೊಡಕಾಗಿ ಪರಿಣಮಿಸಿತ್ತು.

ಆದರೆ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ಕೆಎಲ್ ರಾಹುಲ್ ಅವರನ್ನು ತಂಡದಿಂದ ಕೈ ಬಿಟ್ಟಿದ್ದಾರೆ. ಅಲ್ಲದೆ ರಿಷಭ್ ಪಂತ್ ಅವರನ್ನು ನಾಯಕನಾಗಿ ಆಯ್ಕೆ ಮಾಡಿ ಹೊಸ ತಂಡವನ್ನೇ ಕಟ್ಟಿದೆ. ಇದೀಗ ಹೊಸ ಪಡೆಯೊಂದಿಗೆ ಕಣಕ್ಕಿಳಿದಿರುವ ಲಕ್ನೋ ಸೂಪರ್ ಜೈಂಟ್ಸ್ ಮೊದಲ ಪಂದ್ಯದಲ್ಲೇ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದೆ.

ಅದರಂತೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಲಕ್ನೋ ಪರ ಆರಂಭಿಕರಾಗಿ ಕಣಕ್ಕಿಳಿದ ಮಿಚೆಲ್ ಮಾರ್ಷ್ ಹಾಗೂ ಐಡೆನ್ ಮಾರ್ಕ್ರಾಮ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಮೊದಲ 6 ಓವರ್​ಗಳಲ್ಲೇ 10ರ ಸರಾಸರಿಯಲ್ಲಿ ರನ್ ಕಲೆಹಾಕಿದೆ. ಇನ್ನು 10 ಓವರ್​ಗಳ ಮುಕ್ತಾಯದ ವೇಳೆಗೆ ಲಕ್ನೋ ಸೂಪರ್ ಜೈಂಟ್ಸ್ ಬ್ಯಾಟರ್​ಗಳು 117 ರನ್ ಬಾರಿಸಿದ್ದರು ಎಂಬುದು ವಿಶೇಷ. ಅಂದರೆ ಪವರ್​ಪ್ಲೇ ಬಳಿಕ ಕೂಡ LSG ಬ್ಯಾಟ್ಸ್​ಮನ್ ಸಿಡಿಲಬ್ಬರ ಮುಂದುವರೆಸಿದ್ದರು. ಅಲ್ಲದೆ ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ 20 ಓವರ್​ಗಳಲ್ಲಿ 209 ರನ್ ಕಲೆಹಾಕಿತು.

ಇದನ್ನೂ ಓದಿ: David Warner: ಡೇವಿಡ್ ವಾರ್ನರ್​ಗೆ ಒಲಿದ ನಾಯಕತ್ವ..!

ಅಂದರೆ ಲಕ್ನೋ ಸೂಪರ್ ಜೈಂಟ್ಸ್ ಸ್ಪೋಟಕ ಆರಂಭದೊಂದಿಗೆ ಹೊಸ ಅಧ್ಯಾಯವನ್ನು ಶುರು ಮಾಡಿರುವುದು ಸ್ಪಷ್ಟ.  ಈ ಸಿಡಿಲಬ್ಬರ ಮುಂದಿನ ಪಂದ್ಯಗಳಲ್ಲೂ ಮುಂದುವರೆದರೆ ಈ ಬಾರಿ ಉಳಿದ ತಂಡಗಳ ಪಾಲಿಗೆ LSG ಕೂಡ ಕಬ್ಬಿಣದ ಕಡಲೆಯಾಗಿ ಪರಿಣಮಿಸಲಿದೆ.

ಅಬ್ಬರಿಸಿದರೂ ಸೋತ ಲಕ್ನೋ ಪಡೆ:

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಬ್ಯಾಟಿಂಗ್​ನಲ್ಲಿ ಮಿಂಚಿದ್ದ ಲಕ್ನೋ ಸೂಪರ್ ಜೈಂಟ್ಸ್ ಬೌಲಿಂಗ್​ನಲ್ಲೂ ಗಮನ  ಸೆಳೆದಿದ್ದರು. ಆದರೆ ಅಂತಿಮ ಓವರ್​ಗಳ ವೇಳೆ ಅಬ್ಬರಿಸುವ ಮೂಲಕ ಅಶುತೋಷ್ ಶರ್ಮಾ (66) ಲಕ್ನೋ ತಂಡದತ್ತ ಸಾಗಿದ್ದ ಜಯಲಕ್ಷ್ಮಿಯನ್ನು ಡೆಲ್ಲಿ ಕ್ಯಾಪಿಟಲ್ಸ್ ಪರ ವಾಲುವಂತೆ ಮಾಡಿದ್ದರು. ಪರಿಣಾಮ 19.3 ಓವರ್​ಗಳಲ್ಲಿ 210 ರನ್​ಗಳನ್ನು ಚೇಸ್ ಮಾಡಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 1 ವಿಕೆಟ್​ನ ರೋಚಕ ಜಯ ಸಾಧಿಸಿತು.

Published On - 10:53 am, Tue, 25 March 25

ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?