IPL 2025: ಈ ಸಲನೂ RCB ಕಪ್ ಗೆಲ್ಲದಿರಲಿ, ಅದಕ್ಕಾಗಿ ನಾನು ಪ್ರಾರ್ಥಿಸುವೆ..!

IPL 2025: ಐಪಿಎಲ್​ 2025 ಮಾರ್ಚ್ 22 ರಿಂದ ಆರಂಭವಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಫೈನಲ್ ಪಂದ್ಯವು ಮೇ 25 ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಜರುಗಲಿದೆ.

IPL 2025: ಈ ಸಲನೂ RCB ಕಪ್ ಗೆಲ್ಲದಿರಲಿ, ಅದಕ್ಕಾಗಿ ನಾನು ಪ್ರಾರ್ಥಿಸುವೆ..!
Rcb - Ambati Rayudu

Updated on: Mar 10, 2025 | 1:54 PM

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ಕ್ಕೆ ದಿನಗಣನೆ ಶುರುವಾಗಿದೆ. ಮಾರ್ಚ್ 22 ರಿಂದ ಆರಂಭವಾಗಲಿರುವ ಪ್ರತಿಷ್ಠಿತ ಟೂರ್ನಿಗಾಗಿ ಈಗಾಗಲೇ ಬಹುತೇಕ ತಂಡಗಳು ಸಿದ್ಧತೆಗಳನ್ನು ಶುರು ಮಾಡಿಕೊಂಡಿದೆ. ಇನ್ನು ಕೆಲವೇ ದಿನಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕ್ಯಾಂಪ್ ಕೂಡ ಆರಂಭವಾಗಲಿದೆ. ಈ ಮೂಲಕ ಆರ್​ಸಿಬಿ ಪಡೆ ಚೊಚ್ಚಲ ಟ್ರೋಫಿಗಾಗಿ ಯೋಜನೆ ರೂಪಿಸಲಿದ್ದಾರೆ. ಆದರೆ ಟೂರ್ನಿ ಆರಂಭಕ್ಕೂ ಮುನ್ನವೇ ಆರ್​ಸಿಬಿ ಕಪ್ ಗೆಲ್ಲದಿರಲಿ ಎಂದು ಬಯಸಿದ್ದಾರೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು.

ಪೋಡ್​ ಕಾಸ್ಟ್​ವೊಂದರಲ್ಲಿ ಮಾತನಾಡಿದ ಅಂಬಾಟಿ ರಾಯುಡು, ಆರ್​ಸಿಬಿ ತಂಡವು ಒಂದು ದಿನ ಕಪ್ ಗೆಲ್ಲಬಹುದು ಎಂದು ನಾನು ಭಾವಿಸುತ್ತೇನೆ. ಆದರೆ ಈ ವರ್ಷ ಅವರು ಕಪ್ ಗೆಲ್ಲದಿರಲಿ ಎಂದು ನಾನು ಆಶಿಸುತ್ತೇನೆ ಮತ್ತು ಪ್ರಾರ್ಥಿಸುತ್ತೇನೆ ಎಂದು ಬಹಿರಂಗವಾಗಿಯೇ ಹೇಳಿದ್ದಾರೆ.

ನನ್ನ ಪ್ರಕಾರ ಈ ಚೆನ್ನೈ ಸೂಪರ್ ಕಿಂಗ್ಸ್ ಗೆಲ್ಲಬೇಕು. ಮಹೇಂದ್ರ ಸಿಂಗ್ ಧೋನಿ ಅವರಿಗೆ ಇದು ಕೊನೆಯ ಐಪಿಎಲ್ ಆಗಬಹುದು. ಹೀಗಾಗಿ ನಾನು ಚೆನ್ನೈ ಸೂಪರ್ ಕಿಂಗ್ಸ್ ಚಾಂಪಿಯನ್ ಪಟ್ಟ ಅಲಂಕರಿಸಲಿ ಎಂದು ಆಶಿಸುತ್ತೇನೆ ಎಂದು ರಾಯುಡು ಹೇಳಿದ್ದಾರೆ.

ಇದನ್ನೂ ಓದಿ
ವಿರಾಟ್ ಕೊಹ್ಲಿಗೆ 100 ಕೋಟಿ ರೂ: ಶುಭ್​ಮನ್ ಗಿಲ್​ಗೆ ಎಷ್ಟು?
VIDEO: ಅಳುತ್ತಿದ್ದ ಅಭಿಮಾನಿಯನ್ನು ಸಮಾಧಾನ ಮಾಡಿದ ಕೆಎಲ್ ರಾಹುಲ್
ನಾನು ಹೊಡೀತಿದ್ದೆ ಅಲ್ವಾ... ವಿರಾಟ್ ಕೊಹ್ಲಿ ಮುಂದೆ ಕೆಎಲ್ ರಾಹುಲ್ ಹತಾಶೆ
Virat Kohli: ಮಾಸ್ಟರ್ ಚೇಸ್ ಮಾಸ್ಟರ್​ನ ವಿಶ್ವ ದಾಖಲೆ

ಕಳೆದ ಸೀಸನ್​ನಲ್ಲೂ ಅಂಬಾಟಿ ರಾಯುಡು ಇಂತಹದ್ದೇ ಹೇಳಿಕ ನೀಡಿದ್ದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರದರ್ಶನದ ಬಗ್ಗೆ ಮಾತನಾಡಿದ್ದ ರಾಯುಡು, ಆರ್​ಸಿಬಿ ತಂಡದ್ದು ಯಾವಾಗಲೂ ಇದೇ ಪರಿಸ್ಥಿತಿ. ಅವರು ಎಂದಿಗೂ ಒತ್ತಡವನ್ನು ಮೀರಿ ಪಂದ್ಯವಾಡಿಲ್ಲ. ತಂಡದ ಅಗ್ರಸ್ಥಾನದಲ್ಲಿರುವ ಪ್ರಮುಖ ಆಟಗಾರರು ಎಂದಿಗೂ ಉತ್ತಮ ಪ್ರದರ್ಶನ ನೀಡುವುದಿಲ್ಲ. ಇದುವೇ ಆರ್​ಸಿಬಿ ಸೋಲಿಗೆ ಕಾರಣವಾಗುತ್ತಿದೆ. ಹೀಗಾಗಿಯೇ ಅವರು ಈವರೆಗೆ ಕಪ್ ಗೆದ್ದಿಲ್ಲ ಎಂದು ವ್ಯಂಗ್ಯವಾಡಿದ್ದರು.

ಇದೀಗ ಈ ಸಲ ಆರ್​ಸಿಬಿ ಕಪ್ ಗೆಲ್ಲದಿರಲಿ ಎಂದು ಪ್ರಾರ್ಥಿಸುವುದಾಗಿ ಅಂಬಾಟಿ ರಾಯುಡು ಬಹಿರಂಗವಾಗಿ ಹೇಳಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರನ ಈ ಹೇಳಿಕೆಗೆ ಆರ್​ಸಿಬಿ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಐಪಿಎಲ್ ಯಾವಾಗ ಶುರು?

ಇಂಡಿಯನ್ ಪ್ರೀಮಿಯರ್ ಲೀಗ್​ನ 18ನೇ ಆವೃತ್ತಿಯು ಮಾರ್ಚ್ 22 ರಿಂದ ಆರಂಭವಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಮಾರ್ಚ್ 23 ರಂದು ನಡೆಯಲಿರುವ 3ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಕಣಕ್ಕಿಳಿಯಲಿದೆ. ಇನ್ನು ಫೈನಲ್ ಪಂದ್ಯವು ಮೇ 25 ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಜರುಗಲಿದೆ.

Published On - 1:53 pm, Mon, 10 March 25