MS Dhoni: ಧೋನಿಗೆ ಗಾಯ: ಮತ್ತೆ ಬದಲಾಗುತ್ತಾ CSK ನಾಯಕ

IPL 2025 MS Dhoni: ಈ ಬಾರಿಯ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ರುತುರಾಜ್ ಗಾಯಕ್ವಾಡ್ ಅವರ ಮುಂದಾಳತ್ವದಲ್ಲಿ ಕಣಕ್ಕಿಳಿದಿತ್ತು. ಆದರೆ ಮೊಣಕೈ ಮೂಳೆ ಮುರಿತಕ್ಕೊಳಗಾಗಿರುವ ಕಾರಣ ರುತುರಾಜ್ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ. ಇದೀಗ ಸಿಎಸ್​ಕೆ ತಂಡವನ್ನು ಮುನ್ನಡೆಸುತ್ತಿರುವ ಮಹೇಂದ್ರ ಸಿಂಗ್ ಧೋನಿ ಕೂಡ ಗಾಯಗೊಂಡಿದ್ದಾರೆ.

MS Dhoni: ಧೋನಿಗೆ ಗಾಯ: ಮತ್ತೆ ಬದಲಾಗುತ್ತಾ CSK ನಾಯಕ
M S Dhoni

Updated on: Apr 16, 2025 | 11:31 AM

ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ (MS Dhoni) ಗಾಯದಿಂದ ಬಳಲುತ್ತಿದ್ದಾರಾ? ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಸದ್ಯ ವೈರಲ್ ಆಗಿರುವ ವಿಡಿಯೋ. ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧದ ಪಂದ್ಯದ ಬಳಿಕ ಹೋಟೆಲ್​ನಲ್ಲಿ ಕಾಣಿಸಿಕೊಂಡಿದ್ದ ಧೋನಿ ಕುಂಟುತ್ತಾ ಸಾಗುತ್ತಿರುವುದು ಕಂಡು ಬಂದಿದೆ. ಇದರ ಬೆನ್ನಲ್ಲೇ ಸಿಎಸ್​ಕೆ ನಾಯಕ ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಈಗಾಗಲೇ ಗಾಯದ ಕಾರಣ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಹೀಗಾಗಿ ಸಿಎಸ್​ಕೆ ತಂಡವನ್ನು ಮಹೇಂದ್ರ ಸಿಂಗ್ ಧೋನಿ ಮುನ್ನಡೆಸುತ್ತಿದ್ದಾರೆ. ಇದೀಗ ಅವರು ಸಹ ಗಾಯಗೊಂಡಿರುವುದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಭಿಮಾನಿಗಳ ಚಿಂತೆ ಹೆಚ್ಚಿದೆ.

ಗೆಲುವು ತಂದುಕೊಟ್ಟ ಧೋನಿ:

ಈ ಬಾರಿಯ ಐಪಿಎಲ್​ನ ಮೊದಲ ಪಂದ್ಯದಲ್ಲಿ ಸಿಎಸ್​ಕೆ ಜಯ ಸಾಧಿಸಿತ್ತು. ಇದಾದ ಬಳಿಕ ಸತತ 5 ಪಂದ್ಯಗಳಲ್ಲಿ ಚೆನ್ನೈ ಪಡೆ ಮುಗ್ಗರಿಸಿದೆ. ಈ ಸೋಲಿನ ಸುಳಿಯಿಂದ ಸಿಎಸ್​ಕೆ ತಂಡವನ್ನು ಕೊನೆಗೂ ಮಹೇಂದ್ರ ಸಿಂಗ್ ಧೋನಿ ಪಾರು ಮಾಡಿದ್ದಾರೆ.

ಇದನ್ನೂ ಓದಿ
PSL 2025: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ RCB ಮಾಜಿ ಆಟಗಾರರು
ಪ್ರಿಯಾಂಶ್ ಆರ್ಯನ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್
ಕ್ರಿಸ್​ ಗೇಲ್ ದಾಖಲೆ ಜಸ್ಟ್ ಮಿಸ್: ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
ಉಲ್ಟಾ ಹೊಡೆದ RCB ಕಪ್ ಗೆಲ್ಲಬಾರದು ಎಂದಿದ್ದ ಅಂಬಾಟಿ ರಾಯುಡು

ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ನಾಯಕರಾಗಿ ಕಣಕ್ಕಿಳಿದ ಧೋನಿ ನಿರ್ಣಾಯಕ ಹಂತದಲ್ಲಿ 11 ಎಸೆತಗಳಲ್ಲಿ 26 ರನ್ ಬಾರಿಸಿದ್ದಾರೆ. ಈ ಮೂಲಕ ಎಲ್​ಎಸ್​ಜಿ ವಿರುದ್ಧ ಸಿಎಸ್​ಕೆ ತಂಡಕ್ಕೆ 5 ವಿಕೆಟ್​ಗಳ ಜಯ ತಂದುಕೊಟ್ಟಿದ್ದಾರೆ.

ಈ ಗೆಲುವಿನೊಂದಿಗೆ ಮಹೇಂದ್ರ ಸಿಂಗ್ ಧೋನಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಸಹ ಪಡೆದಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ಅತ್ಯಂತ ಹಿರಿಯ ಆಟಗಾರ ಎಂಬ ದಾಖಲೆಯನ್ನು 43 ವರ್ಷದ ಧೋನಿ ತಮ್ಮದಾಗಿಸಿಕೊಂಡಿದ್ದಾರೆ.

ಧೋನಿ ಕುಂಟುತ್ತಾ ಸಾಗುತ್ತಿರುವ ವಿಡಿಯೋ:

ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಜಯದೊಂದಿಗೆ ಗೆಲುವಿನ ಲಯಕ್ಕೆ ಮರಳಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಇದೀಗ ಮಹೇಂದ್ರ ಸಿಂಗ್ ಧೋನಿಯ ಗಾಯದ ಚಿಂತೆ ಎದುರಾಗಿದೆ. ಸಿಎಸ್​ಕೆ ತಂಡವು ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 20 ರಂದು ಮುಂಬೈ ಇಂಡಿಯನ್ಸ್ ವಿರುದ್ದ ಆಡಲಿದೆ.

ಇದನ್ನೂ ಓದಿ: VIDEO: ಮೋಸದಾಟಕ್ಕೆ ಮುಂದಾಗಿ ಸಿಕ್ಕಿಬಿದ್ದ ಸುನಿಲ್ ನರೈನ್, ಆ್ಯಂಡ್ರೆ ರಸೆಲ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಐಪಿಎಲ್​ನ ದ್ವಿತೀಯಾರ್ಧವನ್ನು ಆರಂಭಿಸಲಿದೆ. ಇದೀಗ ಗಾಯಗೊಂಡಿರುವ ಈ ಧೋನಿ ಈ ಪಂದ್ಯಕ್ಕೆ ಲಭ್ಯರಿರಲಿದ್ದಾರೆ ಎಂಬುದಕ್ಕೆ ಶೀಘ್ರದಲ್ಲೇ ಉತ್ತರ ದೊರೆಯಲಿದೆ.