Jofra Archer: ನಿದ್ರೆಯಿಂದ ಎದ್ದು ಬಂದು ಪಂಜಾಬ್ ಕಿಂಗ್ಸ್ಗೆ ಡಬಲ್ ಶಾಕ್ ನೀಡಿದ ಜೋಫ್ರಾ ಆರ್ಚರ್
IPL 2025 PBKS vs RR: ಚಂಢೀಗಢ್ನ ಮುಲ್ಲನ್ಪುರ್ನಲ್ಲಿ ನಡೆದ ಐಪಿಎಲ್ನ 18ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ 205 ರನ್ ಕಲೆಹಾಕಿದರೆ, ಪಂಜಾಬ್ ಕಿಂಗ್ಸ್ ತಂಡವು 155 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡವು 50 ರನ್ಗಳ ಜಯ ಸಾಧಿಸಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನ 18ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ವಿರುದ್ಧ ರಾಜಸ್ಥಾನ್ ರಾಯಲ್ಸ್ (RR) ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿ ಆರ್ಆರ್ ವೇಗಿ ಜೋಫ್ರಾ ಆರ್ಚರ್ (Jofra Archer). ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ಉತ್ತಮ ಆರಂಭ ಪಡೆದಿತ್ತು.
ಈ ಉತ್ತಮ ಆರಂಭದ ಹೊರತಾಗಿಯೂ ರಾಜಸ್ಥಾನ್ ರಾಯಲ್ಸ್ ತಂಡದ ಬ್ಯಾಟಿಂಗ್ ನೋಡಲು ಜೋಫ್ರಾ ಆರ್ಚರ್ ಮುಂದಾಗಿರಲಿಲ್ಲ. ಬದಲಾಗಿ ಡ್ರೆಸ್ಸಿಂಗ್ ರೂಮ್ನಲ್ಲಿ ಗಾಢ ನಿದ್ರೆಗೆ ಜಾರಿದ್ದರು. ರಾಜಸ್ಥಾನ್ ರಾಯಲ್ಸ್ ತಂಡದ ಇನಿಂಗ್ಸ್ ವೇಳೆ ನಿದ್ದೆಯಲ್ಲೇ ಕಳೆದ ಆರ್ಚರ್ ಆ ಬಳಿಕ ಎದ್ದು ಬಂದು ಪಂಜಾಬ್ ಕಿಂಗ್ಸ್ಗೆ ಆಘಾತ ನೀಡಿದ್ದು ವಿಶೇಷ.
ಮೊದಲ ಓವರ್ನಲ್ಲೇ ಡಬಲ್ ಆಘಾತ:
ರಾಜಸ್ಥಾನ್ ರಾಯಲ್ಸ್ ಇನಿಂಗ್ಸ್ ಮುಗಿಯುತ್ತಿದ್ದಂತೆ ನಿದ್ರೆಯಿಂದ ಎದ್ದ ಜೋಫ್ರಾ ಆರ್ಚರ್ ರಾಜಸ್ಥಾನ್ ರಾಯಲ್ಸ್ ಪರ ಮೊದಲ ಓವರ್ ಎಸೆದಿದ್ದರು. ಈ ಮೊದಲ ಓವರ್ನ ಮೊದಲ ಎಸೆತದಲ್ಲೇ ಪ್ರಿಯಾಂಶ್ ಆರ್ಯ (0) ಅವರನ್ನು ಕ್ಲೀನ್ ಬೌಲ್ಡ್ ಮಾಡಿದ್ದರು.
ಇದಾದ ಬಳಿಕ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ (10) ಅವರನ್ನು ಸಹ ಬೌಲ್ಡ್ ಮಾಡಿ ಪೆವಿಲಿಯನ್ಗೆ ಕಳುಹಿಸಿದ್ದರು. ಈ ಮೂಲಕ ಜೋಫ್ರಾ ಆರ್ಚರ್ ಮೊದಲ ಓವರ್ನಲ್ಲೇ ಪಂಜಾಬ್ ಪಡೆಗೆ ಡಬಲ್ ಆಘಾತ ನೀಡಿದ್ದರು.
Jofra Archer literally woke up & chose violence 👊
WHAT. AN. OVER. 🔥#IPLonJioStar 👉 #PBKSvRR | LIVE NOW on Star Sports Network & JioHotstar! pic.twitter.com/UbRvQ76nxG
— Star Sports (@StarSportsIndia) April 5, 2025
ಆ ಬಳಿಕ ಕೂಡ ಉತ್ತಮ ದಾಳಿ ಸಂಘಟಿಸಿದ ಜೋಫ್ರಾ ಆರ್ಚರ್ 4 ಓವರ್ಗಳಲ್ಲಿ ಕೇವಲ 25 ರನ್ ನೀಡಿ 3 ವಿಕೆಟ್ ಕಬಳಿಸಿದರು. ಈ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಸಹ ತಮ್ಮದಾಗಿಸಿಕೊಂಡರು.
ಜೋಫ್ರಾ ಆರ್ಚರ್ ಬೌಲಿಂಗ್ ವಿಡಿಯೋ:
Archer on 🎯
Jofra Archer’s double timber-strike gives #RR a dream start 💥
Updates ▶ https://t.co/kjdEJydDWe#TATAIPL | #PBKSvRR | @JofraArcher | @rajasthanroyals pic.twitter.com/CfLjvlCC6L
— IndianPremierLeague (@IPL) April 5, 2025
ಗೆದ್ದು ಬೀಗಿದ ರಾಜಸ್ಥಾನ್ ರಾಯಲ್ಸ್:
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ಪರ ಯಶಸ್ವಿ ಜೈಸ್ವಾಲ್ (67) ಅರ್ಧಶತಕ ಬಾರಿಸಿದರೆ, ರಿಯಾನ್ ಪರಾಗ್ ಅಜೇಯ 43 ರನ್ ಸಿಡಿಸಿದರು. ಈ ಭರ್ಜರಿ ಬ್ಯಾಟಿಂಗ್ ನೆರವಿನಿಂದ ರಾಜಸ್ಥಾನ್ ರಾಯಲ್ಸ್ ತಂಡವು 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 205 ರನ್ ಕಲೆಹಾಕಿತು.
ಇದನ್ನೂ ಓದಿ: IPL 2025: ಸೋಲಿನ ಬೆನ್ನಲ್ಲೇ ಕಣ್ಣೀರಿಟ್ಟ ಹಾರ್ದಿಕ್ ಪಾಂಡ್ಯ
ಈ ಕಠಿಣ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ನೇಹಾಲ್ ವಧೇರಾ (62) ಅರ್ಧಶತಕ ಬಾರಿಸಿ ಮಿಂಚಿದ್ದರು. ಆದರೆ ಉಳಿದ ಬ್ಯಾಟರ್ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬರದ ಕಾರಣ ಪಂಜಾಬ್ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 155 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ 50 ರನ್ಗಳಿಂದ ಸೋಲೊಪ್ಪಿಕೊಂಡಿತು.