AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jos Buttler: ಹೌ ಇಸ್ ದಿ ಜೋಸ್: RCB ಬೌಲರ್​ಗಳನ್ನು ಸದಾ ಬೆಂಡೆತ್ತುವ ಬಟ್ಲರ್

IPL 2025 RCB vs GT: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ 39 ಎಸೆತಗಳನ್ನು ಎದುರಿಸಿದ ಜೋಸ್ ಬಟ್ಲರ್ 6 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ ಅಜೇಯ 73 ರನ್ ಬಾರಿಸಿದ್ದರು. ಈ ಸ್ಪೋಟಕ ಅರ್ಧಶತಕದ ನೆರವಿನಿಂದ ಗುಜರಾತ್ ಟೈಟಾನ್ಸ್ ತಂಡವು 17.5 ಓವರ್​ಗಳಲ್ಲಿ 170 ರನ್ ಬಾರಿಸಿ 8 ವಿಕೆಟ್​ಗಳ ಜಯ ಸಾಧಿಸಿದೆ.

Jos Buttler: ಹೌ ಇಸ್ ದಿ ಜೋಸ್: RCB ಬೌಲರ್​ಗಳನ್ನು ಸದಾ ಬೆಂಡೆತ್ತುವ ಬಟ್ಲರ್
Jos Buttler
Follow us
ಝಾಹಿರ್ ಯೂಸುಫ್
|

Updated on: Apr 03, 2025 | 10:56 AM

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಗುಜರಾತ್ ಟೈಟಾನ್ಸ್ ತಂಡವು ಜಯಭೇರಿ ಬಾರಿಸಿದೆ. ಈ ಗೆಲುವಿನ ರೂವಾರಿಗಳೆಂದರೆ ಮೊಹಮ್ಮದ್ ಸಿರಾಜ್ ಹಾಗೂ ಜೋಸ್ ಬಟ್ಲರ್ (Jos Buttler). ಬೌಲಿಂಗ್​ನಲ್ಲಿ ಸಿರಾಜ್ ಪರಾಕ್ರಮ ಮರೆದರೆ ಬ್ಯಾಟಿಂಗ್​ನಲ್ಲಿ ಜೋಸ್ ಬಟ್ಲರ್ ಜೋಶ್ ತೋರಿಸಿದ್ದರು. ವಿಶೇಷ ಎಂದರೆ ಆರ್​ಸಿಬಿ ವಿರುದ್ಧ ಜೋಸ್ ಬಟ್ಲರ್ ಅಬ್ಬರಿಸುತ್ತಿರುವುದು ಇದೇ ಮೊದಲೇನಲ್ಲ.

ಈ ಹಿಂದೆ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೌಲರ್​ಗಳ ಬೆಂಡೆತ್ತಿದ ಇತಿಹಾಸ ಜೋಸ್ ಬಟ್ಲರ್ ಹಿಂದಿದೆ. ಹೀಗೆ ಬೆಂಡೆತ್ತುವ ಮೂಲಕ ಈವರೆಗೆ ಬಟ್ಲರ್ 589 ರನ್​ ಕಲೆಹಾಕಿದ್ದಾರೆ.

ಇದನ್ನೂ ಓದಿ
Image
ಯುಜ್ವೇಂದ್ರ ಚಹಲ್-ಧನಶ್ರೀ ವರ್ಮಾ ವಿಚ್ಛೇದನಕ್ಕೆ ಇದುವೇ ಅಸಲಿ ಕಾರಣ
Image
RCB ದಾಖಲೆ ಧೂಳೀಪಟ ಮಾಡಿದ ಡೆಲ್ಲಿ ಬಾಯ್ಸ್
Image
David Warner: ಡೇವಿಡ್ ವಾರ್ನರ್​ಗೆ ಒಲಿದ ನಾಯಕತ್ವ..!
Image
VIDEO: ಎಂಎಸ್ ಧೋನಿ ಎಂಟ್ರಿಗೆ ಕಿವಿ ಮುಚ್ಚಿ ಕೂತ ನೀತಾ ಅಂಬಾನಿ

RCB ವಿರುದ್ಧ ಜೋಸ್ ಬಟ್ಲರ್ ಈವರೆಗೆ 17 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 382 ಎಸೆತಗಳನ್ನು ಎದುರಿಸಿ ಬರೋಬ್ಬರಿ 589 ರನ್ ಬಾರಿಸಿದ್ದಾರೆ. ಅಂದರೆ ಆರ್​ಸಿಬಿ ವಿರುದ್ಧ ಜೋಸ್ ಬಟ್ಲರ್ 53.20ರ ಸರಾಸರಿಯಲ್ಲಿ ರನ್ ಕಲೆಹಾಕುತ್ತಾ ಬಂದಿದ್ದಾರೆ.

ಇನ್ನು ಆರ್​ಸಿಬಿ ವಿರುದ್ಧದ 17 ಇನಿಂಗ್ಸ್​ಗಳಲ್ಲಿ ಜೋಸ್ ಬಟ್ಲರ್ 154.18ರ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ ಬಟ್ಲರ್ ಬ್ಯಾಟ್​ನಿಂದ ಸಿಡಿದಿರುವ ಸಿಕ್ಸರ್​ಗಳ ಸಂಖ್ಯೆ 32. ಹಾಗೆಯೇ 48 ಫೋರ್​ಗಳನ್ನು ಸಹ ಬಾರಿಸಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಜೋಸ್ ಬಟ್ಲರ್ ಈವರೆಗೆ 2 ಭರ್ಜರಿ ಶತಕ ಹಾಗೂ 3 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಆರ್​ಸಿಬಿ ವಿರುದ್ಧ ಅತ್ಯುತ್ತಮ ಪ್ರದರ್ಶನ ನೀಡಿದ ಬ್ಯಾಟರ್​ಗಳಲ್ಲಿ ಒಬ್ಬರಾಗಿ ಜೋಸ್ ಬಟ್ಲರ್ ಕಾಣಿಸಿಕೊಂಡಿದ್ದಾರೆ.

ಜೋಸ್ ಬಟ್ಲರ್ ಅಬ್ಬರ:

ಇನ್ನು ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಡೇವಿಡ್ ವಾರ್ನರ್ ಹೆಸರಿನಲ್ಲಿದೆ. ಆರ್​ಸಿಬಿ ವಿರುದ್ಧ 24 ಇನಿಂಗ್ಸ್ ಆಡಿರುವ ವಾರ್ನರ್ 605 ಎಸೆತಗಳನ್ನು ಎದುರಿಸಿ 985 ರನ್ ಬಾರಿಸಿದ್ದಾರೆ.

ಈ ವೇಳೆ ಡೇವಿಡ್ ವಾರ್ನರ್ ಬ್ಯಾಟ್​ನಿಂದ 9 ಅರ್ಧಶತಕಗಳು ಹಾಗೂ 2 ಶತಕಗಳು ಮೂಡಿಬಂದಿವೆ. ಅದರಲ್ಲೂ ಆರ್​ಸಿಬಿ ವಿರುದ್ಧ ಐಪಿಎಲ್​ನಲ್ಲಿ 50 ಕ್ಕಿಂತ ಹೆಚ್ಚು ಸಿಕ್ಸ್ ಸಿಡಿಸಿದ ಏಕೈಕ ಬ್ಯಾಟರ್ ಆಗಿ ಡೇವಿಡ್ ವಾರ್ನರ್ ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿ: IPL 2025: ಹೀನಾಯ ಅತ್ಯಂತ ಹೀನಾಯ ದಾಖಲೆ ಬರೆದ RCB

ಡೇವಿಡ್ ವಾರ್ನರ್ 24 ಇನಿಂಗ್ಸ್​ಗಳಿಂದ 55 ಸಿಕ್ಸ್ ಸಿಡಿಸಿದರೆ, ಇದೀಗ ಜೋಸ್ ಬಟ್ಲರ್ 32 ಸಿಕ್ಸರ್​ಗಳನ್ನು ಬಾರಿಸಿದ್ದಾರೆ. ಈ ಮೂಲಕ ವಾರ್ನರ್ ಬಳಿಕ ಬಟ್ಲರ್ ಆರ್​ಸಿಬಿ ಬೌಲರ್​ಗಳನ್ನು ಬೆಂಡೆತ್ತುವ ಕಾಯಕಕ್ಕೆ ಕೈಹಾಕಿದ್ದಾರೆ.

ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್