AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RTM ಗಾಗಿ ಐಪಿಎಲ್ ಫ್ರಾಂಚೈಸಿಗಳ ಮನವಿ: ಏನಿದು ಆಯ್ಕೆ?

IPL 2025: ಈ ಬಾರಿಯ ಐಪಿಎಲ್​ಗೂ ಮುನ್ನ ಆಟಗಾರರ ಮೆಗಾ ಹರಾಜು ನಡೆಯಲಿದೆ. ಇತ್ತ ಮೆಗಾ ಹರಾಜು ನಡೆಯುವುದರಿಂದ ಪ್ರತಿ ತಂಡಗಳು ನಾಲ್ಕೈದು ಆಟಗಾರರನ್ನು ಉಳಿಸಿ ಉಳಿದವರೆಲ್ಲರನ್ನು ಬಿಡುಗಡೆ ಮಾಡಬೇಕಾಗುತ್ತದೆ. ಆದರೆ ಈ ಬಿಡುಗಡೆಗೂ ಮುನ್ನ ಆರ್​ಟಿಎಂ ಆಯ್ಕೆ ಬಳಸಲು ಅವಕಾಶ ನೀಡಬೇಕೆಂದು ಕೆಲ ಫ್ರಾಂಚೈಸಿಗಳು ಬಿಸಿಸಿಐಗೆ ಮನವಿ ಸಲ್ಲಿಸಿದೆ.

IPL 2025: RTM ಗಾಗಿ ಐಪಿಎಲ್ ಫ್ರಾಂಚೈಸಿಗಳ ಮನವಿ: ಏನಿದು ಆಯ್ಕೆ?
ಸಾಂದರ್ಭಿಕ ಚಿತ್ರ
ಝಾಹಿರ್ ಯೂಸುಫ್
|

Updated on: Jul 29, 2024 | 12:08 PM

Share

ಐಪಿಎಲ್ 2025ರ ಸಿದ್ಧತೆಗಳು ಶುರುವಾದ ಬೆನ್ನಲ್ಲೇ RTM ಆಯ್ಕೆಯು ಚರ್ಚಾ ವಿಷಯವಾಗಿದೆ. ಹೀಗೆ ಚರ್ಚೆಯಾಗಲು ಮುಖ್ಯ ಕಾರಣ ಬಹುತೇಕ ಫ್ರಾಂಚೈಸಿಗಳು ಮೆಗಾ ಹರಾಜಿಗೂ ಮುನ್ನ RTM ಆಯ್ಕೆ ನೀಡಬೇಕೆಂಬ ಬೇಡಿಕೆಯಿಟ್ಟಿರುವುದು. ಈ ಬೇಡಿಕೆಯ ಬೆನ್ನಲ್ಲೇ ಏನಿದು ಆರ್​ಟಿಎಂ ಎಂಬ ಪ್ರಶ್ನೆ ಕೂಡ ಕೂಡ ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಇಲ್ಲಿದೆ ಉತ್ತರ…

ಆರ್​ಟಿಎಂ ಕಾರ್ಡ್​ ಎಂದರೆ ರೈಟ್ ಟು ಮ್ಯಾಚ್ (RTM) ಆಯ್ಕೆ. ಅಂದರೆ ಮೆಗಾ ಹರಾಜಿನಲ್ಲಿ ಆಟಗಾರರನ್ನು ಸ್ವಾಧೀನಪಡಿಸಿಕೊಳ್ಳಲು ಇರುವ ಆಯ್ಕೆ. ಇನ್ನೂ ಸರಳವಾಗಿ ಹೇಳಬೇಕೆಂದರೆ, ಆಟಗಾರರ ಮೇಲೆ ಹಕ್ಕುಸ್ವಾಮ್ಯ ಸ್ಥಾಪಿಸುವುದು.

ಇಲ್ಲಿ ಒಂದು ಫ್ರಾಂಚೈಸಿಯು ಆರ್​ಟಿಎಂ ಆಯ್ಕೆ ಬಳಸಿ ಆಟಗಾರರನ್ನು ಬಿಡುಗಡೆ ಮಾಡಿದರೂ, ಆ ಆಟಗಾರನ ಸಂಪೂರ್ಣ ಹಕ್ಕು ಬಿಡುಗಡೆ ಮಾಡಿದ ಫ್ರಾಂಚೈಸಿಯ ಬಳಿಯೇ ಇರಲಿದೆ.

ಉದಾಹರಣೆಗೆ: ಆರ್​ಸಿಬಿ ತಂಡವು ರಜತ್ ಪಾಟಿದಾರ್ ಅವರನ್ನು ಹರಾಜಿಗಾಗಿ ರಿಲೀಸ್ ಮಾಡಿದೆ ಎಂದಿಟ್ಟುಕೊಳ್ಳಿ. ಆದರೆ ಈ ಬಿಡುಗಡೆಗೂ ಮುನ್ನ ಆರ್​ಟಿಎಂ ಆಯ್ಕೆ ಬಳಸಿ ರಿಲೀಸ್ ಮಾಡಿದರೆ, ಪಾಟಿದಾರ್ ಖರೀದಿ ಮೇಲಿನ ಹಕ್ಕು ಆರ್​ಸಿಬಿ ಬಳಿಯೇ ಇರುತ್ತದೆ.

ಇನ್ನು ಆರ್​ಟಿಎಂ ಆಯ್ಕೆ ಬಳಸಿ ಬಿಡುಗಡೆ ಮಾಡಲಾದ ರಜತ್ ಪಾಟಿದಾರ್​ಗಾಗಿ ಸಿಎಸ್​ಕೆ ಫ್ರಾಂಚೈಸಿಯು 10 ಕೋಟಿ ರೂ. ಬಿಡ್ ಮಾಡಿತು ಎಂದಿಟ್ಟುಕೊಳ್ಳಿ. ಈ ವೇಳೆ ಆ ಮೊತ್ತವನ್ನು ತಾವೇ ನೀಡುತ್ತೇವೆ ಎಂದು ಆರ್​ಸಿಬಿ ಪಾಟಿದಾರ್ ಅವರನ್ನು ಮರಳಿ ಖರೀದಿಸಬಹುದು.

ಒಂದು ವೇಳೆ ಬಿಡುಗಡೆ ಮಾಡಿದ ತಂಡವು ಮರಳಿ ಖರೀದಿಸಲು ಇಚ್ಛಿಸದಿದ್ದರೆ ಮಾತ್ರ ಆರ್​ಟಿಎಂ ಆಯ್ಕೆಯಲ್ಲಿ ಕಾಣಿಸಿಕೊಂಡ ಆಟಗಾರರು ಕೊನೆಯದಾಗಿ ಬಿಡ್ ಮಾಡಿದ ತಂಡದ ಪಾಲಾಗಲಿದ್ದಾರೆ. ಹೀಗಾಗಿಯೇ ಈ ಆಯ್ಕೆಯನ್ನು ಆಟಗಾರರ ಮೇಲಿನ ಹಕ್ಕುಸ್ವಾಮ್ಯ ಎನ್ನಲಾಗುತ್ತದೆ.

ಈ ಆಯ್ಕೆ ಏಕೆ?

ಆರ್​ಟಿಎಂ ಆಯ್ಕೆಯಲ್ಲಿ ಬಿಡುಗಡೆಯಾದ ಆಟಗಾರರು ಬಿಡ್ಡಿಂಗ್​ ಮೂಲಕ ಹೆಚ್ಚಿನ ಮೊತ್ತ ಪಡೆಯಬಹುದು. ಒಂದು ವೇಳೆ ಯಾರು ಸಹ ಬಿಡ್ಡಿಂಗ್ ಮಾಡದಿದ್ದರೆ ಐಪಿಎಲ್​ನಿಂದ ಹೊರಬೀಳುವುದಿಲ್ಲ. ಬದಲಾಗಿ ಆರ್​ಟಿಎಂ ಬಳಸಿದ ಫ್ರಾಂಚೈಸಿ ತಂಡದಲ್ಲೇ ಉಳಿಯುತ್ತಾರೆ.

ಈ ಆಯ್ಕೆಗೆ ಯಾಕೆ ಬೇಡಿಕೆ?

ಐಪಿಎಲ್​ನಲ್ಲಿ ಬಹುತೇಕ ಫ್ರಾಂಚೈಸಿಗಳು ಮೆಗಾ ಹರಾಜಿಗೂ ಮುನ್ನ ಈ ಆಯ್ಕೆ ನೀಡುವಂತೆ ಬಿಸಿಸಿಐಗೆ ಮನವಿ ಮಾಡಿದೆ. ಇದಕ್ಕೆ ಮುಖ್ಯ ಕಾರಣ ರಿಟೈನ್ ಆಟಗಾರರ ಸಂಖ್ಯೆ ಕಡಿಮೆ ಇರುವುದು. ಅಂದರೆ ಮೆಗಾ ಹರಾಜಿಗೂ ಮುನ್ನ ಕೇವಲ 4 ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡಿದರೆ, ಉಳಿದ 21 ಆಟಗಾರರನ್ನು ಬಿಡುಗಡೆ ಮಾಡಬೇಕಾಗುತ್ತದೆ. ಇದರಿಂದ ಮೆಗಾ ಹರಾಜಿನ ಬಳಿಕ ಇಡೀ ತಂಡ ಬದಲಾಗುವ ಸಾಧ್ಯತೆ ಹೆಚ್ಚು. ಅದರಲ್ಲೂ ಒಂದು ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆಯಾಗುತ್ತದೆ.

ಉದಾಹರಣೆಗೆ: ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಕಳೆದ ಸೀಸನ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಆ ತಂಡದ ಪ್ಲೇಯಿಂಗ್ ಇಲೆವೆನ್​ನ ಬಹುತೇಕ ಆಟಗಾರರು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಅದೇ ಆಡುವ ಬಳಗವನ್ನು ಉಳಿಸಿಕೊಳ್ಳಲು ಕೆಕೆಆರ್ ಬಯಸುತ್ತಿದೆ. ಆ ಆಟಗಾರರನ್ನು ಉಳಿಸಿಕೊಳ್ಳಬೇಕಿದ್ದರೆ ಆರ್​ಟಿಎಂ ಆಯ್ಕೆ ಇರಲೇಬೇಕು. ಇಲ್ಲದಿದ್ದರೆ ಕೆಕೆಆರ್ ಆಟಗಾರರು ಇತರೆ ಫ್ರಾಂಚೈಸಿಗಳ ಪಾಲಾಗುವ ಸಾಧ್ಯತೆ ಹೆಚ್ಚು.

ಇಲ್ಲಿ ಕೆಕೆಆರ್ ಫ್ರಾಂಚೈಸಿಯು 8 ಆರ್​ಟಿಎಂ ಆಯ್ಕೆಗಳಿಗಾಗಿ ಬೇಡಿಕೆಯಿಟ್ಟಿದೆ ಎಂದು ತಿಳಿದು ಬಂದಿದೆ. ಈ ಮೂಲಕ ತನ್ನ ಪ್ಲೇಯಿಂಗ್ ಇಲೆವೆನ್​ನ ಬಹುತೇಕ ಆಟಗಾರರನ್ನು ಉಳಿಸಿಕೊಳ್ಳಲು ಬಯಸಿದೆ. ಆದರೆ ಪಂಜಾಬ್ ಕಿಂಗ್ಸ್ ಸೇರಿದಂತೆ ಕೆಲವು ಫ್ರಾಂಚೈಸಿಗಳು ಆರ್​ಟಿಎಂ ಆಯ್ಕೆ ಇರಬಾರದೆಂಬ ವಾದವನ್ನು ಸಹ ಮುಂದಿಟ್ಟಿದ್ದಾರೆ. ಹೀಗಾಗಿ ಮೆಗಾ ಹರಾಜಿಗೂ ಮುನ್ನ ಫ್ರಾಂಚೈಸಿಗಳಿಗೆ ಆರ್​ಟಿಎಂ ಆಯ್ಕೆಯನ್ನು ನೀಡಲಿದೆಯಾ ಎಂಬುದು ಪ್ರಶ್ನೆ.

ಆರ್​ಟಿಎಂ ಆಯ್ಕೆ ಬಳಸಲಾಗಿದೆಯಾ?

ಐಪಿಎಲ್ ಮೆಗಾ ಹರಾಜಿನ ವೇಳೆ ಮಾತ್ರ ಆರ್​ಟಿಎಂ ಆಯ್ಕೆಗಳನ್ನು ಬಳಸಲಾಗುತ್ತದೆ. 2018 ರ ಮೆಗಾ ಹರಾಜಿನ ವೇಳೆ ಈ ನಿಯಮವನ್ನು ಪರಿಚಯಿಸಲಾಗಿತ್ತು. ಈ ವೇಳೆ ಮೂವರು ಆಟಗಾರರ ಮೇಲೆ ಆರ್​​ಟಿಎಂ ಆಯ್ಕೆ ಬಳಸಲು ಅವಕಾಶ ನೀಡಲಾಗಿತ್ತು.

ಆದರೆ 2022 ರಲ್ಲಿ ನಡೆದ ಮೆಗಾ ಹರಾಜಿನ ವೇಳೆ ಈ ನಿಯಮವನ್ನು ತೆಗೆದು ಹಾಕಲಾಗಿತ್ತು. ಇದಕ್ಕೆ ಮುಖ್ಯ ಕಾರಣ ಎರಡು ಹೊಸ ತಂಡಗಳ ಸೇರ್ಪಡೆ. ಅಂದರೆ ಗುಜರಾತ್ ಟೈಟಾನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಗಳು ಹರಾಜಿನಲ್ಲಿ ಕಾಣಿಸಿಕೊಂಡಿದ್ದರಿಂದ ಈ ನಿಮಯವನ್ನು ಬಳಸಲಾಗಿರಲಿಲ್ಲ.

ಈ ಬಾರಿಯ ಐಪಿಎಲ್​ ಮೆಗಾ ಹರಾಜಿಗೂ ಮುನ್ನ ಆರ್​ಟಿಎಂ ಆಯ್ಕೆಗಾಗಿ ಫ್ರಾಂಚೈಸಿಗಳು ಮನವಿ ಮಾಡಿದೆ. ಹೀಗಾಗಿ ಐಪಿಎಲ್ 2025 ರ ಮೆಗಾ ಹರಾಜಿನಲ್ಲಿ ಆರ್​ಟಿಎಂ ಆಯ್ಕೆ ಕಾಣಿಸಿಕೊಳ್ಳುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ