IPL 2025: ರಾಜಸ್ಥಾನ್ ರಾಯಲ್ಸ್​ ತಂಡಕ್ಕೆ ಸಂಜು ಸ್ಯಾಮ್ಸನ್ ಗುಡ್ ಬೈ?

|

Updated on: Aug 26, 2024 | 1:57 PM

Sanju Samson: ಸಂಜು ಸ್ಯಾಮ್ಸನ್ ಐಪಿಎಲ್​ನಲ್ಲಿ ಕೇವಲ ಮೂರು ತಂಡಗಳ ಪರ ಮಾತ್ರ ಆಡಿದ್ದಾರೆ. ಕೊಲ್ಕತ್ತಾ ನೈಟ್ ರೈಡರ್ಸ್ ತಂಡದೊಂದಿಗೆ ಕೆರಿಯರ್ ಆರಂಭಿಸಿದ್ದ ಸ್ಯಾಮ್ಸನ್ ಆ ಬಳಿಕ ಡೆಲ್ಲಿ ಡೇರ್ ಡೆವಿಲ್ಸ್ (ಈಗಿನ ಡೆಲ್ಲಿ ಕ್ಯಾಪಿಟಲ್ಸ್) ಪರ ಕಣಕ್ಕಿಳಿದಿದ್ದರು. ಇದಾದ ಬಳಿಕ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಕಾಣಿಸಿಕೊಂಡ ಸಂಜು ಕಳೆದ 6 ವರ್ಷಗಳಿಂದ ಒಂದೇ ತಂಡದ ಪರ ಆಡುತ್ತಿದ್ದಾರೆ.

IPL 2025: ರಾಜಸ್ಥಾನ್ ರಾಯಲ್ಸ್​ ತಂಡಕ್ಕೆ ಸಂಜು ಸ್ಯಾಮ್ಸನ್ ಗುಡ್ ಬೈ?
Sanju Samson
Follow us on

ಐಪಿಎಲ್ 2025 ರ ಮೆಗಾ ಹರಾಜಿಗೂ ಮುನ್ನ ಸಂಜು ಸ್ಯಾಮ್ಸನ್ ರಾಜಸ್ಥಾನ್ ರಾಯಲ್ಸ್ ತಂಡವನ್ನು ತೊರೆಯಲಿದ್ದಾರಾ?… ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಆರ್​ಆರ್ ತಂಡದ ಅಧಿಕೃತ ಖಾತೆಯಲ್ಲಿ ಹಂಚಿಕೊಂಡಿರುವ ವಿಡಿಯೋ. ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಸಂಜು ಸ್ಯಾಮ್ಸನ್ ಅವರ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದೆ.

ಈ ವಿಡಿಯೋಗೆ ನೀಡಲಾದ ಕ್ಯಾಪ್ಷನ್… ‘ಮೇಜರ್ ಮಿಸ್ಸಿಂಗ್.’ ರಾಜಸ್ಥಾನ್ ರಾಯಲ್ಸ್ ತಂಡದೊಂದಿಗೆ ಸಂಜು ಸ್ಯಾಮ್ಸನ್ ಕಳೆದಿರುವ ಸನ್ನಿವೇಶಗಳನ್ನು ಒಳಗೊಂಡಿರುವ ಈ ವಿಡಿಯೋಗೆ ಕಳೆದುಕೊಳ್ಳಲಿರುವ ಪ್ರಮುಖ ವ್ಯಕ್ತಿ ಎಂಬ ಶೀರ್ಷಿಕೆ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಇದೀಗ ಈ ವಿಡಿಯೋ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಸಂಜು ಸ್ಯಾಮ್ಸನ್ ರಾಜಸ್ಥಾನ್ ರಾಯಲ್ಸ್ ತಂಡವನ್ನು ತೊರೆಯಲಿದ್ದಾರಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಏಕೆಂದರೆ 2018 ರಿಂದ ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿಯುತ್ತಿರುವ ಸ್ಯಾಮ್ಸನ್​​ಗೆ ಐಪಿಎಲ್ ಟ್ರೋಫಿ ಎಂಬುದು ಮರೀಚಿಕೆಯಾಗಿ ಉಳಿದಿದೆ.

ಅದರಲ್ಲೂ 2021 ರಿಂದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮುನ್ನಡೆಸುತ್ತಿರುವ ಸ್ಯಾಮ್ಸನ್ ಒಮ್ಮೆ ಮಾತ್ರ ತಂಡವನ್ನು ಫೈನಲ್​ಗೇರಿಸಿದ್ದರು. ಇತ್ತ ಈ ಬಾರಿಯ ಐಪಿಎಲ್ ಹರಾಜಿಗೂ ಮುನ್ನ ಆರ್​ಆರ್ ಫ್ರಾಂಚೈಸಿ ಹೊಸ ಕೋಚ್ ನೇಮಕಕ್ಕೆ ಮುಂದಾಗಲಿದೆ. ಇದರ ಬೆನ್ನಲ್ಲೇ ಸಂಜು ಸ್ಯಾಮ್ಸನ್ ರಾಜಸ್ಥಾನ್ ರಾಯಲ್ಸ್ ತಂಡವನ್ನು ತೊರೆಯುವ ಸಾಧ್ಯತೆಯಿದೆ ಎಂಬ ಸುದ್ದಿಗಳು ಮುನ್ನಲೆಗೆ ಬಂದಿದೆ. ಹೀಗಾಗಿ ಸ್ಯಾಮ್ಸನ್ ಅವರ ಮುಂದಿನ ನಡೆ ಇದೀಗ ಕುತೂಹಲಕ್ಕೆ ಕಾರಣವಾಗಿದೆ.

ಇದನ್ನೂ ಓದಿ: IPL 2025: ಧೋನಿ RCB ತಂಡದ ನಾಯಕರಾಗಿದ್ದರೆ 3 ಟ್ರೋಫಿ ಗೆದ್ದಿರುತ್ತಿತ್ತು..!

ಒಟ್ಟಿನಲ್ಲಿ ಐಪಿಎಲ್​ನಲ್ಲಿ 167 ಪಂದ್ಯಗಳನ್ನಾಡಿರುವ ಸಂಜು ಸ್ಯಾಮ್ಸನ್ 3 ಭರ್ಜರಿ ಶತಕಗಳೊಂದಿಗೆ ಒಟ್ಟು 4419 ರನ್ ಕಲೆಹಾಕಿದ್ದಾರೆ. ಈ ವೇಳೆ 206 ಸಿಕ್ಸ್ ಹಾಗೂ 352 ಫೋರ್​ಗಳನ್ನು ಸಹ ಬಾರಿಸಿದ್ದಾರೆ. ಇದೀಗ ಐಪಿಎಲ್ ಮೆಹಾ ಹರಾಜಿಗೂ ಮುನ್ನ ರಾಜಸ್ಥಾನ್ ರಾಯಲ್ಸ್ ತಂಡದಿಂದ ಹೊರಬಂದರೆ ಸಂಜು ಸ್ಯಾಮ್ಸನ್​ ಖರೀದಿಗಾಗಿ ಕೆಲ ಫ್ರಾಂಚೈಸಿಗಳು ಹೆಚ್ಚಿನ ಆಸಕ್ತಿವಹಿಸುವುದಂತು ಖಚಿತ.

 

Published On - 1:53 pm, Mon, 26 August 24