ಇಂಡಿಯನ್ ಪ್ರೀಮಿಯರ್ ಲೀಗ್ (IPL 2925) ಮೆಗಾ ಹರಾಜಿಗೂ ಮುನ್ನ ರಿಟೈನ್ ಆಟಗಾರರ ಸಂಖ್ಯೆಯನ್ನು ಹೆಚ್ಚಿಸಬೇಕೆಂದು ಸನ್‌ರೈಸರ್ಸ್ ಹೈದರಾಬಾದ್ ತಂಡದ ಮಾಲಕಿ ಕಾವ್ಯ ಮಾರನ್ ಬಿಸಿಸಿಗೆ ಮನವಿ ಸಲ್ಲಿಸಿದ್ದಾರೆ. ಮುಂಬೈನಲ್ಲಿ ನಡೆದ ಬಿಸಿಸಿಐ-ಐಪಿಎಲ್ ಮಾಲೀಕರ ಸಭೆಯಲ್ಲಿ ಎಸ್ಆರ್ಹೆಚ್ ಫ್ರಾಂಚೈಸಿಯು ಕೆಲ ಬೇಡಿಕೆಗಳನ್ನು ಮುಂದಿಟ್ಟಿದ್ದು, ಈ ಬೇಡಿಕೆಯಲ್ಲಿ ಮುಖ್ಯವಾಗಿ ರಿಟೈನ್ ಆಟಗಾರರ ಸಂಖ್ಯೆಯನ್ನು ಹೆಚ್ಚಿಸಬೇಕೆಂದು ತಿಳಿಸಲಾಗಿದೆ. ಅದರಂತೆ ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಬಿಸಿಸಿಐಗೆ ಸಲ್ಲಿಸಿದ ಶಿಫಾರಸ್ಸು ಈ ಕೆಳಗಿನಂತಿದೆ…
ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಈ ಬೇಡಿಕೆಗಳನ್ನು ಮುಂದಿಡಲು ಮುಖ್ಯ ಕಾರಣ ಕಳೆದ ಸೀಸನ್ನಲ್ಲಿ ಎಸ್ಆರ್ಹೆಚ್ ತಂಡವು ಫೈನಲ್ಗೆ ಪ್ರವೇಶಿಸಿರುವುದು. ಅಂದರೆ ಪ್ರಸ್ತುತ ಸನ್‌ರೈಸರ್ಸ್ ಹೈದರಾಬಾದ್ ತಂಡವು ಉತ್ತಮ ಬಳಗವನ್ನು ಹೊಂದಿದೆ. ಹೀಗಾಗಿ ಕನಿಷ್ಠ 7 ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡಬೇಕೆಂದು ಕಾವ್ಯ ಮಾರನ್ ಮನವಿ ಮಾಡಿದ್ದಾರೆ.
ಹೀಗೆ ರಿಟೈನ್ ಮಾಡಿಕೊಳ್ಳಲು ಸಂಖ್ಯೆಯನ್ನು ನಿಗದಿ ಮಾಡುವಂತಿಲ್ಲ ಎಂದು ಕೂಡ ತಿಳಿಸಲಾಗಿದೆ. ಇದಕ್ಕೆ ಕಾರಣ ಈ ಹಿಂದಿನ ಹರಾಜಿನ ರಿಟೈನ್ ಸಂದರ್ಭಗಳಲ್ಲಿ ಮೂವರು ಭಾರತೀಯರು ಹಾಗೂ ಒಬ್ಬ ವಿದೇಶಿ ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡಲಾಗುತ್ತಿತ್ತು. ಆದರೆ ಈ ಬಾರಿ ವಿದೇಶಿ, ಭಾರತೀಯ ಹಾಗೂ ಅನ್ಕ್ಯಾಪ್ಡ್ ಎಂಬಂತೆ ಆಟಗಾರರ ಪ್ರಯಾಣವನ್ನು ನಿಗದಿ ಮಾಡುವುದನ್ನು ಕೈ ಬಿಡಬೇಕೆಂದು ಎಸ್ಆರ್ಹೆಚ್ ಫ್ರಾಂಚೈಸಿ ಆಗ್ರಹಿಸಿದೆ.
ಇನ್ನು ರಿಟೈನ್ಗೂ ಮುನ್ನ ಆಟಗಾರರೊಂದಿಗೆ ಫ್ರಾಂಚೈಸಿಗಳು ಚರ್ಚಿಸಲು ಮುಕ್ತ ಅವಕಾಶ ನೀಡಬೇಕೆಂದು ಸನ್‌ರೈಸರ್ಸ್ ಹೈದರಾಬಾದ್ ಮಾಲೀಕರು ಒತ್ತಾಯಿಸಿದ್ದಾರೆ. ಇದರಿಂದ ಕೆಲ ಸ್ಟಾರ್ ಆಟಗಾರರು ಹರಾಜಿನಲ್ಲಿ ಕಾಣಿಸಿಕೊಳ್ಳಲು ಬಯಸಿದರೂ ಅವರನ್ನು ಮನವೊಲಿಸಿ ತಂಡದಲ್ಲೇ ಉಳಿಸಿಕೊಳ್ಳಲು ಅವಕಾಶ ಸಿಗುತ್ತದೆ. ಹೀಗಾಗಿಯೇ ಎಸ್ಆರ್ಹೆಚ್ ಫ್ರಾಂಚೈಸಿಯು ಈ ವಿಶೇಷ ಬೇಡಿಕೆಯನ್ನು ಬಿಸಿಸಿಐ ಮುಂದಿಟ್ಟಿದೆ.
ಇದೀಗ ಐಪಿಎಲ್ ಮಾಲೀಕರ ಎಲ್ಲಾ ಶಿಫಾರಸ್ಸುಗಳನ್ನು ಪಡೆದುಕೊಂಡಿರುವ ಬಿಸಿಸಿಐ ಮುಂದಿನ ಒಂದು ವಾರದೊಳಗೆ ಐಪಿಎಲ್ ಮೆಗಾ ಹರಾಜಿಗೆ ಅಂತಿಮ ರೂಪುರೇಷೆಯನ್ನು ಸಿದ್ಧಪಡಿಸುವುದಾಗಿ ತಿಳಿಸಿದೆ. ಅದರಂತೆ ಈ ಬಾರಿಯ ಮೆಗಾ ಹರಾಜಿನಲ್ಲಿ ಕೆಲ ನಿಯಮಗಳು ಬದಲಾಗುವುದು ಬಹುತೇಕ ಖಚಿತ ಎನ್ನಬಹುದು.
ಇದನ್ನೂ ಓದಿ: IPL 2025: RCB ತಂಡದಿಂದ ಗ್ಲೆನ್ ಮ್ಯಾಕ್ಸ್ವೆಲ್ ಔಟ್?
ಸನ್‌ರೈಸರ್ಸ್ ಹೈದರಾಬಾದ್ ತಂಡ: ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಐಡೆನ್ ಮರ್ಕ್ರಾಮ್, ನಿತೀಶ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಅಬ್ದುಲ್ ಸಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಟಿ ನಟರಾಜನ್, ಜಯದೇವ್ ಉನಾದ್ಕಟ್, ಶಹಬಾಝ್ ಅಹ್ಮದ್, ಉಮ್ರಾನ್ ಮಲಿಕ್, ಸನ್ವಿರ್ ಸಿಂಗ್, ಗ್ಲೆನ್ ಫಿಲಿಪ್ಸ್, ಮಯಾಂಕ್ ಮಾರ್ಕಂಡೆ, ಮಯಾಂಕ್ ಅಗರ್ವಾಲ್, ವಾಷಿಂಗ್ಟನ್ ಸುಂದರ್, ಅನ್ಮೋಲ್ಪ್ರೀತ್ ಸಿಂಗ್, ಉಪೇಂದ್ರ ಯಾದವ್, ಜಾತವೇಧ್ ಸುಬ್ರಹ್ಮಣ್ಯನ್, ವಿಜಯಕಾಂತ್ ವ್ಯಾಸ್ಕಂತ್, ಫಝಲ್ಹಕ್ ಫಾರೂಕಿ, ಮಾರ್ಕೊ ಯಾನ್ಸೆನ್, ಆಕಾಶ್ ಮಹಾರಾಜ್ ಸಿಂಗ್.