AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ನೆಟ್​ ಬೌಲರ್​ಗೆ ಖುಲಾಯಿಸಿದ ಅದೃಷ್ಟ..!

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್-18 ಮಾರ್ಚ್ 22 ರಿಂದ ಶುರುವಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದೊಂದಿಗೆ ಐಪಿಎಲ್ 2025 ಕ್ಕೆ ಚಾಲನೆ ದೊರೆಯಲಿದೆ.

IPL 2025: ನೆಟ್​ ಬೌಲರ್​ಗೆ ಖುಲಾಯಿಸಿದ ಅದೃಷ್ಟ..!
Chetan Sakariya
ಝಾಹಿರ್ ಯೂಸುಫ್
|

Updated on:Mar 18, 2025 | 9:50 AM

Share

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ಆರಂಭಕ್ಕೂ ಮುನ್ನವೇ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವೇಗಿ ಉಮ್ರಾನ್ ಮಲಿಕ್ ಹೊರಬಿದ್ದಿದ್ದಾರೆ. 2024 ರಲ್ಲಿ ಗಾಯಗೊಂಡಿದ್ದ ಉಮ್ರಾನ್ ಇನ್ನೂ ಸಹ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಅವರು ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ.

ಇದರ ಬೆನ್ನಲ್ಲೇ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಯುವ ಎಡಗೈ ವೇಗಿ ಚೇತನ್ ಸಕರಿಯಾ ಅವರನ್ನು ಬದಲಿಯಾಗಿ ಆಯ್ಕೆ ಮಾಡಿಕೊಂಡಿದೆ. ವಿಶೇಷ ಎಂದರೆ ಈ ಬಾರಿಯ ಐಪಿಎಲ್​ ಮೆಗಾ ಹರಾಜಿನಲ್ಲಿ 75 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಚೇತನ್ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ.

ಇದಾಗ್ಯೂ ಕೆಕೆಆರ್ ತಂಡವು ಅವರನ್ನು ನೆಟ್ ಬೌಲರ್ ಆಗಿ ಆಯ್ಕೆ ಮಾಡಿಕೊಂಡಿತ್ತು. ಅದರಂತೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನೆಟ್ ಬೌಲರ್ ಆಗಿ ಕಾಣಿಸಿಕೊಂಡಿದ್ದ ಚೇತನ್ ಸಕರಿಯಾಗೆ ಇದೀಗ ಅದೃಷ್ಟ ಖುಲಾಯಿಸಿದೆ.

ಇದನ್ನೂ ಓದಿ
Image
IPL 2025: RCB ನೂತನ ಜೆರ್ಸಿ ಫೋಟೋ ಇಲ್ಲಿದೆ
Image
15 ಭರ್ಜರಿ ಸಿಕ್ಸ್​: ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಎಬಿ ಡಿವಿಲಿಯರ್ಸ್
Image
ಈ ಸಲನೂ RCB ಕಪ್ ಗೆಲ್ಲದಿರಲಿ, ಅದಕ್ಕಾಗಿ ನಾನು ಪ್ರಾರ್ಥಿಸುವೆ..!
Image
ಗಂಭೀರ್ ಅವರ ಒಂದು ದೃಢ ನಿರ್ಧಾರ ಚಾಂಪಿಯನ್ಸ್ ಟ್ರೋಫಿಯ ಚಿತ್ರಣ ಬದಲಿಸಿತು

ಉಮ್ರಾನ್ ಮಲಿಕ್ ಹೊರಗುಳಿಯುತ್ತಿದ್ದಂತೆ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ 75 ಲಕ್ಷ ರೂ.ಗೆ ಚೇತನ್ ಸಕರಿಯಾ ಅವರನ್ನು ತಂಡಕ್ಕೆ ಆಯ್ಕೆ ಮಾಡಿಕೊಂಡಿದ್ದಾರೆ. ಅದರಂತೆ ಈ ಬಾರಿ ಚೇತನ್ ಸಕರಿಯಾ ಕೆಕೆಆರ್ ಪರ ಕಣಕ್ಕಿಳಿಯಲಿದ್ದಾರೆ.

ಇದಕ್ಕೂ ಮುನ್ನ ಅವರು ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿದಿದ್ದರು. ಈ ವೇಳೆ 19 ಪಂದ್ಯಗಳಲ್ಲಿ ಬೌಲಿಂಗ್ ಮಾಡಿದ್ದ ಚೇತನ್ ಸಕರಿಯಾ 426 ಎಸೆತಗಳಲ್ಲಿ 599 ರನ್ ನೀಡಿ 20 ವಿಕೆಟ್ ಕಬಳಿಸಿದ್ದರು.

ಆದರೆ 2021ರ ಬಳಿಕ ಅವರಿಗೆ ಐಪಿಎಲ್ ಪಂದ್ಯವಾಡಲು ಚಾನ್ಸ್ ಸಿಕ್ಕಿರಲಿಲ್ಲ. ಇದೀಗ ನೆಟ್ ಬೌಲರ್ ಆಗಿ ಕೆಕೆಆರ್ ತಂಡದಲ್ಲಿ ಕಾಣಿಸಿಕೊಂಡಿದ್ದ ಚೇತನ್ ಸಕರಿಯಾಗೆ ಕೊನೆಗೂ ಅದೃಷ್ಟ ಕೈ ಹಿಡಿದಿದೆ.

ಇದನ್ನೂ ಓದಿ: IPL 2025: 8 ಆಟಗಾರರು ಎಂಟ್ರಿ: RCB ಅಭಿಮಾನಿಗಳಿಗೆ ಗುಡ್​ ನ್ಯೂಸ್

ಕೊಲ್ಕತ್ತಾ ನೈಟ್ ರೈಡರ್ಸ್ ತಂಡ : ರಿಂಕು ಸಿಂಗ್, ವರುಣ್ ಚಕ್ರವರ್ತಿ, ಸುನಿಲ್ ನರೈನ್, ಆ್ಯಂಡ್ರೆ ರಸೆಲ್, ಹರ್ಷಿತ್ ರಾಣಾ, ರಮಣ್​​​ದೀಪ್ ಸಿಂಗ್, ವೆಂಕಟೇಶ್ ಅಯ್ಯರ್, ಕ್ವಿಂಟನ್ ಡಿ ಕಾಕ್, ರಹಮಾನುಲ್ಲಾ ಗುರ್ಬಾಝ್, ಅನ್ರಿಕ್ ನೋಕಿಯ, ಆಂಗ್‌ಕ್ರಿಶ್ ರಘುವಂಶಿ, ವೈಭವ್ ಅರೋರಾ, ಮಯಾಂಕ್ ಮಾರ್ಕಾಂಡೆ, ರೋವ್‌ಮನ್ ಪೊವೆಲ್, ಲವ್​​ನೀತ್ ಸಿಸೋಡಿಯಾ, ಅಜಿಂಕ್ಯ ರಹಾನೆ, ಅನ್ಕುಲ್ ರಾಯ್, ಮೊಯಿನ್ ಅಲಿ,  ಸ್ಪೆನ್ಸರ್ ಜಾನ್ಸನ್, ಚೇತನ್ ಸಕರಿಯಾ.

Published On - 10:59 am, Mon, 17 March 25