IPL 2025: ಮೊದಲ ಪಂದ್ಯಕ್ಕೆ ಆರ್‌ಸಿಬಿ- ಕೆಕೆಆರ್ ಸಂಭಾವ್ಯ ಪ್ಲೇಯಿಂಗ್ 11 ಹೇಗಿರಲಿದೆ?
IPL 2025, KKR vs RCB Predicted Playing XI: ಐಪಿಎಲ್ 2025ರ ಉದ್ಘಾಟನಾ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗುತ್ತಿವೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಎರಡು ತಂಡಗಳ ಆಡುವ ಹನ್ನೊಂದರ ಬಳಗ ಹೇಗಿರಲಿದೆ ಎಂಬುದು ಕುತೂಹಲ ಕೆರಳಿಸಿದೆ.

ಅಭಿಮಾನಿಗಳ ಕಾಯುವಿಕೆಗೆ ತೆರೆಬಿದ್ದಿದೆ, ಮಿಲಿಯನ್ ಡಾಲರ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮತ್ತೊಮ್ಮೆ ಅಭಿಮಾನಿಗಳನ್ನು ರಂಜಿಸಲು ಸಿದ್ಧವಾಗಿದೆ. ಐಪಿಎಲ್ 2025 ಸೀಸನ್ ಮಾರ್ಚ್ 22 ರ ಶನಿವಾರದಿಂದ ಕೋಲ್ಕತ್ತಾದ ಐತಿಹಾಸಿಕ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಪ್ರಾರಂಭವಾಗುತ್ತಿದೆ. 18ನೇ ಸೀಸನ್‌ನ ಲೀಗ್‌ನ ಮೊದಲ ಪಂದ್ಯವು ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (KKR vs RCB) ನಡುವೆ ನಡೆಯಲಿದೆ. ಉಭಯ ತಂಡಗಳಿಗೆ ಇದು ಮೊದಲ ಪಂದ್ಯವಾಗಿರುವ ಕಾರಣ ಎರಡೂ ತಂಡಗಳು ಗೆಲುವಿನೊಂದಿಗೆ ಟೂರ್ನಿಯನ್ನು ಆರಂಭಿಸಲು ಎದುರು ನೋಡುತ್ತಿವೆ. ಹೀಗಾಗಿ ಬಲಿಷ್ಠ ಪಡೆಯನ್ನೇ ಕಟ್ಟಿಕೊಂಡು ಕಣಕ್ಕಿಳಿಯುತ್ತಿರುವ ಈ ಎರಡು ತಂಡಗಳ ಪ್ಲೇಯಿಂಗ್ 11 ಹೇಗಿರಲಿದೆ ಎಂಬುದನ್ನು ನೋಡುವುದಾದರೆ..
ಕೆಕೆಆರ್ ತಂಡ ಹೇಗಿರಲಿದೆ?
ಆರ್‌ಸಿಬಿ ವಿರುದ್ಧದ ಮೊದಲ ಪಂದ್ಯದಲ್ಲಿ ಸುನಿಲ್ ನರೈನ್ ಮತ್ತು ಕ್ವಿಂಟನ್ ಡಿ ಕಾಕ್ ಕೆಕೆಆರ್ ಪರ ಆರಂಭಿಕರಾಗಿ ಆಡಬಹುದು. ಕಳೆದ ಕೆಲವು ವರ್ಷಗಳಿಂದ ಕೆಕೆಆರ್ ಪರ ಆರಂಭಿಕ ಆಟಗಾರನಾಗಿ ನರೈನ್ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ, ಆದರೆ ಕ್ವಿಂಟನ್ ಡಿ ಕಾಕ್ ಈ ವರ್ಷವಷ್ಟೇ ಕೆಕೆಆರ್ ಸೇರಿದ್ದಾರೆ. ಈ ಇಬ್ಬರೂ ಎಡಗೈ ಬ್ಯಾಟ್ಸ್‌ಮನ್‌ಗಳು ಈ ವರ್ಷ ಕೆಕೆಆರ್ ಪರ ಆರಂಭಿಕರಾಗಿ ಆಡಲಿದ್ದಾರೆ.
ನಾಯಕ ಅಜಿಂಕ್ಯ ರಹಾನೆ ಮೂರನೇ ಕ್ರಮಾಂಕದಲ್ಲಿ ಆಡಬಹುದು. ವೆಂಕಟೇಶ್ ಅಯ್ಯರ್ ನಾಲ್ಕನೇ ಕ್ರಮಾಂಕದಲ್ಲಿ ಆಡಲಿದ್ದು, ಕೆಳ ಮಧ್ಯಮ ಕ್ರಮಾಂಕದಲ್ಲಿ ಅಂಗ್‌ಕ್ರಿಶ್ ರಘುವಂಶಿ, ರಿಂಕು ಸಿಂಗ್, ಆಂಡ್ರೆ ರಸೆಲ್ ಮತ್ತು ರಮಣದೀಪ್ ಸಿಂಗ್ ಬ್ಯಾಟ್ ಬೀಸಲಿದ್ದಾರೆ. ಸ್ಪಿನ್ ವಿಭಾಗದಲ್ಲಿ ಸುನಿಲ್ ನರೈನ್ ಮತ್ತು ವರುಣ್ ಚಕ್ರವರ್ತಿ ಆಡುವುದು ಖಚಿತ. ವೇಗದ ಬೌಲರ್ಗಳಾಗಿ ಸ್ಪೆನ್ಸರ್ ಜಾನ್ಸನ್, ವೈಭವ್ ಅರೋರಾ, ಹರ್ಷಿತ್ ರಾಣಾಗೆ ಅವಕಾಶ ಸಿಗುವ ನಿರೀಕ್ಷೆಯಿದೆ.
ಕೆಕೆಆರ್ ಸಂಭಾವ್ಯ ಪ್ಲೇಯಿಂಗ್ 11: ಸುನಿಲ್ ನರೈನ್, ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಅಜಿಂಕ್ಯ ರಹಾನೆ (ನಾಯಕ), ವೆಂಕಟೇಶ್ ಅಯ್ಯರ್, ಅಂಗ್ಕ್ರಿಶ್ ರಘುವಂಶಿ, ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಸ್ಪೆನ್ಸರ್ ಜಾನ್ಸನ್, ವೈಭವ್ ಅರೋರಾ, ಹರ್ಷಿತ್ ರಾಣಾ/ವರುಣ್ ಚಕ್ರವರ್ತಿ
ಆರ್‌ಸಿಬಿ ತಂಡದಲ್ಲಿ ಯಾರಿಗೆ ಸ್ಥಾನ ಸಿಗಬಹುದು?
ಆರ್‌ಸಿಬಿ ಬ್ಯಾಟಿಂಗ್ ಬಗ್ಗೆ ಹೇಳುವುದಾದರೆ.. ವಿರಾಟ್ ಕೊಹ್ಲಿ ಹಾಗೂ ಫಿಲ್ ಸಾಲ್ಟ್ ಇನ್ನಿಂಗ್ಸ್ ಆರಂಭಿಸಿದರೆ, ನಾಯಕ ರಜತ್ ಪಾಟಿದಾರ್ ಎಂದಿನಂತೆ ಮೂರನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ನಾಲ್ಕನೇ ಕ್ರಮಾಂಕದಲ್ಲಿ ಲಿಯಾಮ್ ಲಿವಿಂಗ್‌ಸ್ಟೋನ್ ಬ್ಯಾಟ್ ಬೀಸಲಿದ್ದು, ಐದನೇ ಕ್ರಮಾಂಕದಲ್ಲಿ ಬರುವ ಜಿತೇಶ್ ಶರ್ಮಾ ವಿಕೆಟ್ ಕೀಪರ್ ಹಾಗೂ ಫಿನಿಷರ್ ಪಾತ್ರವನ್ನು ನಿರ್ವಹಿಸಲಿದ್ದಾರೆ. ಆರನೇ ಕ್ರಮಾಂಕಕ್ಕೆ ಪೈಪೋಟಿ ಇದ್ದು, ಜಾಕೋಬ್ ಬೆಥೆಲ್ ಅಥವಾ ಟಿಮ್ ಡೇವಿಡ್ ಅವರಲ್ಲಿ ಯಾರನ್ನು ಆಯ್ಕೆ ಮಾಡಲಾಗುತ್ತದೆ ಎಂಬುದು ಪ್ರಶ್ನೆಯಾಗಿದೆ.
ಸ್ಪಿನ್ ವಿಭಾಗದಲ್ಲಿ ಸ್ವಲ್ಪ ಬಲಹೀನವಾಗಿ ಕಾಣುತ್ತಿರುವ ಆರ್‌ಸಿಬಿ, ಸ್ಪಿನ್ ಆಲ್‌ರೌಂಡರ್ ಆಗಿ ಕೃನಲ್ ಪಾಂಡ್ಯರನ್ನು ಆಡಿಸುವುದು ಖಚಿತ. ಅವರೊಂದಿಗೆ ಸುಯಾಶ್ ಶರ್ಮಾ ಅಥವಾ ಸ್ವಪ್ನಿಲ್ ಸಿಂಗ್ ಇರಲಿದ್ದಾರೆ. ಬೌಲಿಂಗ್ ವಿಭಾಗವನ್ನು ಭುವನೇಶ್ವರ್ ಕುಮಾರ್, ಆಸ್ಟ್ರೇಲಿಯಾದ ಅನುಭವಿ ಜೋಶ್ ಹ್ಯಾಜಲ್‌ವುಡ್ ಹಾಗೂ ಯಶ್ ದಯಾಳ್ ಮುನ್ನಡೆಸುವುದು ಖಚಿತ. ರಸಿಕ್ ಸಲಾಂ ದಾರ್ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಾಣಿಸಿಕೊಳ್ಳಬಹುದಾಗಿದೆ. ಇವರ ಜೊತೆಗೆ ದಕ್ಷಿಣ ಆಫ್ರಿಕಾದ ವೇಗಿ ಲುಂಗಿ ಎನ್‌ಗಿಡಿ ಕೂಡ ಇದ್ದಾರೆ. ಆದರೆ ಅವರಿಗೆ ಎಷ್ಟು ಅವಕಾಶಗಳು ಸಿಗುತ್ತವೆ ಎಂದು ಹೇಳುವುದು ಕಷ್ಟ.
IPL 2025: ಎಲ್ಲಾ 10 ಐಪಿಎಲ್ ತಂಡಗಳಲ್ಲಿ ಯಾವ್ಯಾವ ಆಟಗಾರರಿದ್ದಾರೆ? ಇಲ್ಲಿದೆ ಪೂರ್ಣ ಪಟ್ಟಿ
ಆರ್‌ಸಿಬಿಯ ಸಂಭಾವ್ಯ ಪ್ಲೇಯಿಂಗ್ 11: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಜಾಕೋಬ್ ಬೆಥೆಲ್/ ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ ಕುಮಾರ್, ಜೋಶ್ ಹ್ಯಾಜಲ್‌ವುಡ್, ಯಶ್ ದಯಾಳ್, ಸುಯಾಶ್ ಶರ್ಮಾ/ ಸ್ವಪ್ನಿಲ್ ಸಿಂಗ್. (ರಸೀಖ್ ಸಲಾಮ್ ದಾರ್- ಇಂಪ್ಯಾಕ್ಟ್ ಪ್ಲೇಯರ್)
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:00 pm, Fri, 21 March 25