IPL 2025: 49 ನೆನಪಿದ್ಯಾ? RCB ಕಾಲೆಳೆದ KKR

IPL ಇತಿಹಾಸದಲ್ಲಿ ಅತ್ಯಂತ ಕಡಿಮೆ ಮೊತ್ತಕ್ಕೆ ಆಲೌಟ್ ಆದ ಕೆಟ್ಟ ದಾಖಲೆಯೊಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರಿನಲ್ಲಿದೆ. ಈ ಹೀನಾಯ ದಾಖಲೆಯನ್ನು ಪ್ರಸ್ತಾಪಿಸುವ ಮೂಲಕ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಇದೀಗ ಆರ್​ಸಿಬಿ ತಂಡದ ಕಾಲೆಳೆದಿದೆ. ಈ ಮೂಲಕ ಐಪಿಎಲ್​ ಆರಂಭಕ್ಕೂ ಮುನ್ನವೇ ಕೆಕೆಆರ್ ಮೈಂಡ್ ಗೇಮ್​ ಶುರು ಮಾಡಿದೆ.

IPL 2025: 49 ನೆನಪಿದ್ಯಾ? RCB ಕಾಲೆಳೆದ KKR
Rcb Vs Kkr

Updated on: Feb 18, 2025 | 2:21 PM

ಇಂಡಿಯನ್ ಪ್ರೀಮಿಯರ್ ಲೀಗ್ ವೇಳಾಪಟ್ಟಿ ಪ್ರಕಟವಾದ ಬೆನ್ನಲ್ಲೇ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕಾಲೆಳೆದಿದೆ. ಅದು ಕೂಡ 49 ರನ್​ಗಳ ಆಲೌಟ್ ಅನ್ನು ಪ್ರಸ್ತಾಪಿಸುವ ಮೂಲಕ ಎಂಬುದೇ ವಿಶೇಷ. 2017 ರಲ್ಲಿ ಆರ್​ಸಿಬಿ ತಂಡವು ಕೆಕೆಆರ್ ನೀಡಿದ 131 ರನ್​ಗಳ ಗುರಿಯನ್ನು ಬೆನ್ನತ್ತಿ ಕೇವಲ 49 ರನ್​ಗಳಿಗೆ ಆಲೌಟ್ ಆಗಿತ್ತು. ಈ ವೇಳೆ ಆರ್​ಸಿಬಿ ಪರ ಮೂಡಿಬಂದ ಗರಿಷ್ಠ ವೈಯುಕ್ತಿಕ ಸ್ಕೋರ್ 9 ರನ್​. ಇದನ್ನು ಬಾರಿಸಿದ್ದು ಕೇದರ್ ಜಾಧವ್.

ಅಂದು ಕೇವಲ 49 ರನ್​ಗೆ ಆಲೌಟ್ ಆಗುವ ಮೂಲಕ ಐಪಿಎಲ್​ ಇತಿಹಾಸದಲ್ಲೇ ಅತೀ ಕಡಿಮೆ ಮೊತ್ತಕ್ಕೆ ಸರ್ವಪತನ ಕಂಡ ತಂಡವೆಂಬ ಕೆಟ್ಟ ದಾಖಲೆಯನ್ನು ಆರ್​ಸಿಬಿ ತನ್ನದಾಗಿಸಿಕೊಂಡಿತು. ಇದನ್ನೇ ಪ್ರಸ್ತಾಪಿಸಿ ಇದಿಗ ಸೋಷಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡು ಕೆಕೆಆರ್, ಆರ್​ಸಿಬಿ ತಂಡದ ಕಾಲೆಳೆದಿದೆ.

ಇದಕ್ಕೆ ಮುಖ್ಯ ಕಾರಣ ಈ ಬಾರಿಯ ಐಪಿಎಲ್​ನ ಮೊದಲ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗುತ್ತಿರುವುದು. ಮಾರ್ಚ್ 22 ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಆರ್​ಸಿಬಿಗೆ ಕೆಕೆಆರ್​ ಹಳೆಯ ಸೋಲಿನ ಕಹಿ ನೆನಪನ್ನು ನೆನಪಿಸಿದೆ.

ಈ ಮೂಲಕ ಮೊದಲ ಪಂದ್ಯಕ್ಕೂ ಮುನ್ನವೇ ಕೊಲ್ಕತ್ತಾ ನೈಟ್ ರೈಡರ್ಸ್ ಆರ್​ಸಿಬಿ ವಿರುದ್ಧ ಮೈಂಡ್ ಗೇಮ್ ಆರಂಭಿಸಿದೆ. ಕೆಕೆಆರ್ ಕಾಲೆಳೆಯುವಿಕೆಗೆ ಆರ್​ಸಿಬಿ ಕಡೆಯಿಂದ ಈವರೆಗೆ ಯಾವುದೇ ಪ್ರತ್ಯುತ್ತರ ಬಂದಿಲ್ಲ.

ಅಂತಹದೊಂದು ಕೌಂಟರ್ ಅನ್ನು ಮಾರ್ಚ್​ 22 ರಂದು ನಿರೀಕ್ಷಿಸಬಹುದು. ಏಕೆಂದರೆ ಮೊದಲ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಆರ್​ಸಿಬಿ ಬಗ್ಗು ಬಡಿದರೆ, ಸೋಷಿಯಲ್ ಮೀಡಿಯಾದಲ್ಲಿ 49 ರನ್​ಗಳ ಟ್ರೋಲ್​ಗೆ ಉತ್ತರ ಸಿಗಬಹುದು. ಅಲ್ಲಿಯವರೆಗೂ ಆರ್​ಸಿಬಿ ಅಭಿಮಾನಿಗಳು ಕಾಯಲೇಬೇಕು.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ಯಶ್ ದಯಾಳ್, ಲಿಯಾಮ್ ಲಿವಿಂಗ್​ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹ್ಯಾಝಲ್​ವುಡ್, ರಸಿಖ್ ಸಲಾಂ, ಸುಯೇಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ನುವಾನ್ ತುಷಾರ, ರೊಮಾರಿಯೋ ಶೆಫರ್ಡ್, ಜೇಕೊಬ್ ಬೆಥೆಲ್, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕಾರ, ದೇವದತ್​ ಪಡಿಕ್ಕಲ್, ಮೋಹಿತ್ ರಾಠಿ, ಅಭಿನಂದನ್ ಸಿಂಗ್, ಲುಂಗಿ ಎನ್​ಗಿಡಿ.

ಇದನ್ನೂ ಓದಿ: IPL 2025: ಐಪಿಎಲ್ 2025ರ ವೇಳಾಪಟ್ಟಿ ಪ್ರಕಟ

ಕೊಲ್ಕತ್ತಾ ನೈಟ್ ರೈಡರ್ಸ್: ರಿಂಕು ಸಿಂಗ್, ವರುಣ್ ಚಕ್ರವರ್ತಿ, ಸುನಿಲ್ ನರೈನ್, ಆ್ಯಂಡ್ರೆ ರಸೆಲ್, ಹರ್ಷಿತ್ ರಾಣಾ, ರಮಣ್​​​ದೀಪ್ ಸಿಂಗ್, ವೆಂಕಟೇಶ್ ಅಯ್ಯರ್, ಕ್ವಿಂಟನ್ ಡಿ ಕಾಕ್, ರಹಮಾನುಲ್ಲಾ ಗುರ್ಬಾಝ್, ಅನ್ರಿಕ್ ನೋಕಿಯ, ಆಂಗ್‌ಕ್ರಿಶ್ ರಘುವಂಶಿ, ವೈಭವ್ ಅರೋರಾ, ಮಯಾಂಕ್ ಮಾರ್ಕಾಂಡೆ, ರೋವ್‌ಮನ್ ಪೊವೆಲ್, ಲವ್​​ನೀತ್ ಸಿಸೋಡಿಯಾ, ಅಜಿಂಕ್ಯ ರಹಾನೆ, ಅನ್ಕುಲ್ ರಾಯ್, ಮೊಯಿನ್ ಅಲಿ, ಉಮ್ರಾನ್ ಮಲಿಕ್, ಸ್ಪೆನ್ಸರ್ ಜಾನ್ಸನ್.

 

Published On - 2:20 pm, Tue, 18 February 25