IPL 2025: ಆರ್​ಸಿಬಿ- ಕೆಕೆಆರ್ ಪಂದ್ಯ ಎಲ್ಲಿ, ಎಷ್ಟು ಗಂಟೆಗೆ ಆರಂಭ? ಯಾವ ಚಾನೆಲ್​ನಲ್ಲಿ ನೇರಪ್ರಸಾರ?

KKR vs RCB IPL 2025: 2025ರ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ. ಕಳೆದ ವರ್ಷದ ಚಾಂಪಿಯನ್‌ ಆಗಿರುವ ಕೆಕೆಆರ್ ತಮ್ಮ ಶೀರ್ಷಿಕೆಯನ್ನು ಉಳಿಸಿಕೊಳ್ಳಲು ಪ್ರಯತ್ನಿಸಿದರೆ, ಆರ್‌ಸಿಬಿ ಗೆಲುವಿನೊಂದಿಗೆ ಟೂರ್ನಿ ಆರಂಭಿಸಲು ಬಯಸುತ್ತದೆ. ಈ ಪಂದ್ಯ ಮಾರ್ಚ್ 22ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದೆ. ಪಂದ್ಯದ ನೇರ ಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ಮತ್ತು ಜಿಯೋ ಸಿನಿಮಾದಲ್ಲಿ ವೀಕ್ಷಿಸಬಹುದು.

IPL 2025: ಆರ್​ಸಿಬಿ- ಕೆಕೆಆರ್ ಪಂದ್ಯ ಎಲ್ಲಿ, ಎಷ್ಟು ಗಂಟೆಗೆ ಆರಂಭ? ಯಾವ ಚಾನೆಲ್​ನಲ್ಲಿ ನೇರಪ್ರಸಾರ?
Rcb Vs Kkr

Updated on: Mar 21, 2025 | 7:26 PM

2025 ರ ಐಪಿಎಲ್ (IPL 2025) ಪಂದ್ಯಾವಳಿಯು ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (KKR vs RCB) ನಡುವಿನ ಪಂದ್ಯದೊಂದಿಗೆ ಪ್ರಾರಂಭವಾಗಲಿದೆ. ಕಳೆದ ಸೀಸನ್​ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪ್ರಶಸ್ತಿ ಗೆದ್ದಿದ್ದರೆ, ಕಳೆದ ಹಲವು ವರ್ಷಗಳಿಂದ ಆರ್‌ಸಿಬಿಯ ಪ್ರಶಸ್ತಿ ಗೆಲ್ಲುವ ಕನಸು ನನಸಾಗಿಲ್ಲ. ಹೀಗಾಗಿ ಆರ್​ಸಿಬಿ ಗೆಲುವಿನೊಂದಿಗೆ ಟೂರ್ನಿ ಆರಂಭಿಸುವ ಇರಾದೆಯಲ್ಲಿದ್ದರೆ, ಇತ್ತ ಕೆಕೆಆರ್ ತನ್ನ ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳಲು ಯತ್ನಿಸಲಿದೆ. ಆದಾಗ್ಯೂ ಎರಡು ತಂಡಗಳಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ಯಾವ ತಂಡ ಮೇಲುಗೈ ಸಾಧಿಸುತ್ತದೆ ಎಂಬುದನ್ನು ನೋಡಲು ಅಭಿಮಾನಿಗಳು ಕಾತುರರಾಗಿದ್ದಾರೆ.

ಮುಖಾಮುಖಿ ದಾಖಲೆ

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ. ಎರಡೂ ತಂಡಗಳು ಐಪಿಎಲ್‌ನಲ್ಲಿ ಇದುವರೆಗೆ 35 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಕೋಲ್ಕತ್ತಾ 21 ಪಂದ್ಯಗಳಲ್ಲಿ ಗೆದ್ದಿದ್ದರೆ, ಬೆಂಗಳೂರು 14 ಪಂದ್ಯಗಳಲ್ಲಿ ಗೆದ್ದಿದೆ. ಕಳೆದ ಎರಡು ಆವೃತ್ತಿಗಳಲ್ಲಿ ಆಡಿದ 4 ಪಂದ್ಯಗಳಲ್ಲೂ ಕೋಲ್ಕತ್ತಾ ತಂಡ, ಆರ್​ಸಿಬಿ ತಂಡವನ್ನು ಸೋಲಿಸಿದೆ. ಹೀಗಾಗಿ ರಜತ್ ಪಾಟಿದರ್ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿರುವ ಆರ್​ಸಿಬಿ, ರಹಾನೆ ನಾಯಕತ್ವದ ಕೆಕೆಆರ್ ವಿರುದ್ಧದ ಸೋಲಿನ ಸರಣಿಗೆ ಬ್ರೇಕ್ ಹಾಕಲು ಯತ್ನಿಸಲಿದೆ.

ಆರ್​ಸಿಬಿ ಮತ್ತು ಕೆಕೆಆರ್ ನಡುವಿನ ಐಪಿಎಲ್ ಪಂದ್ಯ ಯಾವಾಗ ನಡೆಯಲಿದೆ?

ಆರ್​ಸಿಬಿ ಮತ್ತು ಕೆಕೆಆರ್ ನಡುವಿನ ಐಪಿಎಲ್ ಪಂದ್ಯ ಮಾರ್ಚ್ 22 ರ ಶನಿವಾರ ನಡೆಯಲಿದೆ

ಇದನ್ನೂ ಓದಿ
ಐಪಿಎಲ್ ವೇಳಾಪಟ್ಟಿಯಲ್ಲಿ ಬದಲಾವಣೆ; ಗುವಾಹಟಿಗೆ ಪಂದ್ಯ ಶಿಫ್ಟ್
ಐಪಿಎಲ್ ಟಿಕೆಟ್ ಖರೀದಿಸುವವರಿಗೆ ಈ ಮಾಹಿತಿ ತಿಳಿದಿರಲಿ
ಮಾ.20 ರಂದು ಎಲ್ಲಾ 10 ತಂಡಗಳ ನಾಯಕರ ಸಭೆ ಕರೆದ ಬಿಸಿಸಿಐ
ಗುಜರಾತ್ ಟೈಟನ್ಸ್ ತಂಡಕ್ಕೆ ಹೊಸ ಮಾಲೀಕತ್ವ

ಆರ್​ಸಿಬಿ ಮತ್ತು ಕೆಕೆಆರ್ ನಡುವಿನ ಐಪಿಎಲ್ ಪಂದ್ಯ ಎಲ್ಲಿ ನಡೆಯಲಿದೆ?

ಆರ್​ಸಿಬಿ ಮತ್ತು ಕೆಕೆಆರ್ ನಡುವಿನ ಐಪಿಎಲ್ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದೆ.

ಆರ್​ಸಿಬಿ ಮತ್ತು ಕೆಕೆಆರ್ ನಡುವಿನ ಐಪಿಎಲ್ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಆರ್​ಸಿಬಿ ಮತ್ತು ಕೆಕೆಆರ್ ನಡುವಿನ ಐಪಿಎಲ್ ಪಂದ್ಯ ಭಾರತೀಯ ಕಾಲಮಾನ ಸಂಜೆ 7:30 ಕ್ಕೆ ಆರಂಭವಾಗಲಿದೆ. ಪಂದ್ಯ ಆರಂಭವಾಗುವ ಅರ್ಧ ಗಂಟೆ ಮೊದಲು ಟಾಸ್ ನಡೆಯಲಿದೆ.

ಆರ್​ಸಿಬಿ ಮತ್ತು ಕೆಕೆಆರ್ ನಡುವಿನ ಐಪಿಎಲ್ ಪಂದ್ಯವನ್ನು ವೀಕ್ಷಿಸುವುದು ಹೇಗೆ?

ಆರ್​ಸಿಬಿ ಮತ್ತು ಕೆಕೆಆರ್ ನಡುವಿನ ಐಪಿಎಲ್ ಪಂದ್ಯ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಮನೆಯಲ್ಲೇ ನೇರಪ್ರಸಾರ ವೀಕ್ಷಿಸಬಹುದು. ಹಾಗೆಯೇ ಈ ಪಂದ್ಯವನ್ನು ಜಿಯೋ ಸಿನಿಮಾ ಅಪ್ಲಿಕೇಶನ್ ಮತ್ತು ಹಾಟ್‌ಸ್ಟಾರ್ (ಆ್ಯಪ್ ಮತ್ತು ವೆಬ್‌ಸೈಟ್) ನಲ್ಲಿಯೂ ನೇರ ಪ್ರಸಾರ ವೀಕ್ಷಿಸಬಹುದು.

IPL 2025: ಚೊಚ್ಚಲ ಐಪಿಎಲ್ ಆಡುತ್ತಿರುವ ಈ 8 ಆಟಗಾರರ ಸಾಮರ್ಥ್ಯ ಏನು ಎಂಬುದು ತಿಳಿದಿರಲಿ

ಎರಡೂ ತಂಡಗಳು

ಕೋಲ್ಕತ್ತಾ ನೈಟ್ ರೈಡರ್ಸ್ ತಂಡ: ಅಜಿಂಕ್ಯ ರಹಾನೆ, ರಿಂಕು ಸಿಂಗ್, ವರುಣ್ ಚಕ್ರವರ್ತಿ, ಸುನಿಲ್ ನರೈನ್, ಆಂಡ್ರೆ ರಸೆಲ್, ಹರ್ಷಿತ್ ರಾಣಾ, ರಮಣದೀಪ್ ಸಿಂಗ್, ವೆಂಕಟೇಶ್ ಅಯ್ಯರ್, ಕ್ವಿಂಟನ್ ಡಿ ಕಾಕ್, ರಹಮಾನುಲ್ಲಾ ಗುರ್ಬಾಜ್, ಅನ್ರಿಚ್ ನೋಕಿಯಾ, ಆಂಗ್‌ಕ್ರಿಶ್ ರಘುವಂಶಿ, ವೈಭವ್ ಅರೋರಾ, ಮಯಾಂಕ್ ಮಾರ್ಕಾಂಡೆ, ರೋವ್‌ಮನ್ ಜಾನ್ ಪೊವೆಲ್, ಮನೀಶ್ ಪಾಂಡೆ, ಸ್ಪೆನ್ಸರ್ ಜಾನ್ಸನ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಲಿಯಾಮ್ ಲಿವಿಂಗ್‌ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹೇಜಲ್‌ವುಡ್, ರಸಿಖ್ ಸಲಾಮ್ ದಾರ್, ಸುಯಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ನುವಾನ್ ತುಷಾರ, ಮನೋಜ್ ಭಾಂಡಗೆ, ಜೇಕಬ್ ಬೆಥೆಲ್, ದೇವದತ್ ಪಡಿಕ್ಕಲ್, ಲುಂಗಿ ಎನ್‌ಗಿಡಿ, ಸ್ವಸ್ತಿಕ್ ಚಿಕ್ಕಾರ, ಅಭಿನಂದನ್ ಸಿಂಗ್, ಮೋಹಿತ್ ರಾಠಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ