AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಪ್ ಗೆದ್ದು ಕೊಡ್ತೀನಿ… RCB ಅಭಿಮಾನಿಗಳ ಮುಂದಿಟ್ಟ ಶಪಥ ಈಡೇರಿಸಿದ ಕೃನಾಲ್ ಪಾಂಡ್ಯ

IPL 2025 RCB vs PBKS: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ಗೆ ತೆರೆಬಿದ್ದಿದೆ. ಈ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ. ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್​ಗಳಿಂದ ಮಣಿಸಿ ಆರ್​ಸಿಬಿ ಕಿರೀಟ ಮುಡಿಗೇರಿಸಿಕೊಂಡಿದೆ. ವಿಶೇಷ ಎಂದರೆ ಐಪಿಎಲ್​ನ 52ನೇ ಪಂದ್ಯದ ವೇಳೆಯೇ ಕೃನಾಲ್ ಪಾಂಡ್ಯ ಈ ಸಲ ಕಪ್ ಗೆಲ್ಲಲೇಬೇಕು ಎಂದು ಶಪಥ ಮಾಡಿದ್ದರು. ಆ ಶಪಥದಂತೆ ಅವರು ಕೊನೆಯ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದು ವಿಶೇಷ.

ಕಪ್ ಗೆದ್ದು ಕೊಡ್ತೀನಿ... RCB ಅಭಿಮಾನಿಗಳ ಮುಂದಿಟ್ಟ ಶಪಥ ಈಡೇರಿಸಿದ ಕೃನಾಲ್ ಪಾಂಡ್ಯ
Krunal Pandya
ಝಾಹಿರ್ ಯೂಸುಫ್
|

Updated on: Jun 04, 2025 | 10:34 AM

Share

IPL 2025:  17 ವರ್ಷಗಳು…ಒಂದೇ ಒಂದು ಕಪ್ ಗೆದ್ದಿಲ್ಲ…ಪ್ರತಿ ಸೀಸನ್​ನಲ್ಲೂ ಲೆಕ್ಕಾಚಾರ…ಕೊನೆಗೆ ನೋವಿನ ವಿದಾಯ…ಇದಾಗ್ಯೂ ಅಂದಿಗೂ ಇಂದಿಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಅಭಿಮಾನಿಗಳ ನಿಷ್ಠೆ ಮಾತ್ರ ಬದಲಾಗಿರಲಿಲ್ಲ. ಪ್ರತಿ ಬಾರಿಯಂತೆ ಈ ಬಾರಿ ಕೂಡ ಆರ್​ಸಿಬಿ ಅಭಿಮಾನಿಗಳಿಂದ ಭರಪೂರ ಬೆಂಬಲ ವ್ಯಕ್ತವಾಗಿತ್ತು. ಅದರಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎರಡು ಬಾರಿ ಬಗ್ಗು ಬಡಿದ ರಾಯಲ್ ಪಡೆಗೆ ಅಭಿಮಾನಿಗಳು ಮಧ್ಯರಾತ್ರಿ ನೀಡಿದ ಸ್ವಾಗತ ನೋಡಿ ಖುದ್ದು ಆರ್​ಸಿಬಿ ಆಟಗಾರರೇ ರೋಮಾಂಚನಗೊಂಡಿದ್ದರು.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 52ನೇ ಪಂದ್ಯದಲ್ಲಿ ಆರ್​ಸಿಬಿ ಮತ್ತು ಸಿಎಸ್​ಕೆ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್​ಗಳಲ್ಲಿ 213 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 20 ಓವರ್​ಗಳಲ್ಲಿ 211 ರನ್​ಗಳಿಸಿ ನಿಯಂತ್ರಿಸಿ ಆರ್​ಸಿಬಿ ತಂಡ 2 ರನ್​ಗಳ ರೋಚಕ ಗೆಲುವು ದಾಖಲಿಸಿತು.

ಈ ಗೆಲುವಿನೊಂದಿಗೆ ಆರ್​ಸಿಬಿ ಅಭಿಮಾನಿಗಳ ಹರ್ಷೋದ್ಗಾರ ಮುಗಿಲು ಮುಟ್ಟಿತು. ಅಷ್ಟೇ ಅಲ್ಲದೆ ಆರ್​ಸಿಬಿ ಆಟಗಾರರು ಚಿನ್ನಸ್ವಾಮಿ ಸ್ಟೇಡಿಯಂನಿಂದ ಹೊರಬರುವ ತನಕ ಅಭಿಮಾನಿಗಳು ಕಾದು ನಿಂತಿದ್ದರು. ರಸ್ತೆಯುದ್ದಕ್ಕೂ ಕಾದು ನಿಂತಿದ್ದ ಫ್ಯಾನ್ಸ್ ಘೋಷವ್ಯಾಕ್ಯದೊಂದಿಗೆ ಆರ್​ಸಿಬಿ ತಂಡದ ಬಸ್​ ಅನ್ನು ಸ್ವಾಗತಿಸಿ ತಮ್ಮ ಅಭಿಮಾನ ಮರೆದಿದ್ದರು.

ಮಧ್ಯರಾತ್ರಿಯವರೆಗೆ ಕಾದು ನಿಂತು ತೋರಿದ ಈ ಅಭಿಮಾನಕ್ಕೆ ಆರ್​ಸಿಬಿ ಆಟಗಾರರು ಪುಳಕಿತರಾಗಿದ್ದರು ಅಷ್ಟೇ ಅಲ್ಲದೆ ಈ ಕ್ರೇಝ್ ನೋಡಿ ರೋಮಾಂಚನಗೊಂಡ ಕೃನಾಲ್ ಪಾಂಡ್ಯ, ಈ ಸಲ ಇವರಿಗಾಗಿ ನಾವು ಕಪ್ ಗೆಲ್ಲಲೇಬೇಕು ಎಂದು ಶಪಥ ಮಾಡಿದ್ದರು. ಈ ಶಪಥವನ್ನು ಇದೀಗ ಪಾಂಡ್ಯ ಈಡೇರಿಸಿದ್ದಾರೆ. ಅದು ಕೂಡ ಫೈನಲ್ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ.

ಅಹಮದಾಬಾದ್​ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 190 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ಒಂದು ಹಂತದವರೆಗೆ ಉತ್ತಮ ಸ್ಥಿತಿಯಲ್ಲಿಯೇ ಇತ್ತು. ಆದರೆ ಯಾವಾಗ ಕೃನಾಲ್ ಪಾಂಡ್ಯ ಬೌಲಿಂಗ್ ಶುರು ಮಾಡಿದರೋ, ಇಡೀ ಪಂದ್ಯದ ಗತಿ ಬದಲಾಯಿತು.

ಫಿಂಗರ್ ಸ್ಪಿನ್ ಮೂಲಕ ದಾಳಿ ಸಂಘಟಿಸಿದ ಕೃನಾಲ್ ಪಾಂಡ್ಯ 4 ಓವರ್​ಗಳಲ್ಲಿ ನೀಡಿದ್ದು ಕೇವಲ 17 ರನ್​ಗಳು ಮಾತ್ರ. ಇದರ ಜೊತೆಗೆ ಡೇಂಜರಸ್ ಜೋಶ್ ಇಂಗ್ಲಿಸ್ ಹಾಗೂ ಪಭ್​ಸಿಮ್ರಾನ್ ಸಿಂಗ್ ಅವರ ವಿಕೆಟ್​ಗಳನ್ನು ಸಹ ಪಡೆದರು. ಈ ಮೂಲಕ ಫೈನಲ್ ಪಂದ್ಯದ ಗೆಲುವಿನ ರೂವಾರಿಯಾಗಿ ಹೊರಹೊಮ್ಮಿದ್ದರು.

ಇದನ್ನೂ ಓದಿ: ದಾಖಲೆ ಭರ್ಜರಿ ದಾಖಲೆ… ಈ ರೀತಿಯಾಗಿ ಟ್ರೋಫಿ ಎತ್ತಿಹಿಡಿದ ಏಕೈಕ ತಂಡ RCB

ಈ ಮೂಲಕ ತಿಂಗಳ ಹಿಂದೆ ಆರ್​ಸಿಬಿ ಅಭಿಮಾನಿಗಳ ಮುಂದೆ ಮಾಡಿದ ಶಪಥವನ್ನು ಕೃನಾಲ್ ಪಾಂಡ್ಯ ಈಡೇರಿಸಿದ್ದಾರೆ. ಅಷ್ಟೇ ಅಲ್ಲದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೊಚ್ಚಲ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ಆರ್​ಸಿಬಿ ಅಭಿಮಾನಿಗಳನ್ನು ನೊಡಿ ಕೃನಾಲ್ ಪಾಂಡ್ಯ ಶಪಥ ಮಾಡಿದ ವಿಡಿಯೋ:

ಸದ್ಯ ಟ್ರೋಫಿ ಗೆದ್ದಿರುವ ಆರ್​ಸಿಬಿ ಪಡೆ ಇಂದು (ಜೂ.4) ಬೆಂಗಳೂರಿಗೆ ಆಗಮಿಸಲಿದ್ದು, ಸಂಜೆ 3.30 ರಿಂದ ರಾಯಲ್ ಪಡೆಯ ವಿಜಯಯಾತ್ರೆ ನಡೆಯಲಿದೆ. ಈ ವಿಜಯೋತ್ಸವದ ಯಾತ್ರೆಯು ಬೆಂಗಳೂರಿನ ವಿಧಾನಸೌಧದಿಂದ ಪ್ರಾರಂಭವಾಗಲಿದ್ದು, ಚಿನ್ನಸ್ವಾಮಿ ಸ್ಟೇಡಿಯಂವರೆಗೆ ಮುಂದುವರೆಯಲಿದೆ.

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?