AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ನಿರೀಕ್ಷೆಯಂತೆ ಆರ್​​ಸಿಬಿ ತಂಡದಲ್ಲಿ 1 ಬದಲಾವಣೆ; ವಿಂಡೀಸ್ ದೈತ್ಯನಿಗೆ ಅವಕಾಶ

PBKS vs RCB: ಐಪಿಎಲ್ 2025 ರ 37ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಆರ್‌ಸಿಬಿ ನಾಯಕ ರಜತ್ ಪಟಿದಾರ್ ಮೊದಲು ಬೌಲಿಂಗ್ ಆಯ್ಕೆ ಮಾಡಿದ್ದಾರೆ. ಆರ್‌ಸಿಬಿ ತಂಡದಲ್ಲಿ ಲಿಯಾಮ್ ಲಿವಿಂಗ್‌ಸ್ಟೋನ್ ಬದಲಿಗೆ ರೊಮಾರಿಯೊ ಶೆಫರ್ಡ್ ಅವರನ್ನು ಸೇರಿಸಿಕೊಳ್ಳಲಾಗಿದೆ. ಪಂಜಾಬ್ ತಂಡದಲ್ಲಿ ಬದಲಾವಣೆಗಳಿಲ್ಲ. ಚಂಡೀಗಡದ ಮುಲ್ಲನ್‌ಪುರ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದೆ.

IPL 2025: ನಿರೀಕ್ಷೆಯಂತೆ ಆರ್​​ಸಿಬಿ ತಂಡದಲ್ಲಿ 1 ಬದಲಾವಣೆ; ವಿಂಡೀಸ್ ದೈತ್ಯನಿಗೆ ಅವಕಾಶ
Pbks Vs Rcb Toss
Follow us
ಪೃಥ್ವಿಶಂಕರ
|

Updated on:Apr 20, 2025 | 3:33 PM

ಐಪಿಎಲ್ 2025 (IPL 2025) ರ 37 ನೇ ಪಂದ್ಯವು ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (PBKS vs RCB) ನಡುವೆ ಚಂಡೀಗಢದ ಮುಲ್ಲನ್‌ಪುರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ ನಾಯಕ ರಜತ್ ಪಟಿದಾರ್ (Rajat Patidar) ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಪಂಜಾಬ್ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ. ಟಾಸ್ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಇದರಲ್ಲಿ ನಿರೀಕ್ಷೆಯಂತೆ ಆರ್​ಸಿಬಿ ತಂಡದಲ್ಲಿ 1 ಬದಲಾವಣೆ ಮಾಡಲಾಗಿದೆ

ಮೇಲೆ ಹೇಳಿದಂತೆ ಈ ಪಂದ್ಯದಲ್ಲಿ ಟಾಸ್ ಗೆದ್ದ ರಜತ್ ಪಟಿದಾರ್ ಟಾಸ್ ಗೆದ್ದು ಪಂಜಾಬ್ ಕಿಂಗ್ಸ್ ವಿರುದ್ಧ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಆ ಬಳಿಕ ಪ್ಲೇಯಿಂಗ್ 11 ಬಗ್ಗೆ ಮಾತನಾಡಿದ ರಜತ್, ತಂಡದಲ್ಲಿ 1 ಬದಲಾವಣೆ ಮಾಡಲಾಗಿದ್ದು, ಲಿಯಾಮ್ ಲಿವಿಂಗ್‌ಸ್ಟೋನ್ ಬದಲಿಗೆ ರೊಮಾರಿಯೊ ಶೆಫರ್ಡ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿರುವುದಾಗಿ ತಿಳಿಸಿದರು. ಇತ್ತ ಪಂಜಾಬ್ ತಂಡದ ಪ್ಲೇಯಿಂಗ್-11 ರಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ.

ಹೆಡ್ ಟು ಹೆಡ್ ದಾಖಲೆ

ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ 34 ಪಂದ್ಯಗಳು ನಡೆದಿವೆ. ಈ 34 ಪಂದ್ಯಗಳಲ್ಲಿ ಪಂಜಾಬ್ 18 ಪಂದ್ಯಗಳನ್ನು ಗೆದ್ದಿದ್ದರೆ ಬೆಂಗಳೂರು 16 ಪಂದ್ಯಗಳನ್ನು ಗೆದ್ದಿದೆ.

PBKS vs RCB Live Score, IPL 2025: ಟಾಸ್ ಗೆದ್ದ ಆರ್​ಸಿಬಿ ಬೌಲಿಂಗ್ ಆಯ್ಕೆ

ಉಭಯ ತಂಡಗಳ ಪ್ಲೇಯಿಂಗ್-11

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ (ನಾಯಕ), ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಸುಯಾಶ್ ಶರ್ಮಾ, ಯಶ್ ದಯಾಲ್.

ಪಂಜಾಬ್ ಕಿಂಗ್ಸ್: ಪ್ರಭಾಸಿಮ್ರಾನ್ ಸಿಂಗ್ , ಪ್ರಿಯಾಂಶ್ ಆರ್ಯ, ನೇಹಾಲ್ ವಧೇರಾ, ಶ್ರೇಯಸ್ ಅಯ್ಯರ್ (ನಾಯಕ), ಶಶಾಂಕ್ ಸಿಂಗ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಮಾರ್ಕಸ್ ಸ್ಟೋನಿಸ್, ಮಾರ್ಕೊ ಜಾನ್ಸೆನ್, ಕ್ಸೇವಿಯರ್ ಬಾರ್ಟ್ಲೆಟ್, ಅರ್ಶ್ದೀಪ್ ಸಿಂಗ್, ಯುಜ್ವೇಂದ್ರ ಚಾಹಲ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:24 pm, Sun, 20 April 25

ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್