
ಐಪಿಎಲ್ 2025 (IPL 2025) ರ 37 ನೇ ಪಂದ್ಯವು ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (PBKS vs RCB) ನಡುವೆ ಚಂಡೀಗಢದ ಮುಲ್ಲನ್‌ಪುರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ ನಾಯಕ ರಜತ್ ಪಟಿದಾರ್ (Rajat Patidar) ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಪಂಜಾಬ್ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ. ಟಾಸ್ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಇದರಲ್ಲಿ ನಿರೀಕ್ಷೆಯಂತೆ ಆರ್‌ಸಿಬಿ ತಂಡದಲ್ಲಿ 1 ಬದಲಾವಣೆ ಮಾಡಲಾಗಿದೆ
ಮೇಲೆ ಹೇಳಿದಂತೆ ಈ ಪಂದ್ಯದಲ್ಲಿ ಟಾಸ್ ಗೆದ್ದ ರಜತ್ ಪಟಿದಾರ್ ಟಾಸ್ ಗೆದ್ದು ಪಂಜಾಬ್ ಕಿಂಗ್ಸ್ ವಿರುದ್ಧ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಆ ಬಳಿಕ ಪ್ಲೇಯಿಂಗ್ 11 ಬಗ್ಗೆ ಮಾತನಾಡಿದ ರಜತ್, ತಂಡದಲ್ಲಿ 1 ಬದಲಾವಣೆ ಮಾಡಲಾಗಿದ್ದು, ಲಿಯಾಮ್ ಲಿವಿಂಗ್‌ಸ್ಟೋನ್ ಬದಲಿಗೆ ರೊಮಾರಿಯೊ ಶೆಫರ್ಡ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿರುವುದಾಗಿ ತಿಳಿಸಿದರು. ಇತ್ತ ಪಂಜಾಬ್ ತಂಡದ ಪ್ಲೇಯಿಂಗ್-11 ರಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ.
ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ 34 ಪಂದ್ಯಗಳು ನಡೆದಿವೆ. ಈ 34 ಪಂದ್ಯಗಳಲ್ಲಿ ಪಂಜಾಬ್ 18 ಪಂದ್ಯಗಳನ್ನು ಗೆದ್ದಿದ್ದರೆ ಬೆಂಗಳೂರು 16 ಪಂದ್ಯಗಳನ್ನು ಗೆದ್ದಿದೆ.
PBKS vs RCB Live Score, IPL 2025: ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ (ನಾಯಕ), ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಸುಯಾಶ್ ಶರ್ಮಾ, ಯಶ್ ದಯಾಲ್.
ಪಂಜಾಬ್ ಕಿಂಗ್ಸ್: ಪ್ರಭಾಸಿಮ್ರಾನ್ ಸಿಂಗ್ , ಪ್ರಿಯಾಂಶ್ ಆರ್ಯ, ನೇಹಾಲ್ ವಧೇರಾ, ಶ್ರೇಯಸ್ ಅಯ್ಯರ್ (ನಾಯಕ), ಶಶಾಂಕ್ ಸಿಂಗ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಮಾರ್ಕಸ್ ಸ್ಟೋನಿಸ್, ಮಾರ್ಕೊ ಜಾನ್ಸೆನ್, ಕ್ಸೇವಿಯರ್ ಬಾರ್ಟ್ಲೆಟ್, ಅರ್ಶ್ದೀಪ್ ಸಿಂಗ್, ಯುಜ್ವೇಂದ್ರ ಚಾಹಲ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:24 pm, Sun, 20 April 25