AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಸಿಎಸ್​ಕೆ ವಿರುದ್ಧ ಆರ್​ಸಿಬಿ ಸೋಲಿಗೆ 6 ತಂಡಗಳ ಪ್ರಾರ್ಥನೆ

RCB's Crucial IPL 2025 Match: ಐಪಿಎಲ್ 2025ರ 52ನೇ ಪಂದ್ಯದಲ್ಲಿ ಆರ್‌ಸಿಬಿ ಮತ್ತು ಸಿಎಸ್‌ಕೆ ತಂಡಗಳು ಮುಖಾಮುಖಿಯಾಗಲಿವೆ. ಪ್ಲೇಆಫ್‌ಗೆ ಅರ್ಹತೆ ಪಡೆಯಲು ಆರ್‌ಸಿಬಿಗೆ ಈ ಪಂದ್ಯ ಅತ್ಯಂತ ಮುಖ್ಯ. ಆರ್‌ಸಿಬಿ ಗೆದ್ದರೆ, ಪ್ಲೇಆಫ್‌ನಲ್ಲಿ ಅದರ ಸ್ಥಾನ ಖಚಿತವಾಗುತ್ತದೆ. ಆದರೆ, ಆರ್‌ಸಿಬಿ ಸೋತರೆ, ಉಳಿದ 6 ತಂಡಗಳಿಗೆ ಪ್ಲೇಆಫ್‌ಗೆ ಹೋಗಲು ಅವಕಾಶವಿದೆ. ಆದ್ದರಿಂದ ಈ ಪಂದ್ಯದ ಫಲಿತಾಂಶದ ಮೇಲೆ ಅನೇಕ ತಂಡಗಳ ಭವಿಷ್ಯ ಅವಲಂಬಿತವಾಗಿದೆ.

IPL 2025: ಸಿಎಸ್​ಕೆ ವಿರುದ್ಧ ಆರ್​ಸಿಬಿ ಸೋಲಿಗೆ 6 ತಂಡಗಳ ಪ್ರಾರ್ಥನೆ
Rcb
ಪೃಥ್ವಿಶಂಕರ
|

Updated on: May 03, 2025 | 4:24 PM

Share

ಐಪಿಎಲ್ 2025 (IPL 2025) ರ 52 ನೇ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB vs CSK) ತಂಡಗಳ ನಡುವೆ ಹಣಾಹಣಿ ನಡೆಯಲಿದೆ. ಪ್ಲೇಆಫ್ ರೇಸ್ ಪರಿಗಣಿಸಿ ಈ ಪಂದ್ಯ ಬಹಳ ಮುಖ್ಯವಾಗಲಿದೆ. ಸಿಎಸ್‌ಕೆ ಪ್ಲೇಆಫ್ ರೇಸ್‌ನಿಂದ ಹೊರಬಿದಿದ್ದರೂ, ಆರ್‌ಸಿಬಿ ಪ್ಲೇಆಫ್‌ ಲೆಕ್ಕಾಚಾರವನ್ನು ಬುಡಮೇಲು ಮಾಡಲು ಪ್ರಯತ್ನಿಸಲಿದೆ. ಅದೇ ಸಮಯದಲ್ಲಿ, ಆರ್‌ಸಿಬಿ ಈ ಪಂದ್ಯವನ್ನು ಗೆಲ್ಲುವ ಮೂಲಕ ಪ್ಲೇಆಫ್‌ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳುವ ಗುರಿಯನ್ನು ಹೊಂದಿದೆ. ಹೀಗಾಗಿ ಈ ಪಂದ್ಯದಲ್ಲಿ ಆರ್‌ಸಿಬಿ ಸೋಲಲಿ ಎಂದು 6 ​​ತಂಡಗಳು ಪ್ರಾರ್ಥಿಸಲಾರಂಭಿಸಿವೆ.

6 ​​ತಂಡಗಳ ಪ್ರಾರ್ಥನೆ

ಇಲ್ಲಿಯವರೆಗೆ, ಸಿಎಸ್‌ಕೆ, ರಾಜಸ್ಥಾನ ಮತ್ತು ಹೈದರಾಬಾದ್ ತಂಡಗಳು ಐಪಿಎಲ್ 2025 ರ ಪ್ಲೇಆಫ್ ರೇಸ್‌ನಿಂದ ಹೊರಗುಳಿದಿವೆ. ಆರ್‌ಸಿಬಿ ಹೊರತುಪಡಿಸಿ, ಗುಜರಾತ್ ಟೈಟನ್ಸ್, ಮುಂಬೈ ಇಂಡಿಯನ್ಸ್, ಡೆಲ್ಲಿ ಕ್ಯಾಪಿಟಲ್ಸ್, ಪಂಜಾಬ್ ಕಿಂಗ್ಸ್, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಇನ್ನೂ ಪ್ಲೇಆಫ್ ರೇಸ್‌ನಲ್ಲಿವೆ. ಅಂತಹ ಪರಿಸ್ಥಿತಿಯಲ್ಲಿ, ಆರ್‌ಸಿಬಿ ತಂಡ ಈ ಪಂದ್ಯವನ್ನು ಗೆದ್ದರೆ, ಅದು ಪ್ಲೇಆಫ್‌ಗೆ ಅರ್ಹತೆ ಪಡೆಯುವುದು ಬಹುತೇಕ ಖಚಿತ. ಇದರಿಂದಾಗಿ ಪ್ಲೇಆಫ್‌ಗೆ ಕೇವಲ 3 ಸ್ಥಾನಗಳು ಖಾಲಿ ಉಳಿಯಲಿದ್ದು, ಉಳಿದ ತಂಡಗಳಿಗೆ ಅರ್ಹತೆ ಪಡೆಯುವ ಸಾಧ್ಯತೆಗಳು ಕಡಿಮೆಯಾಗುತ್ತವೆ.

ಮುಂಬೈ ಇಂಡಿಯನ್ಸ್ ತಂಡವು ಆಡಿರುವ 11 ಪಂದ್ಯಗಳಲ್ಲಿ 7 ಗೆಲುವುಗಳೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಅದೇ ಸಮಯದಲ್ಲಿ, ಗುಜರಾತ್ 10 ಪಂದ್ಯಗಳಲ್ಲಿ 7 ಗೆಲುವುಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಮತ್ತೊಂದೆಡೆ, ಆರ್‌ಸಿಬಿ 14 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, ಪಂಜಾಬ್ 13 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ. ಇವುಗಳಲ್ಲದೆ, ಡೆಲ್ಲಿ ಕ್ಯಾಪಿಟಲ್ಸ್ 12 ಅಂಕ, ಲಕ್ನೋ ಸೂಪರ್ ಜೈಂಟ್ಸ್ 10 ಅಂಕ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ 9 ಅಂಕಗಳನ್ನು ಹೊಂದಿವೆ. ಮುಂಬೈ ಹೊರತುಪಡಿಸಿ, ಉಳಿದೆಲ್ಲ ತಂಡಗಳು ತಲಾ 4 ಪಂದ್ಯಗಳನ್ನು ಆಡಬೇಕಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ಈ ತಂಡಗಳಲ್ಲಿ ಯಾವುದಾದರೂ ಪ್ಲೇಆಫ್‌ಗೆ ಅರ್ಹತೆ ಪಡೆಯಬಹುದು.

IPL 2025: ಆರ್​ಸಿಬಿ- ಸಿಎಸ್​ಕೆ ಲಾಸ್ಟ್ ಫೈಟ್; ಪಂದ್ಯ ಎಲ್ಲಿ ಯಾವಾಗ ಎಷ್ಟು ಗಂಟೆಗೆ ಆರಂಭ?

ಉತ್ತಮ ಫಾರ್ಮ್‌ನಲ್ಲಿ ಆರ್‌ಸಿಬಿ ತಂಡ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ರಸ್ತುತ ಉತ್ತಮ ಫಾರ್ಮ್‌ನಲ್ಲಿದೆ. ಒಂದೆಡೆ ಆರ್​ಸಿಬಿ ಕಳೆದ ಮೂರು ಪಂದ್ಯಗಳನ್ನು ಗೆದ್ದಿದ್ದರೆ, ಇನ್ನೊಂದೆಡೆ ಸಿಎಸ್‌ಕೆ ತನ್ನ ಕೊನೆಯ ಮೂರು ಪಂದ್ಯಗಳನ್ನು ಸೋತಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಆರ್‌ಸಿಬಿ ಮೇಲುಗೈ ಸಾಧಿಸುವ ಸಾಧ್ಯತೆಗಳಿವೆ. ಆದ್ದರಿಂದ ಉಳಿದ 6 ತಂಡಗಳಿಗೂ ಇದು ಆತಂಕವನ್ನುಂಟು ಮಾಡಿದೆ.

ಆರ್‌ಸಿಬಿ ಈ ಸೀಸನ್‌ನಲ್ಲಿ ಈಗಾಗಲೇ ಸಿಎಸ್‌ಕೆ ತಂಡವನ್ನು ಸೋಲಿಸಿದೆ. ಈ ಎರಡೂ ತಂಡಗಳ ನಡುವಿನ ಮೊದಲ ಮುಖಾಮುಖಿ ಮಾರ್ಚ್ 28 ರಂದು ಚೆನ್ನೈನಲ್ಲಿ ನಡೆಯಿತು. ಆ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 50 ರನ್‌ಗಳಿಂದ ಜಯಗಳಿಸಿತ್ತು. ಆದಾಗ್ಯೂ ಐಪಿಎಲ್ ಇತಿಹಾಸದಲ್ಲಿ ಆರ್‌ಸಿಬಿಗೆ ಒಂದೇ ಸೀಸನ್‌ನಲ್ಲಿ ಸಿಎಸ್‌ಕೆ ತಂಡವನ್ನು ಎರಡು ಲೀಗ್ ಪಂದ್ಯಗಳಲ್ಲಿ ಸೋಲಿಸಲು ಸಾಧ್ಯವಾಗಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಈ ಪಂದ್ಯವನ್ನು ಗೆಲ್ಲುವುದು ರಜತ್ ಪಡೆಗೆ ದೊಡ್ಡ ಸವಾಲಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ