AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: 3.5 ಕೋಟಿ ರೂ. ಬಿಟ್ಟುಕೊಟ್ಟು ಐಪಿಎಲ್ ತೊರೆದ ಆಸ್ಟ್ರೇಲಿಯಾ ವೇಗಿ

Mitchell Starc Quits IPL 2025: ಐಪಿಎಲ್ 2025ರ ಉಳಿದ ಪಂದ್ಯಗಳಿಂದ ಆಸ್ಟ್ರೇಲಿಯಾದ ಅನುಭವಿ ವೇಗಿ ಮಿಚೆಲ್ ಸ್ಟಾರ್ಕ್ ಹಿಂದೆ ಸರಿದಿದ್ದಾರೆ. ಇದರಿಂದ ಅವರು ಸುಮಾರು 3.5 ಕೋಟಿ ರೂಪಾಯಿಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಇದು ದೊಡ್ಡ ಹೊಡೆತವಾಗಿದೆ. ಐಪಿಎಲ್ ನಿಯಮಗಳ ಪ್ರಕಾರ, ಪಂದ್ಯಗಳನ್ನು ಆಡದಿದ್ದರೆ ಆಟಗಾರರ ವೇತನ ಕಡಿತಗೊಳಿಸಬಹುದು. ಸ್ಟಾರ್ಕ್ 11 ಪಂದ್ಯಗಳಲ್ಲಿ 14 ವಿಕೆಟ್ ಪಡೆದಿದ್ದರು.

IPL 2025: 3.5 ಕೋಟಿ ರೂ. ಬಿಟ್ಟುಕೊಟ್ಟು ಐಪಿಎಲ್ ತೊರೆದ ಆಸ್ಟ್ರೇಲಿಯಾ ವೇಗಿ
Mitchell Starc
ಪೃಥ್ವಿಶಂಕರ
|

Updated on:May 16, 2025 | 5:22 PM

Share

ಐಪಿಎಲ್ (IPL 2025) ದ್ವಿತೀಯಾರ್ಧ ಮೇ 17 ರಿಂದ ಮತ್ತೆ ಪ್ರಾರಂಭವಾಗಲಿದೆ. ಇದಕ್ಕೂ ಮುನ್ನ, ಭಾರತ ಮತ್ತು ಪಾಕಿಸ್ತಾನದ ಗಡಿಯಲ್ಲಿ ಉದ್ವಿಗ್ನತೆ ಉಂಟಾಗಿದ್ದರಿಂದ ಬಿಸಿಸಿಐ (BCCI) ಪಂದ್ಯಾವಳಿಯನ್ನು ಒಂದು ವಾರ ಸ್ಥಗಿತಗೊಳಿಸಿತ್ತು. ವಾಸ್ತವವಾಗಿ, ಮೇ 8, 2025 ರಂದು, ಧರ್ಮಶಾಲಾದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವನ್ನು ಇದ್ದಕ್ಕಿದ್ದಂತೆ ನಿಲ್ಲಿಸಲಾಯಿತು. ಇದಕ್ಕೆ ಕಾರಣ ಗಡಿಯಲ್ಲಿ ಹೆಚ್ಚುತ್ತಿದ್ದ ಉದ್ವಿಗ್ನತೆ ಮತ್ತು ಡ್ರೋನ್ ದಾಳಿ. ಇದರಿಂದಾಗಿ ಅನೇಕ ವಿದೇಶಿ ಆಟಗಾರರು ತಮ್ಮ ದೇಶಕ್ಕೆ ಹಿಂದಿರುಗಿದ್ದರು. ಈ ಆಟಗಾರರಲ್ಲಿ ಕೆಲವರು ಲೀಗ್‌ನ ಉಳಿದ ಪಂದ್ಯಗಳಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ. ಅವರುಗಳಲ್ಲಿ ಆಸ್ಟ್ರೇಲಿಯಾದ ಪ್ರಮುಖ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ (Mitchell Starc)​ ಕೂಡ ಒಬ್ಬರು.

ಕಡಿಮೆ ವೇತನ ಪಡೆಯಲಿರುವ ಸ್ಟಾರ್ಕ್

ಡೆಲ್ಲಿ ಕ್ಯಾಪಿಟಲ್ಸ್ ತಂಡದ ವೇಗಿ ಮಿಚೆಲ್ ಸ್ಟಾರ್ಕ್ ಉಳಿದ ಐಪಿಎಲ್ ಪಂದ್ಯಗಳನ್ನು ಆಡದಿರಲು ನಿರ್ಧರಿಸಿದ್ದಾರೆ. ಉಳಿದ ಪಂದ್ಯಗಳಿಂದ ಹಿಂದೆ ಸರಿಯುವ ನಿರ್ಧಾರದ ಬಗ್ಗೆ ಸ್ಟಾರ್ಕ್ ತಮ್ಮ ಫ್ರಾಂಚೈಸ್ ಡೆಲ್ಲಿ ಕ್ಯಾಪಿಟಲ್ಸ್‌ಗೆ ತಿಳಿಸಿದ್ದಾರೆ ಎಂದು ಹಲವಾರು ವರದಿಗಳು ಹೇಳಿವೆ. ವರದಿಗಳ ಪ್ರಕಾರ, ಈ ನಿರ್ಧಾರಕ್ಕಾಗಿ ಸ್ಟಾರ್ಕ್ ಸುಮಾರು 400,000 ಡಾಲರ್, ಅಂದರೆ ಸರಿಸುಮಾರು 3.5 ಕೋಟಿ ರೂಪಾಯಿಗಳನ್ನು ತ್ಯಾಗ ಮಾಡಲು ಸಿದ್ಧರಿದ್ದಾರೆ.

ಕೋಡ್ ಸ್ಪೋರ್ಟ್ಸ್ ವರದಿಯ ಪ್ರಕಾರ, ಐಪಿಎಲ್‌ನ ನಿಯಮಗಳಲ್ಲಿ ಒಂದಾದ ಆಟಗಾರನು ಸೀಸನ್​ನ ಎಲ್ಲಾ ಪಂದ್ಯಗಳನ್ನು ಆಡದಿದ್ದರೆ, ಆ ತಂಡವು ಆಟಗಾರರ ವೇತನವನ್ನು ಕಡಿತಗೊಳಿಸುವ ಅಧಿಕಾರವನ್ನು ಹೊಂದಿರುತ್ತದೆ. ಈ ನಿಯಮದ ಪ್ರಕಾರ, ಈ ಹಣವನ್ನು ಮಿಚೆಲ್ ಸ್ಟಾರ್ಕ್ ಅವರ ಸಂಬಳದಿಂದ ಕಡಿತಗೊಳಿಸಲಾಗುತ್ತದೆ. ಐಪಿಎಲ್ 2025 ರ ಹರಾಜಿನಲ್ಲಿ ಮಿಚೆಲ್ ಸ್ಟಾರ್ಕ್ ಅವರನ್ನು ಖರೀದಿಸಲು ಮುಂಬೈ ಇಂಡಿಯನ್ಸ್, ಕೆಕೆಆರ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಆರ್‌ಸಿಬಿ ಪೈಪೋಟಿ ನಡೆಸಿದ್ದವು. ಆದರೆ ಕೊನೆಯಲ್ಲಿ, ಡೆಲ್ಲಿ ಕ್ಯಾಪಿಟಲ್ಸ್ 11.75 ಕೋಟಿ ರೂ.ಗೆ ಸ್ಟಾರ್ಕ್​ ಅವರನ್ನು ತಂಡಕ್ಕೆ ಸೇರಿಸಿಕೊಂಡಿತು. ಈಗ ಸ್ಟಾರ್ಕ್ ಈ ಮೊತ್ತದಿಂದ 3.5 ಕೋಟಿ ರೂ.ಗಳನ್ನು ಬಿಟ್ಟುಕೊಡಬೇಕಾಗುತ್ತದೆ.

IPL 2025: ಕೆಕೆಆರ್ ವಿರುದ್ಧ 10 ವರ್ಷಗಳ ಇತಿಹಾಸ ಬದಲಿಸುತ್ತಾ ಆರ್​ಸಿಬಿ?

2025 ರ ಐಪಿಎಲ್‌ನಲ್ಲಿ ಸ್ಟಾರ್ಕ್​ ಪ್ರದರ್ಶನ

ಮಿಚೆಲ್ ಸ್ಟಾರ್ಕ್ ಐಪಿಎಲ್ 2025 ರಲ್ಲಿ ಒಟ್ಟು 11 ಪಂದ್ಯಗಳನ್ನು ಆಡಿದ್ದಾರೆ. ಈ ಅವಧಿಯಲ್ಲಿ, ಅವರು 10.16 ರ ಎಕಾನಮಿಯಲ್ಲಿ ರನ್ ಬಿಟ್ಟುಕೊಟ್ಟು 14 ವಿಕೆಟ್‌ಗಳನ್ನು ಪಡೆದಿದ್ದರು. ಅಲ್ಲದೆ ಸ್ಟಾರ್ಕ್ ಒಂದೇ ಪಂದ್ಯದಲ್ಲಿ 5 ವಿಕೆಟ್ ಕಬಳಿಸುವ ಮೂಲಕ ದಾಖಲೆ ಕೂಡ ನಿರ್ಮಿಸಿದ್ದರು. ಇಂತಹ ಪರಿಸ್ಥಿತಿಯಲ್ಲಿ ಪ್ಲೇಆಫ್‌ ರೇಸ್​ನಲ್ಲಿರುವ ಡೆಲ್ಲಿ ತಂಡಕ್ಕೆ ಸ್ಟಾರ್ಕ್ ಅನುಪಸ್ಥಿತಿ ದೊಡ್ಡ ಹೊಡೆತವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:20 pm, Fri, 16 May 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ