7 ಸಿಕ್ಸ್, 6 ಫೋರ್… 24 ಎಸೆತಗಳಲ್ಲಿ ಮೊಹಮ್ಮದ್ ಶಮಿ 75 ರನ್ಸ್
IPL 2025 SRH vs PBKS: ಐಪಿಎಲ್ನ 27ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡವು ಅಮೋಘ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 245 ರನ್ ಕಲೆಹಾಕಿದರೆ, ಈ ಕಠಿಣ ಗುರಿಯನ್ನು ಸನ್ರೈಸರ್ಸ್ ಹೈದರಾಬಾದ್ ತಂಡವು 18.3 ಓವರ್ಗಳಲ್ಲಿ ಚೇಸ್ ಮಾಡಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಮೊಹಮ್ಮದ್ ಶಮಿ (Mohammed Shami) ಅನಗತ್ಯ ದಾಖಲೆ ಬರೆದಿದ್ದಾರೆ. ಅದು ಸಹ 24 ಎಸೆತಗಳಲ್ಲಿ 75 ರನ್ ಚಚ್ಚಿಸಿಕೊಳ್ಳುವ ಮೂಲಕ ಎಂಬುದು ವಿಶೇಷ. ಹೈದರಾಬಾದ್ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ 27ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ಹಾಗೂ ಸನ್ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬ್ಯಾಟಿಂಗ್ ಆಯ್ದುಕೊಂಡರು.
ಅದರಂತೆ ಮೊದಲು ಬೌಲಿಂಗ್ ಮಾಡಿದ ಸನ್ರೈಸರ್ಸ್ ಹೈದರಾಬಾದ್ ಪರ ಮೊಹಮ್ಮದ್ ಶಮಿ ದುಬಾರಿಯಾದರು. ಅದು ಸಹ ಬರೋಬ್ಬರಿ 7 ಸಿಕ್ಸ್ ಹಾಗೂ 6 ಫೋರ್ಗಳನ್ನು ಚಚ್ಚಿಸಿಕೊಳ್ಳುವ ಮೂಲಕ. ಈ ಪಂದ್ಯದ ಕೊನೆಯ ಓವರ್ ಎಸೆದ ಶಮಿ ಎಸೆತಗಳನ್ನು ಮಾರ್ಕಸ್ ಸ್ಟೋಯಿನಿಸ್ ಬ್ಯಾಕ್ ಟು ಬ್ಯಾಕ್ ಸಿಕ್ಸ್ಗೆ ಅಟ್ಟಿದ್ದರು.
ಸ್ಟೋಯಿನಿಸ್ ಸಿಕ್ಸ್:
6, 6, 6, 6 to finish it off, courtesy of Marcus HULK Stoinis! 👊💪
Watch the LIVE action ➡ https://t.co/HQTYFKNWwp #IPLonJioStar 👉 #SRHvPBKS | LIVE NOW on Star Sports Network & JioHotstar! pic.twitter.com/H3FR1EJGGm
— Star Sports (@StarSportsIndia) April 12, 2025
ಈ ನಾಲ್ಕು ಸಿಕ್ಸ್ಗಳೊಂದಿಗೆ ಮೊಹಮ್ಮದ್ ಶಮಿ 4 ಓವರ್ಗಳಲ್ಲಿ ನೀಡಿದ್ದು ಬರೋಬ್ಬರಿ 75 ರನ್ಗಳು. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲಿ ಅತ್ಯಂತ ದುಬಾರಿ ಓವರ್ಗಳನ್ನು ಎಸೆದ ಭಾರತೀಯ ಬೌಲರ್ ಎಂಬ ಹೀನಾಯ ದಾಖಲೆಯೊಂದು ಮೊಹಮ್ಮದ್ ಶಮಿ ಪಾಲಾಯಿತು.
ಮೊಹಮ್ಮದ್ ಶಮಿ ಅವರ ಈ ದುಬಾರಿ ಓವರ್ ಹೊರತಾಗಿಯೂ ಈ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡ ಗೆಲುವು ಸಾಧಿಸಿರುವುದು ವಿಶೇಷ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 245 ರನ್ ಕಲೆಹಾಕಿತು.
ಇದನ್ನೂ ಓದಿ: SRH vs PBKS: ಗೆರೆ ದಾಟಿದ್ದೇ ಪಂಜಾಬ್ ಕಿಂಗ್ಸ್ ಸೋಲಿಗೆ ಕಾರಣ..!
ಈ ಗುರಿಯನ್ನು ಬೆನ್ನತ್ತಿದ ಸನ್ರೈಸರ್ಸ್ ಹೈದರಾಬಾದ್ ಪರ ಅಭಿಷೇಕ್ ಶರ್ಮಾ (141) ಸ್ಪೋಟಕ ಸೆಂಚುರಿ ಸಿಡಿಸಿದರು. ಈ ಶತಕದ ನೆರವಿನೊಂದಿಗೆ ಸನ್ರೈಸರ್ಸ್ ಹೈದರಾಬಾದ್ ತಂಡವು 18.3 ಓವರ್ಗಳಲ್ಲಿ 247 ರನ್ ಬಾರಿಸಿ 8 ವಿಕೆಟ್ಗಳ ಅಮೋಘ ಗೆಲುವು ದಾಖಲಿಸಿದೆ.
Published On - 9:24 am, Sun, 13 April 25