VIDEO: ವಿರಾಟ್ ಕೊಹ್ಲಿಗೆ ಬೌಲಿಂಗ್: ಭಾವುಕರಾಗಿ ಅರ್ಧದಲ್ಲೇ ನಿಂತ ಸಿರಾಜ್
IPL 2025 RCB vs GT: ಐಪಿಎಲ್ 2025ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಮೊದಲ ಸೋಲುಂಡಿದೆ. ಈ ಮ್ಯಾಚ್ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು169 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 17.5 ಓವರ್ಗಳಲ್ಲಿ 170 ರನ್ ಬಾರಿಸಿ ಭರ್ಜರಿ ಜಯ ಸಾಧಿಸಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನ 14ನೇ ಪಂದ್ಯವು ಅವಿಸ್ಮರಣೀಯ ಕ್ಷಣಗಳಿಗೆ ಸಾಕ್ಷಿಯಾಗಿತ್ತು. ಅದು ಸಹ ಗುರು-ಶಿಷ್ಯರ ಮುಖಾಮುಖಿಯೊಂದಿಗೆ ಎಂಬುದು ವಿಶೇಷ. ಅಂದರೆ ವಿರಾಟ್ ಕೊಹ್ಲಿ (Virat Kohli) ಹಾಗೂ ಮೊಹಮ್ಮದ್ ಸಿರಾಜ್ (Mohammed Siraj) ನಡುವಣ ಸೆಣಸಾಟ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್ಮನ್ ಗಿಲ್ ಬೌಲಿಂಗ್ ಆಯ್ದುಕೊಂಡರು. ಅಲ್ಲದೆ ಮೊದಲ ಓವರ್ ಎಸೆಯಲು ಮೊಹಮ್ಮದ್ ಸಿರಾಜ್ಗೆ ಚೆಂಡು ನೀಡಿದರು.
ಮೊಹಮ್ಮದ್ ಸಿರಾಜ್ ಎಸೆದ ಪ್ರಥಮ ಓವರ್ನ ಮೊದಲ ಎಸೆತವನ್ನು ಫಿಲ್ ಸಾಲ್ಟ್ ಎದುರಿಸಿದರು. ಅಲ್ಲದೆ ಒಂದು ರನ್ ಕಲೆಹಾಕುವ ಮೂಲಕ ವಿರಾಟ್ ಕೊಹ್ಲಿಗೆ ಸ್ಟ್ರೈಕ್ ನೀಡಿದರು. ಆದರೆ 2ನೇ ಎಸೆತ ಎಸೆಯುವ ಮುನ್ನ ಮೊಹಮ್ಮದ್ ಸಿರಾಜ್ ಭಾವುಕರಾಗಿ ಕಂಡು ಬಂದರು.
ಏಕೆಂದರೆ ಇದೇ ಮೊದಲ ಬಾರಿಗೆ ಮೊಹಮ್ಮದ್ ಸಿರಾಜ್ ತನ್ನ ಗುರು ವಿರಾಟ್ ಕೊಹ್ಲಿಗೆ ಬೌಲಿಂಗ್ ಮಾಡಲು ಸಜ್ಜಾಗಿದ್ದರು. ಈ ಭಾವುಕತೆಯೊಂದಿಗೆ ಓಡಿ ಬಂದ ಸಿರಾಜ್ ಅರ್ಧದಲ್ಲೇ ಬೌಲಿಂಗ್ ನಿಲ್ಲಿಸಿದರು. ಈ ಸನ್ನಿವೇಶದ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಮೊಹಮ್ಮದ್ ಸಿರಾಜ್-ವಿರಾಟ್ ಕೊಹ್ಲಿ ಮುಖಾಮುಖಿ ವಿಡಿಯೋ:
View this post on Instagram
7 ವರ್ಷ ಆಡಿದ್ದ ಮೊಹಮ್ಮದ್ ಸಿರಾಜ್:
ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಮೊಹಮ್ಮದ್ ಸಿರಾಜ್ 7 ವರ್ಷಗಳ ಕಾಲ ಆಡಿದ್ದರು. ಈ ವೇಳೆ ಸಿರಾಜ್ ಬೆಂಬಲಕ್ಕೆ ನಿಂತವರು ವಿರಾಟ್ ಕೊಹ್ಲಿ. ಕೊಹ್ಲಿಯ ಸಂಪೂರ್ಣ ಬೆಂಬಲದೊಂದಿಗೆ ನಾನು ಈ ಮಟ್ಟಕ್ಕೆ ತಲುಪಿದ್ದೇನೆ ಎಂದು ಹಲವು ಬಾರಿ ಸಿರಾಜ್ ಹೇಳಿಕೊಂಡಿದ್ದರು.
ಇದೀಗ 7 ವರ್ಷಗಳ ಬಳಿಕ ಸಿರಾಜ್ ವಿರಾಟ್ ಕೊಹ್ಲಿಗೆ ಬೌಲಿಂಗ್ ಮಾಡಿದ್ದಾರೆ. ಇನ್ನು ಸಿರಾಜ್ ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ ಕಿಂಗ್ ಕೊಹ್ಲಿ ತನ್ನ ಕ್ಲಾಸ್ ಬ್ಯಾಟಿಂಗ್ ಪ್ರದರ್ಶಿಸಿದ್ದರು.
ಆದರೆ ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್ ವಿಕೆಟ್ ಕಬಳಿಸುವ ಮೂಲಕ ಮೊಹಮ್ಮದ್ ಸಿರಾಜ್ ಆರ್ಸಿಬಿಗೆ ಆರಂಭಿಕ ಆಘಾತ ನೀಡಿದ್ದರು. ಅಲ್ಲದೆ 4 ಓವರ್ಗಳಲ್ಲಿ ಕೇವಲ 19 ರನ್ ನೀಡಿ 3 ವಿಕೆಟ್ ಕಬಳಿಸಿ ಗುಜರಾತ್ ಟೈಟಾನ್ಸ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.
ಇದನ್ನೂ ಓದಿ: IPL 2025: ಹೀನಾಯ ಅತ್ಯಂತ ಹೀನಾಯ ದಾಖಲೆ ಬರೆದ RCB
ಗೆದ್ದು ಬೀಗಿದ ಗುಜರಾತ್ ಟೈಟಾನ್ಸ್:
ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು 169 ರನ್ಗಳು ಮಾತ್ರ. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 17.5 ಓವರ್ಗಳಲ್ಲಿ 170 ರನ್ ಬಾರಿಸುವ ಮೂಲಕ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.