IPL 2025: 17 ರನ್ಗೆ ಪ್ರಮುಖ 4 ವಿಕೆಟ್..! ಸಿರಾಜ್ ದಾಳಿಗೆ ತತ್ತರಿಸಿದ ಹೈದರಾಬಾದ್; ವಿಡಿಯೋ
Mohammed Siraj's 4-Wicket Haul: ಐಪಿಎಲ್ 2025ರ 19ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದರು. ಅವರು 4 ಓವರ್ಗಳಲ್ಲಿ 17 ರನ್ ನೀಡಿ 4 ಪ್ರಮುಖ ವಿಕೆಟ್ ಕಬಳಿಸಿದರು. ಇದರೊಂದಿಗೆ ಅವರು ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ 100 ವಿಕೆಟ್‌ಗಳನ್ನು ಪೂರ್ಣಗೊಳಿಸಿದರು ಮತ್ತು ಅತ್ಯಧಿಕ ವಿಕೆಟ್ ಪಡೆದ ಬೌಲರ್ಗಳ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದರು.
ಐಪಿಎಲ್ 2025 ರ 19 ನೇ ಪಂದ್ಯ ಸನ್‌ರೈಸರ್ಸ್ ಹೈದರಾಬಾದ್ ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ಗೆ ಮೊಹಮ್ಮದ್ ಸಿರಾಜ್ ಆಘಾತ ನೀಡಿದರು. ಮೊದಲ ಓವರ್‌ನಲ್ಲೇ ಟ್ರಾವಿಸ್ ಹೆಡ್ ಅವರನ್ನು ಮೊಹಮ್ಮದ್ ಸಿರಾಜ್ ಔಟ್ ಮಾಡಿದರು. ನಂತರ ಅವರು ಅಭಿಷೇಕ್ ಶರ್ಮಾ ಅವರನ್ನು ಔಟ್ ಮಾಡಿ ಐಪಿಎಲ್ ವೃತ್ತಿಜೀವನದಲ್ಲಿ 100 ವಿಕೆಟ್‌ಗಳನ್ನು ಪೂರ್ಣಗೊಳಿಸಿದರು. ಆ ಬಳಿಕವೂ ತನ್ನ ಮಾರಕ ದಾಳಿಯನ್ನು ಮುಂದುವರೆಸಿದ ಸಿರಾಜ್ ಈ ಪಂದ್ಯದಲ್ಲಿ ಪೂರ್ಣ 4 ಓವರ್ಗಳನ್ನು ಬೌಲ್ ಮಾಡಿ ಕೇವಲ 17 ರನ್ ನೀಡಿ ಪ್ರಮುಖ 4 ವಿಕೆಟ್ ಕಬಳಿಸಿದರು. ಈ ಮೂಲಕ ಸಿರಾಜ್ ಅತ್ಯಧಿಕ ವಿಕೆಟ್ ಪಡೆದ ಬೌಲರ್ಗಳ ಪಟ್ಟಿಯಲ್ಲಿ ಒಟ್ಟು 9 ವಿಕೆಟ್ಗಳೊಂದಿಗೆ 2ನೇ ಸ್ಥಾನಕ್ಕೇರಿದ್ದಾರೆ.
ಈ ಹಿಂದೆ ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಸಿರಾಜ್ ಅದ್ಭುತ ಬೌಲಿಂಗ್ ಮಾಡಿದ್ದರು. ಅವರು ಫಿಲಿಪ್ ಸಾಲ್ಟ್ ಮತ್ತು ದೇವದತ್ ಪಡಿಕ್ಕಲ್ ಅವರನ್ನು ಕ್ಲೀನ್ ಬೌಲ್ಡ್ ಮಾಡಿದ್ದರು. ಈ ಪಂದ್ಯದಲ್ಲಿ ಸಿರಾಜ್ 3 ವಿಕೆಟ್ ಪಡೆದಿದ್ದರು. ಇದಕ್ಕೂ ಮುನ್ನ ಅವರು ಮುಂಬೈ ಇಂಡಿಯನ್ಸ್ ವಿರುದ್ಧ 2 ವಿಕೆಟ್ ಪಡೆದಿದ್ದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ