AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಸಹ ಆಟಗಾರನನ್ನು ‘ವಂಚಕ’ ಎಂದು ಕರೆದ ಧೋನಿ

IPL 2025 CSK vs KKR: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 25ನೇ ಪಂದ್ಯದಲ್ಲಿ ಸಿಎಸ್​ಕೆ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 103 ರನ್ ಕಲೆಹಾಕಿದರೆ, ಈ ಗುರಿಯನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಕೇವಲ 10.1 ಓವರ್​ಗಳಲ್ಲಿ ಚೇಸ್ ಮಾಡಿದೆ.

VIDEO: ಸಹ ಆಟಗಾರನನ್ನು 'ವಂಚಕ' ಎಂದು ಕರೆದ ಧೋನಿ
Csk
Follow us
ಝಾಹಿರ್ ಯೂಸುಫ್
|

Updated on:Apr 12, 2025 | 9:55 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 25ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 8 ವಿಕೆಟ್​ಗಳ ಜಯ ಸಾಧಿಸಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಈ ಪಂದ್ಯಕ್ಕೂ ಮುನ್ನ ಮಹೇಂದ್ರ ಸಿಂಗ್ ಧೋನಿ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮೆಂಟರ್ ಡೆವೊನ್ ಬ್ರಾವೊ ಭೇಟಿಯಾಗಿದ್ದರು.

ನೆಟ್ಸ್​ನಲ್ಲಿ ಅಭ್ಯಾಸ ನಡೆಸುತ್ತಿದ್ದ ಧೋನಿಯನ್ನು ಭೇಟಿಯಾಗಲು ಬಂದ ಬ್ರಾವೊನನ್ನು ಧೋನಿ ವಂಚಕ ಬಂದಿದ್ದಾನೆ ಎಂದು ಕಾಲೆಳೆದರು. ಇದಕ್ಕೆ ಮುಖ್ಯ ಕಾರಣ ಈ ಹಿಂದೆ ಬ್ರಾವೊ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬೌಲಿಂಗ್ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.

ಇದನ್ನೂ ಓದಿ
Image
PSL 2025: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ RCB ಮಾಜಿ ಆಟಗಾರರು
Image
ಪ್ರಿಯಾಂಶ್ ಆರ್ಯನ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್
Image
ಕ್ರಿಸ್​ ಗೇಲ್ ದಾಖಲೆ ಜಸ್ಟ್ ಮಿಸ್: ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
Image
ಉಲ್ಟಾ ಹೊಡೆದ RCB ಕಪ್ ಗೆಲ್ಲಬಾರದು ಎಂದಿದ್ದ ಅಂಬಾಟಿ ರಾಯುಡು

ಆದರೆ ಈ ಬಾರಿಯ ಐಪಿಎಲ್ ಮೂಲಕ ಡೆವೊನ್ ಬ್ರಾವೊ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯ ಭಾಗವಾಗಿದ್ದಾರೆ. ಇತ್ತ ಸಿಎಸ್​ಕೆಯನ್ನು ತೊರೆದು ಕೆಕೆಆರ್ ಜೊತೆಗೂಡಿರುವ ಬ್ರಾವೊ ಇದೇ ಮೊದಲ ಬಾರಿಗೆ ಧೋನಿಯನ್ನು ಭೇಟಿಯಾಗಿದ್ದಾರೆ.

ಈ ವೇಳೆ ತನ್ನ ಮಾಜಿ ಸಹ ಆಟಗಾರನನ್ನು ವಂಚಕ ಎಂದು ಕರೆಯುವ ಮೂಲಕ ಧೋನಿ, ಬ್ರಾವೊ ಅವರ ಕಾಲೆಳೆದಿದ್ದಾರೆ. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಧೋನಿ-ಬ್ರಾವೊ ವಿಡಿಯೋ:

ಬ್ರಾವೊ ಸಿಎಸ್​ಕೆ ನಂಟು:

ಡೆವೊನ್ ಬ್ರಾವೊ ಚೆನ್ನೈ ಸೂಪರ್ ಕಿಂಗ್ಸ್ ಪರ 130 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 127 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಬ್ರಾವೊ 2516 ಎಸೆತಗಳನ್ನು ಎಸೆದು 154 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಇನ್ನು 2022 ರಲ್ಲಿ ಐಪಿಎಲ್​ಗೆ ವಿದಾಯ ಹೇಳಿದ ಬ್ರಾವೊ ಆ ಬಳಿಕ ಸಿಎಸ್​ಕೆ ತಂಡದ ಬೌಲಿಂಗ್ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದರು.

ಇದನ್ನೂ ಓದಿ: IPL 2025: ಮುಂಬೈ ಇಂಡಿಯನ್ಸ್ ಆಟಗಾರನ ಬ್ಯಾನ್ ಮಾಡಿದ ಪಾಕಿಸ್ತಾನ್

ಆದರೀಗ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಬ್ರಾವೊ ಅವರನ್ನು 4 ತಂಡಗಳ ಮೆಂಟರ್ ಆಗಿ ನೇಮಿಸಿದೆ. ಅದರಂತೆ ಐಪಿಎಲ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್, ಇಂಟರ್​ನ್ಯಾಷನಲ್ ಟಿ20 ಲೀಗ್ (ಯುಎಇ) ​ನಲ್ಲಿ ಅಬುಧಾಬಿ ನೈಟ್ ರೈಡರ್ಸ್, ಅಮೆರಿಕದ ಮೇಜರ್ ಲೀಗ್ ಕ್ರಿಕೆಟ್​ ಟೂರ್ನಿಯಲ್ಲಿ ಲಾಸ್ ಏಂಜಲೀಸ್ ನೈಟ್ ರೈಡರ್ಸ್, ವೆಸ್ಟ್ ಇಂಡೀಸ್​ನ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಟ್ರಿನ್​ಬಾಗೊ ನೈಟ್ ರೈಡರ್ಸ್ ತಂಡದ ಮೆಂಟರ್ ಆಗಿ ಬ್ರಾವೊ ಕಾಣಿಸಿಕೊಳ್ಳಲಿದ್ದಾರೆ.

Published On - 9:54 am, Sat, 12 April 25

ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್