AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LSG vs MI: ಔಟ್ ಆಗಿದ್ದರೂ ಅಪೀಲ್ ಮಾಡದೇ ಪಂದ್ಯವನ್ನೇ ಕೈಚೆಲ್ಲಿಕೊಂಡ ಮುಂಬೈ ಇಂಡಿಯನ್ಸ್

Lucknow Super Giants vs Mumbai Indians: ಲಕ್ನೋದಲ್ಲಿ ನಡೆದ ಐಪಿಎಲ್​ನ 16ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ 203 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡ 191 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದು ಎಲ್​ಎಸ್​ಜಿ ತಂಡದ ಮಿಚೆಲ್ ಮಾರ್ಷ್. ಆದರೆ ಮಾರ್ಷ್ ಅವರನ್ನು ಪೆವಿಲಿಯನ್​ಗೆ ಕಳುಹಿಸುವ ಅತ್ಯುತ್ತಮ ಅವಕಾಶವನ್ನು ಮುಂಬೈ ಇಂಡಿಯನ್ಸ್ ಕೈಚೆಲ್ಲಿಕೊಂಡಿದ್ದರು.

LSG vs MI: ಔಟ್ ಆಗಿದ್ದರೂ ಅಪೀಲ್ ಮಾಡದೇ ಪಂದ್ಯವನ್ನೇ ಕೈಚೆಲ್ಲಿಕೊಂಡ ಮುಂಬೈ ಇಂಡಿಯನ್ಸ್
Lsg Vs Mi
ಝಾಹಿರ್ ಯೂಸುಫ್
|

Updated on: Apr 05, 2025 | 8:05 AM

Share

IPL 2025: ಐಪಿಎಲ್​ನ 16ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡ 12 ರನ್​ಗಳ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿ ಮಿಚೆಲ್ ಮಾರ್ಷ್. ಏಕೆಂದರೆ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಮಾರ್ಷ್ ಪವರ್​ಪ್ಲೇನಲ್ಲೇ 60 ರನ್​ ಚಚ್ಚಿದ್ದರು. ಅಂತಹದೊಂದು ಸ್ಪೋಟಕ ಆರಂಭದ ನೆರವಿನಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ 203 ರನ್​ಗಳಿಸಲು ಸಾಧ್ಯವಾಯಿತು.

ಕುತೂಹಲಕಾರಿ ವಿಷಯ ಎಂದರೆ ಇದೇ ಮಿಚೆಲ್ ಮಾರ್ಷ್ ಮೊದಲ ಓವರ್​ನಲ್ಲೇ ಪೆವಿಲಿಯನ್​ ಸೇರುತ್ತಿದ್ದರು. ಏಕೆಂದರೆ ಟ್ರೆಂಟ್ ಬೌಲ್ಟ್ ಎಸೆದ ಇನಿಂಗ್ಸ್​ನ ಮೊದಲ ಓವರ್​ನ 4ನೇ ಎಸೆತದಲ್ಲಿ ಮಾರ್ಷ್ ವಿಕೆಟ್ ಕೀಪರ್​ಗೆ ಕ್ಯಾಚ್ ನೀಡಿದ್ದರು. ಆದರೆ ಇತ್ತ ವಿಕೆಟ್ ಕೀಪರ್ ಆಗಲಿ, ಮುಂಬೈ ಇಂಡಿಯನ್ಸ್ ಆಟಗಾರರಾಗಲಿ ಕ್ಯಾಚ್​ಗಾಗಿ ಅಪೀಲ್ ಮಾಡಿರಲಿಲ್ಲ.

ಇದನ್ನೂ ಓದಿ
Image
ಹುಡುಗಿಯಾಗಿ ಬದಲಾದ ಟೀಮ್ ಇಂಡಿಯಾದ ಮಾಜಿ ಆಟಗಾರನ ಪುತ್ರ
Image
VIDEO: ವಿರಾಟ್ ಕೊಹ್ಲಿಗೆ ಬೌಲಿಂಗ್: ಭಾವುಕರಾಗಿ ಅರ್ಧದಲ್ಲೇ ನಿಂತ ಸಿರಾಜ್
Image
11ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ವಿಶ್ವ ದಾಖಲೆ ಬರೆದ ನಸೀಮ್ ಶಾ
Image
MS Dhoni: ಕೇವಲ 3 ರನ್​: ಗ್ರೇಟ್​ ಫಿನಿಶರ್ ಫಿನಿಶ್..!

ಇದರ ಬೆನ್ನಲ್ಲೇ ರೀಪ್ಲೆನಲ್ಲಿ ಮಿಚೆಲ್​ ಮಾರ್ಷ್​ ಅವರ ಬ್ಯಾಟ್​ಗೆ ಚೆಂಡು ತಾಗಿರುವುದನ್ನು ತೋರಿಸಲಾಯಿತು. ಅವಾಗಲೇ ಮುಂಬೈ ಇಂಡಿಯನ್ಸ್ ಆಟಗಾರರಿಗೆ ತಮ್ಮ ತಪ್ಪಿನ ಅರಿವಾಗಿದ್ದು. ಅಲ್ಲದೆ ಅತ್ಯುತ್ತಮ ಅವಕಾಶವನ್ನು ಕೈ ತಪ್ಪಿಸಿಕೊಂಡಿರುವುದಕ್ಕೆ ನಾಯಕ ಹಾರ್ದಿಕ್ ಪಾಂಡ್ಯ ಸೇರಿದಂತೆ ಕೆಲ ಆಟಗಾರರ ಮುಖದಲ್ಲಿ ನಿರಾಸೆ ಮೂಡಿತು.

ಮಿಚೆಲ್ ಮಾರ್ಷ್​ ಬ್ಯಾಟ್ ಎಡ್ಜ್​ ಆಗಿರುವ ವಿಡಿಯೋ:

ಅತ್ತ ಮೊದಲ ಓವರ್​ನಲ್ಲಿ ಸಿಕ್ಕ ಜೀವದಾನವನ್ನು ಬಳಸಿಕೊಂಡ ಮಿಚೆಲ್ ಮಾರ್ಷ್ ಸ್ಪೋಟಕ ಇನಿಂಗ್ಸ್ ಆಡಿದರು. ಕೇವಲ 31 ಎಸೆತಗಳನ್ನು ಎದುರಿಸಿದ ಮಾರ್ಷ್ 2 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 60 ರನ್ ಚಚ್ಚಿದರು.

ಇನ್ನು ಐಡೆನ್ ಮಾರ್ಕ್ರಾಮ್ 53 ರನ್​ಗಳ ಕೊಡುಗೆ ನೀಡಿದರು. ಈ ಎರಡು ಅರ್ಧಶತಕಗಳ ನೆರವಿನೊಂದಿಗೆ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 203 ರನ್​ ಕಲೆಹಾಕಿತು.

204 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ ಪರ ಸೂರ್ಯಕುಮಾರ್ ಯಾದವ್ 43 ಎಸೆತಗಳಲ್ಲಿ 67 ರನ್ ಬಾರಿಸಿದರೂ, ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ. ಪರಿಣಾಮ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 191 ರನ್​ಗಳಿಸಿ 12 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಇದನ್ನೂ ಓದಿ: IPL 2025: ಸೋಲಿನ ಬೆನ್ನಲ್ಲೇ ರಿಷಭ್ ಪಂತ್​ಗೆ ಸಂಜೀವ್ ಗೊಯೆಂಕಾ ಖಡಕ್ ಸೂಚನೆ

ಒಂದು ವೇಳೆ ಮಿಚೆಲ್ ಮಾರ್ಷ್ ಅವರ ವಿಕೆಟ್ ಮೊದಲ ಓವರ್​ನಲ್ಲೇ ಪಡೆದಿದ್ದರೆ, ಲಕ್ನೋ ಸೂಪರ್ ಜೈಂಟ್ಸ್ ತಂಡದ ಸ್ಕೋರ್ 150ರ ಅಸುಪಾಸಿನಲ್ಲಿರುತ್ತಿತ್ತು. ಏಕೆಂದರೆ ಮಾರ್ಷ್ ಅವರನ್ನು ಹೊರತುಪಡಿಸಿ ಲಕ್ನೋ ಪರ ಯಾವುದೇ ಬ್ಯಾಟರ್ ಸ್ಪೋಟಕ ಇನಿಂಗ್ಸ್​ ಆಡಿರಲಿಲ್ಲ. ಇತ್ತ ಸಿಕ್ಕ ಅವಕಾಶವನ್ನು ಕೈಚೆಲ್ಲುವ ಮೂಲಕ ಮುಂಬೈ ಇಂಡಿಯನ್ಸ್ ತಂಡವು 12 ರನ್​ಗಳಿಂದ ಸೋಲೊಪ್ಪಿಕೊಂಡಿದ್ದಾರೆ.

ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ