Sign In

By signing in or creating an account, you agree with Associated Broadcasting Company's Terms & Conditions and Privacy Policy.

12 ವರ್ಷಗಳ ಪರಂಪರೆ… ಮುಂಬೈ ಇಂಡಿಯನ್ಸ್ ತಂಡಕ್ಕೆ ಸೋಲುವ ಭೀತಿ

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ಶುರುವಾಗಿದೆ. ಮೊದಲ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜಯ ಸಾಧಿಸಿದರೆ, ಇಂದು ಸಂಜೆ (ಮಾ.23) ನಡೆಯಲಿರುವ ಎರಡನೇ ಪಂದ್ಯದಲ್ಲಿ ಸನ್​ರೈಸರ್ಸ್​ vs ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಹಾಗೆಯೇ ರಾತ್ರಿ ನಡೆಯಲಿರುವ ಮೂರನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಕಣಕ್ಕಿಳಿಯಲಿದೆ.

12 ವರ್ಷಗಳ ಪರಂಪರೆ... ಮುಂಬೈ ಇಂಡಿಯನ್ಸ್ ತಂಡಕ್ಕೆ ಸೋಲುವ ಭೀತಿ
MI vs CSK
Follow us
ಝಾಹಿರ್ ಯೂಸುಫ್
|

Updated on: Mar 23, 2025 | 11:41 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಇಂದು (ಮಾ.23) ಡಬಲ್ ಹೆಡ್ಡರ್ ಪಂದ್ಯಗಳು ನಡೆಯಲಿವೆ. ಸಂಜೆ ಜರುಗಲಿರುವ ಮೊದಲ ಮ್ಯಾಚ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾದರೆ, ದ್ವಿತೀಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಹಾಗೂ ಮುಂಬೈ ಇಂಡಿಯನ್ಸ್ (MI) ತಂಡಗಳು ಕಣಕ್ಕಿಳಿಯಲಿವೆ.

ರಾತ್ರಿ 7.30 ರಿಂದ ಶುರುವಾಗಲಿರುವ ಈ ಎಲ್​ ಕ್ಲಾಸಿಕೊ ಪಂದ್ಯವು ಇದೀಗ ಎಲ್ಲರ ಕೇಂದ್ರ ಬಿಂದು. ಏಕೆಂದರೆ ಐಪಿಎಲ್​ನ ಎರಡು ಬಲಿಷ್ಠ ತಂಡಗಳ ಮುಖಾಮುಖಿಯಲ್ಲಿ ಶುಭಾರಂಭ ಮಾಡುವವರು ಯಾರು ಎಂಬ ಕುತೂಹಲ ಕ್ರಿಕೆಟ್ ಪ್ರೇಮಿಗಳಲ್ಲಿದೆ. ಹೀಗಾಗಿಯೇ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

ಇದನ್ನೂ ಓದಿ
Image
RCBಯಲ್ಲಿ ಬ್ರಿಟಿಷ್ ಪಡೆ... ಸೋತು ಸುಣ್ಣವಾಗಲಿದೆ ಎಂದ ಗಿಲ್​ಕ್ರಿಸ್ಟ್
Image
IPL 2025: ಐಪಿಎಲ್​ ಕಣದಲ್ಲಿದ್ದಾರೆ 13 ಕನ್ನಡಿಗರು
Image
IPL 2025: ಬ್ಯಾನ್ ಬ್ಯಾನ್ ಬ್ಯಾನ್... ಐಪಿಎಲ್ ಆಟಗಾರರಿಗೆ ಬ್ಯಾನ್ ಭೀತಿ
Image
IPL 2025: ಐಪಿಎಲ್​ನಲ್ಲಿ 10 ನಿಮಯಗಳು ಬದಲಾವಣೆ

12 ವರ್ಷಗಳಿಂದ ಗೆಲ್ಲದ ಮುಂಬೈ ಇಂಡಿಯನ್ಸ್:

ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಅತ್ಯಂತ ಯಶಸ್ವಿ ತಂಡಗಳಲ್ಲಿ ಒಂದು ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಶುಭಾರಂಭ ಮಾಡುವ ವಿಷಯದಲ್ಲಿ ಮುಂಬೈ ಪಡೆ ಕಳೆದ 13 ವರ್ಷಗಳಿಂದ ಹಿಂದೆ ಉಳಿದಿದೆ. ಇದಕ್ಕೆ ಸಾಕ್ಷಿ ಕಳೆದ ಹದಿಮೂರು ವರ್ಷಗಳಲ್ಲಿ ಆರಂಭಿಕ ಪಂದ್ಯಗಳಲ್ಲಿ ಸೋತಿರುವುದು.

ಅಂದರೆ ಮುಂಬೈ ಇಂಡಿಯನ್ಸ್ ಪಡೆಯು ಐಪಿಎಲ್​ನ ತನ್ನ ಮೊದಲ ಪಂದ್ಯದಲ್ಲಿ ಗೆದ್ದು 13 ವರ್ಷಗಳೇ ಕಳೆದಿವೆ. 2012 ರ ಬಳಿಕ ಮುಂಬೈ ಇಂಡಿಯನ್ಸ್ ತಂಡವು ತನ್ನ ಮೊದಲ ಪಂದ್ಯದಲ್ಲಿ ಒಮ್ಮೆಯೂ ಜಯ ಸಾಧಿಸಿಲ್ಲ.

2012 ರಲ್ಲಿ ಸಚಿನ್ ತೆಂಡೂಲ್ಕರ್ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡವು ತನ್ನ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸೋಲುಣಿಸಿತ್ತು. ಈ ಗೆಲುವಿನ ಬಳಿಕ ಮುಂಬೈ ಇಂಡಿಯನ್ಸ್ ಪಾಲಿಗೆ ಶುಭಾರಂಭ ಎಂಬುದು ಮರೀಚಿಕೆಯಾಗಿಯೇ ಉಳಿದಿದೆ.

2013 ರಿಂದ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಿದ್ದಾರೆ. ಆದರೆ ಕಳೆದ 11 ವರ್ಷಗಳಲ್ಲಿ ಹಿಟ್​ಮ್ಯಾನ್ ಸಾರಥ್ಯದಲ್ಲಿ ಮುಂಬೈ ಇಂಡಿಯನ್ಸ್ ಮೊದಲ ಪಂದ್ಯ ಗೆದ್ದಿರಲಿಲ್ಲ.

2024 ರಲ್ಲಿ ಹಾರ್ದಿಕ್ ಪಾಂಡ್ಯ ಸಾರಥ್ಯದಲ್ಲಿ ಕಣಕ್ಕಿಳಿದ ಮುಂಬೈ ಇಂಡಿಯನ್ಸ್ ಮೊದಲ ಪಂದ್ಯದಲ್ಲಿ ಪರಾಜಯಗೊಂಡಿತ್ತು. ಆದರೆ ಈ ಬಾರಿ ಮುಂಬೈ ಇಂಡಿಯನ್ಸ್ ತಂಡವನ್ನು ತನ್ನ ಮೊದಲ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ.

ಕಳೆದ ಸೀಸನ್​ನ ಕೊನೆಯ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯಗೆ ಒಂದು ಪಂದ್ಯದ ನಿಷೇಧ ಹೇರಲಾಗಿದ್ದು, ಹೀಗಾಗಿ ಇಂದು ನಡೆಯಲಿರುವ ಸಿಎಸ್​ಕೆ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ.

ಇತ್ತ 12 ವರ್ಷಗಳಿಂದ ಮುಂಬೈ ಇಂಡಿಯನ್ಸ್ ಪಾಲಿಗೆ ಮರೀಚಿಕೆಯಾಗಿರುವ ಶುಭಾರಂಭವು ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ದಕ್ಕಲಿದೆಯಾ ಎಂಬುದೇ ಪ್ರಶ್ನೆ. ಆದರೆ ದಕ್ಕುವುದಿದ್ದರೂ ಅದು ಅಂದುಕೊಂಡಷ್ಟು ಸುಲಭದಲ್ಲಿ ದಕ್ಕುವುದಿಲ್ಲ. ಏಕೆಂದರೆ ಮುಂಬೈ ಇಂಡಿಯನ್ಸ್ ತಂಡವು ತನ್ನ ಮೊದಲ ಪಂದ್ಯವನ್ನು ಆಡುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್​ ತಂಡ ತವರು ಮೈದಾನ ಚೆಪಾಕ್ ಸ್ಟೇಡಿಯಂನಲ್ಲಿ.

ಹೀಗಾಗಿ ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಎಲ್​ ಕ್ಲಾಸಿಕೊ ಪಂದ್ಯದಲ್ಲಿ ಉಭಯ ತಂಡಗಳಿಂದ ರಣರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.

ಚೆನ್ನೈ ಸೂಪರ್ ಕಿಂಗ್ಸ್ ತಂಡ: ರುತುರಾಜ್ ಗಾಯಕ್ವಾಡ್ (ನಾಯಕ), ಡೆವೊನ್ ಕಾನ್ವೇ, ರಚಿನ್ ರವೀಂದ್ರ, ವಿಜಯ್ ಶಂಕರ್, ರವೀಂದ್ರ ಜಡೇಜಾ, ಶಿವಂ ದುಬೆ, ಎಂಎಸ್ ಧೋನಿ (ವಿಕೆಟ್ ಕೀಪರ್), ಸ್ಯಾಮ್ ಕರನ್, ರವಿಚಂದ್ರನ್ ಅಶ್ವಿನ್, ಮಥೀಶ ಪತಿರಾಣ, ಕಮಲೇಶ್ ನಾಗರಕೋಟಿ, ನಾಥನ್ ಎಲ್ಲಿಸ್, ಮುಖೇಶ್ ಚೌಧರಿ, ರಾಹುಲ್ ತ್ರಿಪಾಠಿ, ದೀಪಕ್ ಹೂಡಾ, ಶೇಕ್ ರಶೀದ್, ಅಂಶುಲ್ ಕಾಂಬೋಜ್, ಶ್ರೇಯಸ್ ಗೋಪಾಲ್, ನೂರ್ ಅಹ್ಮದ್, ಗುರ್ಜಪ್ನೀತ್ ಸಿಂಗ್, ರಾಮಕೃಷ್ಣ ಘೋಷ್, ಆಂಡ್ರೆ ಸಿದ್ದಾರ್ಥ್ ಸಿ, ವಂಶ್ ಬೇಡಿ, ಜೇಮಿ ಓವರ್ಟನ್.

ಇದನ್ನೂ ಓದಿ: VIDEO: ಅವನು ನನ್ನ ಫ್ಯಾನ್, ಏನೂ ಮಾಡ್ಬೇಡಿ… ಅಭಿಮಾನಿಯ ಬೆಂಬಲಕ್ಕೆ ನಿಂತ ವಿರಾಟ್ ಕೊಹ್ಲಿ

ಮುಂಬೈ ಇಂಡಿಯನ್ಸ್ ತಂಡ: ರೋಹಿತ್ ಶರ್ಮಾ, ವಿಲ್ ಜಾಕ್ಸ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ನಮನ್ ಧೀರ್, ರಿಯಾನ್ ರಿಕೆಲ್ಟನ್, ರಾಬಿನ್ ಮಿಂಝ್ (ವಿಕೆಟ್ ಕೀಪರ್), ಮಿಚೆಲ್ ಸ್ಯಾಂಟ್ನರ್, ಜಸ್ಪ್ರೀತ್ ಬುಮ್ರಾ, ರೀಸ್ ಟೋಪ್ಲಿ, ಟ್ರೆಂಟ್ ಬೌಲ್ಟ್, ದೀಪಕ್ ಚಹರ್, ಮುಜೀಬ್ ಉರ್ ರಹಮಾನ್, ಶ್ರೀಜಿತ್ ಕೃಷ್ಣನ್, ಟ್ರೆಂಟ್ ಬೌಲ್ಟ್, ಅರ್ಜುನ್ ತೆಂಡೂಲ್ಕರ್, ಬೆವನ್ ಜೇಕಬ್ಸ್, ಅಶ್ವನಿ ಕುಮಾರ್, ರೀಸ್ ಟೋಪ್ಲಿ, ಕರ್ಣ್ ಶರ್ಮಾ, ಸತ್ಯನಾರಾಯಣ ರಾಜು, ವಿಘ್ನೇಶ್ ಪುತ್ತೂರು, ಹಾರ್ದಿಕ್ ಪಾಂಡ್ಯ.

ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?