AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಅಂಪೈರ್ ಜೊತೆ ಜಗಳ; ಡೆಲ್ಲಿ ಕೋಚ್ ಮುನಾಫ್ ಪಟೇಲ್ ವಿರುದ್ಧ ಬಿಸಿಸಿಐ ಕ್ರಮ

Munaf Patel Fined by BCCI: ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯದ ಸಮಯದಲ್ಲಿ ಡೆಲ್ಲಿ ತಂಡದ ಬೌಲಿಂಗ್ ಕೋಚ್ ಮುನಾಫ್ ಪಟೇಲ್ ಅಂಪೈರ್ ಜೊತೆ ವಾಗ್ವಾದ ನಡೆಸಿದ್ದಕ್ಕಾಗಿ ಬಿಸಿಸಿಐ ಅವರಿಗೆ ಪಂದ್ಯ ಶುಲ್ಕದ ಶೇ. 25ರಷ್ಟು ದಂಡ ವಿಧಿಸಿದೆ. ಮುನಾಫ್ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಇದಕ್ಕೂ ಮುನ್ನ ಡೆಲ್ಲಿ ನಾಯಕ ಅಕ್ಷರ್ ಪಟೇಲ್ ಅವರಿಗೂ ನಿಧಾನಗತಿಯ ಓವರ್ ದರಕ್ಕಾಗಿ ದಂಡ ವಿಧಿಸಲಾಗಿತ್ತು.

IPL 2025: ಅಂಪೈರ್ ಜೊತೆ ಜಗಳ; ಡೆಲ್ಲಿ ಕೋಚ್ ಮುನಾಫ್ ಪಟೇಲ್ ವಿರುದ್ಧ ಬಿಸಿಸಿಐ ಕ್ರಮ
Munaf Patel
Follow us
ಪೃಥ್ವಿಶಂಕರ
|

Updated on: Apr 17, 2025 | 4:42 PM

ಐಪಿಎಲ್ 2025 (IPL 2025) ರ 32 ನೇ ಪಂದ್ಯ ದೆಹಲಿ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ (DC vs RR) ತಂಡಗಳ ನಡುವೆ ನಡೆಯಿತು. ಎರಡೂ ತಂಡಗಳ ನಡುವೆ ನಡೆದ ಈ ಜಿದ್ದಾಜಿದ್ದಿನ ಕಾಳಗದಲ್ಲಿ ಕೊನೆಗೆ ಡೆಲ್ಲಿ ತಂಡ ಸೂಪರ್ ಓವರ್‌ನಲ್ಲಿ ಜಯ ಸಾಧಿಸಿತು. ಆದಾಗ್ಯೂ ಪಂದ್ಯದ ಸಮಯದಲ್ಲಿ ತಾಳ್ಮೆ ಕಳೆದುಕೊಂಡಿದ್ದ ಡೆಲ್ಲಿ ತಂಡದ ಬೌಲಿಂಗ್ ಕೋಚ್ ಮುನಾಫ್ ಪಟೇಲ್ (Munaf Patel) ಅಂಪೈರ್ ಜೊತೆ ವಾಗ್ವಾದ ನಡೆಸಿದ್ದರು. ಇದೀಗ ಮುನಾಫ್ ಪಟೇಲ್ ವಿರುದ್ಧ ಕಠಿಣ ಕ್ರಮ ಕೈಕೊಂಡಿರುವ ಬಿಸಿಸಿಐ, ಅವರ ಪಂದ್ಯ ಶುಲ್ಕದ ಶೇ 25 ರಷ್ಟು ಮೊತ್ತವನ್ನು ದಂಡವಾಗಿ ವಿಧಿಸಿದೆ.

ತಪ್ಪು ಒಪ್ಪಿಕೊಂಡ ಮುನಾಫ್

ಪಂದ್ಯದ ಬಳಿಕ ಮುನಾಫ್ ಪಟೇಲ್ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದರಲ್ಲಿ, ಅವರು ನಾಲ್ಕನೇ ಅಂಪೈರ್ ಜೊತೆ ವಾಗ್ವಾದ ನಡೆಸುತ್ತಿರುವುದನ್ನು ಕಾಣಬಹುದಾಗಿದೆ. ವಾಸ್ತವವಾಗಿ, ಮುನಾಫ್ ಪಟೇಲ್ ತಂಡದ ಆಟಗಾರರಿಗೆ ಮೆಸೆಜ್ ಕಳುಹಿಸಲು ಮುಂದಾಗಿದ್ದರು. ಆದರೆ ನಾಲ್ಕನೇ ಅಂಪೈರ್ ಇದಕ್ಕೆ ಅನುಮತಿಸಲಿಲ್ಲ. ಇದರಿಂದ ಅಸಮಾಧಾನಗೊಂಡ ಮುನಾಫ್ ಪಟೇಲ್ ಕೋಪದಲ್ಲಿ ಏನೋ ಹೇಳಿದ್ದರು. ಹೀಗಾಗಿ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಬಿಸಿಸಿಐ ಮುನಾಫ್ ಪಟೇಲ್​ಗೆ ದಂಡ ವಿಧಿಸಿವುದರ ಜೊತೆಗೆ ಒಂದು ಡಿಮೆರಿಟ್ ಪಾಯಿಂಟ್ ನೀಡಿದೆ. ಮುನಾಫ್ ಪಟೇಲ್ ತನ್ನ ತಪ್ಪನ್ನು ಒಪ್ಪಿಕೊಂಡು ಶಿಕ್ಷೆಯನ್ನು ಸ್ವೀಕರಿಸಿದ್ದಾರೆ. ಆದರೆ, ಅವರಿಗೆ ಯಾವ ಕಾರಣಕ್ಕಾಗಿ ಶಿಕ್ಷೆ ವಿಧಿಸಲಾಗಿದೆ ಎಂಬುದನ್ನು ಐಪಿಎಲ್ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಸ್ಪಷ್ಟಪಡಿಸಲಾಗಿಲ್ಲ.

IPL 2025: ಸೂಪರ್ ಓವರ್​ನಲ್ಲಿ ಗೆದ್ದು ಬೀಗಿದ ಡೆಲ್ಲಿ ಕ್ಯಾಪಿಟಲ್ಸ್

ನಾಯಕನಿಗೂ ಶಿಕ್ಷೆ

ಈ ಸೀಸನ್‌ನಲ್ಲಿ ಡೆಲ್ಲಿ ತಂಡದ ಸದಸ್ಯರಿಗೆ ದಂಡ ವಿಧಿಸಲಾಗುತ್ತಿರುವುದು ಇದೇ ಮೊದಲಲ್ಲ. ಇದಕ್ಕೂ ಮುನ್ನ ನಾಯಕ ಅಕ್ಷರ್ ಪಟೇಲ್ ಅವರಿಗೂ ಬಿಸಿಸಿಐ ದಂಡ ವಿಧಿಸಿತ್ತು. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ದರದಿಂದಾಗಿ ಅವರಿಂದ 12 ಲಕ್ಷ ರೂ. ವಸೂಲಿ ಮಾಡಲಾಗಿತ್ತು.

ಈ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಉತ್ತಮ ಫಾರ್ಮ್‌ನಲ್ಲಿದೆ. ಪ್ರತಿಯೊಂದು ವಿಭಾಗದಲ್ಲೂ ಅಮೋಘ ಪ್ರದರ್ಶನ ನೀಡುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದೆ. ಅಕ್ಷರ್ ಪಟೇಲ್ ನಾಯಕತ್ವದಲ್ಲಿ ದೆಹಲಿ ತಂಡ ಇದುವರೆಗೆ ಆಡಿರುವ 6 ಪಂದ್ಯಗಳಲ್ಲಿ 5 ರಲ್ಲಿ ಗೆಲುವು ಸಾಧಿಸುವ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ