AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಎಂಎಸ್ ಧೋನಿ ಎಂಟ್ರಿಗೆ ಕಿವಿ ಮುಚ್ಚಿ ಕೂತ ನೀತಾ ಅಂಬಾನಿ

IPL 2025 CSK vs MI: ಚೆನ್ನೈನ ಚೆಪಾಕ್ (ಎಂಎ ಚಿದಂಬರಂ ಸ್ಟೇಡಿಯಂ) ಮೈದಾನದಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 155 ರನ್ ಕಲೆಹಾಕಿದರೆ, ಈ ಗುರಿಯನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡ 19.1 ಓವರ್​ಗಳಲ್ಲಿ ಚೇಸ್ ಮಾಡಿದೆ.

VIDEO: ಎಂಎಸ್ ಧೋನಿ ಎಂಟ್ರಿಗೆ ಕಿವಿ ಮುಚ್ಚಿ ಕೂತ ನೀತಾ ಅಂಬಾನಿ
Ms Dhoni - Nita Ambani
ಝಾಹಿರ್ ಯೂಸುಫ್
|

Updated on: Mar 24, 2025 | 1:54 PM

Share

IPL 2025: ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ (CSK) ಹಾಗೂ ಮುಂಬೈ ಇಂಡಿಯನ್ಸ್ (MI) ನಡುವಣ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಈ ರೋಚಕ ಪೈಪೋಟಿ ನಡುವೆ ಎಲ್ಲರ ಮನಸ್ಸು ಗೆದ್ದಿದ್ದು ಮಹೇಂದ್ರ ಸಿಂಗ್ ಧೋನಿಯ (MS Dhoni) ಎಂಟ್ರಿ. ಆದರೆ ಇದೇ ಎಂಟ್ರಿಯಿಂದ ಸಂಕಷ್ಟಕ್ಕೆ ಸಿಲುಕಿದ್ದು ಮುಂಬೈ ಇಂಡಿಯನ್ಸ್ ತಂಡದ ಮಾಲಕಿ ನೀತಾ ಅಂಬಾನಿ.

ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ತಂಡವು ಮುಂಬೈ ಇಂಡಿಯನ್ಸ್ ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 155 ರನ್​ ಕಲೆಹಾಕಿತು.

ಈ 156 ರನ್​ಗಳ ಗುರಿ ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 18.4 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 152 ರನ್ ಕಲೆಹಾಕಿತ್ತು. ಈ ವೇಳೆ ಕಣಕ್ಕಿಳಿದದ್ದು ಮಹೇಂದ್ರ ಸಿಂಗ್ ಧೋನಿ. ಇತ್ತ ಧೋನಿ ಬ್ಯಾಟಿಂಗ್ ಬರುತ್ತಿದ್ದಾರೆಂಬ ಸೂಚನೆ ಸಿಗುತ್ತಿದ್ದಂತೆ ಅಭಿಮಾನಿಗಳ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು.

ಇದನ್ನೂ ಓದಿ
Image
RCBಯಲ್ಲಿ ಬ್ರಿಟಿಷ್ ಪಡೆ... ಸೋತು ಸುಣ್ಣವಾಗಲಿದೆ ಎಂದ ಗಿಲ್​ಕ್ರಿಸ್ಟ್
Image
IPL 2025: ಐಪಿಎಲ್​ ಕಣದಲ್ಲಿದ್ದಾರೆ 13 ಕನ್ನಡಿಗರು
Image
IPL 2025: ಬ್ಯಾನ್ ಬ್ಯಾನ್ ಬ್ಯಾನ್... ಐಪಿಎಲ್ ಆಟಗಾರರಿಗೆ ಬ್ಯಾನ್ ಭೀತಿ
Image
IPL 2025: ಐಪಿಎಲ್​ನಲ್ಲಿ 10 ನಿಮಯಗಳು ಬದಲಾವಣೆ

ಈ ಸದ್ದು ಗದ್ದಲದಿಂದ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಓನರ್ ನೀತಾ ಅಂಬಾನಿ ಸಂಕಷ್ಟಕ್ಕೆ ಸಿಲುಕಿದರು. ಅದರಲ್ಲೂ ಧೋನಿ ಮೈದಾನಕ್ಕಿಳಿಯುತ್ತಿದ್ದಂತೆ ಅಭಿಮಾನಿಗಳ ಹರ್ಷೋದ್ಗಾರವು ಮತ್ತಷ್ಟು ಹೆಚ್ಚಾಯಿತು. ಕಿವಿಯ ತಮಟೆಗೆ ಸವಾಲೆಸೆಯುವಂತೆ ಕೇಳಿ ಬಂದ ಈ ಶಬ್ದದ ಕಿರಿ ಕಿರಿ ತಪ್ಪಿಸಿಕೊಳ್ಳಲು ನೀತಾ ಅಂಬಾನಿ ಕಿವಿ ಮುಚ್ಚಿಕೊಂಡರು. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಎಂಎಸ್​ ಧೋನಿ ಎಂಟ್ರಿ ವಿಡಿಯೋ:

ಇನ್ನು ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ನೀಡಿದ 156 ರನ್​ಗಳ ಗುರಿಯನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡ 19.1 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಚೆಪಾಕ್ ಮೈದಾನದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಆತಿಥೇಯ ಸಿಎಸ್​ಕೆ ತಂಡವು 4 ವಿಕೆಟ್​ಗಳ ಗೆಲುವು ದಾಖಲಿಸಿಕೊಂಡಿದೆ. ಈ ಗೆಲುವಿನೊಂದಿಗೆ ಶುಭಾರಂಭ ಮಾಡಿರುವ ಚೆನ್ನೈ ಸೂಪರ್ ಕಿಂಗ್ಸ್ ತನ್ನ ಮುಂದಿನ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಆಡಲಿದೆ.

ಮಾರ್ಚ್ 28 ರಂದು ನಡೆಯಲಿರುವ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದ್ದು, ಈ ಪಂದ್ಯದಲ್ಲೂ ಉಭಯ ತಂಡಗಳಿಂದ ರಣರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ