IPL 2025: ಎಲ್ ಕ್ಲಾಸಿಕೊ ಪಂದ್ಯಕ್ಕೆ ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ ಅಲಭ್ಯ
IPL 2025 MI vs CSK: ಐಪಿಎಲ್ನ ಎಲ್ ಕ್ಲಾಸಿಕೊ ಕದನವಾಗಿ ಗುರುತಿಸಿಕೊಂಡಿರುವ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯವು ಮಾರ್ಚ್ 23 ರಂದು ನಡೆಯಲಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ಜರುಗಲಿರುವ ಈ ಪಂದ್ಯವನ್ನು ರಾತ್ರಿ 7.30 ಗಂಟೆಗೆ ಶುರುವಾಗಲಿದೆ. ಇಲ್ಲಿ ಎಲ್ ಕ್ಲಾಸಿಕೊ ಎಂದರೆ ಕ್ಲಾಸಿಕ್ ಪಂದ್ಯ.

ಇಂಡಿಯನ್ ಪ್ರೀಮಿಯರ್ ಲೀಗ್ನ ಮದಗಜಗಳ ಕಾಳಗ ಎಂದೇ ಬಿಂಬಿತವಾಗಿರುವ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯಕ್ಕೆ ಹಾರ್ದಿಕ್ ಪಾಂಡ್ಯ ಹಾಗೂ ಜಸ್ಪ್ರೀತ್ ಬುಮ್ರಾ ಅಲಭ್ಯರಾಗಲಿದ್ದಾರೆ. ಮಾರ್ಚ್ 23 ರಂದು ಚೆನ್ನೈನ ಚೆಪಾಕ್ ಮೈದಾನದಲ್ಲಿ ಜರುಗಲಿರುವ ಈ ಪಂದ್ಯದಲ್ಲಿ ಇಬ್ಬರು ಆಟಗಾರರು ಕಾಣಿಸಿಕೊಳ್ಳುವುದಿಲ್ಲ.
ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಕಳೆದ ಸೀಸನ್ನಲ್ಲಿ ಮೂರು ಬಾರಿ ಸ್ಲೋ ಓವರ್ ರೇಟ್ ತಪ್ಪು ಮಾಡಿದ ಪರಿಣಾಮ ಒಂದು ಪಂದ್ಯದ ನಿಷೇಧ ಎದುರಿಸುತ್ತಿದ್ದಾರೆ. ಅದರಂತೆ ಈ ಬಾರಿಯ ಐಪಿಎಲ್ನ ತನ್ನ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯುವಂತಿಲ್ಲ. ಹೀಗಾಗಿ ಮಾರ್ಚ್ 23 ರಂದು ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೆ ಅವರು ಅಲಭ್ಯರಾಗಿದ್ದಾರೆ.
ಮತ್ತೊಂದೆಡೆ ಮುಂಬೈ ಇಂಡಿಯನ್ಸ್ ತಂಡದ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಕೊನೆಯ ಪಂದ್ಯದ ವೇಳೆ ಬೆನ್ನು ನೋವಿಗೆ ಒಳಗಾಗಿದ್ದ ಬುಮ್ರಾ ಇನ್ನೂ ಸಹ ಸಂಪೂರ್ಣ ಗುಣಮುಖರಾಗಿಲ್ಲ. ಇದೇ ಕಾರಣದಿಂದಾಗಿ ಇತ್ತೀಚೆಗೆ ಮುಗಿದ ಚಾಂಪಿಯನ್ಸ್ ಟ್ರೋಫಿಯಲ್ಲೂ ಅವರು ಕಣಕ್ಕಿಳಿದಿರಲಿಲ್ಲ. ಇದೀಗ ಐಪಿಎಲ್ ಆರಂಭಕ್ಕೆ ದಿನಗಳು ಮಾತ್ರ ಉಳಿದಿದ್ದು, ಇದಾಗ್ಯೂ ಅವರು ಮುಂಬೈ ಇಂಡಿಯನ್ಸ್ ತಂಡವನ್ನು ಕೂಡಿಕೊಂಡಿಲ್ಲ.
ಪ್ರಸ್ತುತ ಮಾಹಿತಿ ಪ್ರಕಾರ ಜಸ್ಪ್ರೀತ್ ಬುಮ್ರಾ ಮುಂಬೈ ಇಂಡಿಯನ್ಸ್ ತಂಡದ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ. ಅಲ್ಲದೆ ಸಂಪೂರ್ಣ ಫಿಟ್ನೆಸ್ನೊಂದಿಗೆ ಏಪ್ರಿಲ್ ಮೊದಲ ವಾರದಲ್ಲಿ ಮುಂಬೈ ಬಳಗವನ್ನು ಸೇರಿಕೊಳ್ಳಲಿದ್ದಾರೆ. ಹೀಗಾಗಿ ಭಾನುವಾರ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಎಲ್ಕ್ಲಾಸಿಕೊ ಪಂದ್ಯದಲ್ಲಿ ಬುಮ್ರಾ ಕೂಡ ಕಾಣಿಸಿಕೊಳ್ಳುವುದಿಲ್ಲ.
ಇತ್ತ ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಟೀಮ್ ಇಂಡಿಯಾ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ. ಇನ್ನು ಜಸ್ಪ್ರೀತ್ ಬುಮ್ರಾ ಸ್ಥಾನದಲ್ಲಿ ನಮನ್ ಧೀರ್ಗೆ ಚಾನ್ಸ್ ಸಿಗಬಹುದು.
ಏನಿದು ಎಲ್ ಕ್ಲಾಸಿಕೊ ಪಂದ್ಯ?
ಇಂಡಿಯನ್ ಪ್ರೀಮಿಯರ್ ಲೀಗ್ನ ಎರಡು ಬಲಿಷ್ಠ ತಂಡಗಳೆಂದರೆ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್. ಉಭಯ ತಂಡಗಳ ನಡುವಣ ಪಂದ್ಯದಲ್ಲಿ ರಣರೋಚಕ ಹೋರಾಟಕ್ಕೆ ಕಂಡು ಬರುತ್ತದೆ. ಹೀಗಾಗಿ ಈ ಎರಡು ತಂಡಗಳ ಮುಖಾಮುಖಿಯನ್ನು ಎಲ್ ಕ್ಲಾಸಿಕೊ ಮ್ಯಾಚ್ ಎನ್ನಲಾಗುತ್ತದೆ. ಇಲ್ಲಿ ಎಲ್ ಕ್ಲಾಸಿಕೊ ಎಂದರೆ ಕ್ಲಾಸಿಕ್ ಪಂದ್ಯ. ಅಂದರೆ ಟೂರ್ನಿಯ ಪ್ರಬಲ ಪ್ರತಿಸ್ಪರ್ಧಿಗಳ ನಡುವಣ ಕದನವನ್ನು ಎಲ್ ಕ್ಲಾಸಿಕೊ ಎಂದು ವರ್ಣಿಸಲಾಗುತ್ತದೆ. ಅದರಂತೆ ಈ ಬಾರಿಯ ಎಲ್ ಕ್ಲಾಸಿಕೊ ಮ್ಯಾಚ್ ಮಾರ್ಚ್ 23 ರಂದು ಚೆನ್ನೈನಲ್ಲಿ ನಡೆಯಲಿದೆ.
ಇದನ್ನೂ ಓದಿ: IPL 2025: ಬರೆದಿಟ್ಕೊಳ್ಳಿ, ಈ ಸಲ ಕಪ್ ಇವರದ್ದೆ… ಎಬಿಡಿ ಭವಿಷ್ಯ
ಮುಂಬೈ ಇಂಡಿಯನ್ಸ್ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಜಸ್ಪ್ರೀತ್ ಬುಮ್ರಾ, ತಿಲಕ್ ವರ್ಮಾ, ಟ್ರೆಂಟ್ ಬೌಲ್ಟ್, ನಮನ್ ಧೀರ್, ರಾಬಿನ್ ಮಿಂಝ್, ಕರ್ಣ್ ಶರ್ಮಾ, ದೀಪಕ್ ಚಹರ್, ರೀಸ್ ಟೋಪ್ಲಿ, ರಿಯಾನ್ ರಿಕೆಲ್ಟನ್, ವಿಲ್ ಜ್ಯಾಕ್ಸ್, ಮಿಚೆಲ್ ಸ್ಯಾಂಟ್ನರ್, ಕರ್ಣ್ ಶರ್ಮಾ, ರಾಜ್ವ ಶರ್ಮಾ, ಸತ್ಯನಾರಾಯಣ ರಾಜು, ರಾಜ್ ಬಾವ, ಕೃಷ್ಣನ್ ಶ್ರೀಜಿತ್, ಅಶ್ವಾಣಿ ಕುಮಾರ್, ಬೆವನ್ ಜೇಕಬ್ಸ್, ಅರ್ಜುನ್ ತೆಂಡೂಲ್ಕರ್, ಕಾರ್ಬಿನ್ ಬಾಷ್, ಮುಜೀಬ್ ಉರ್ ರೆಹಮಾನ್.