AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs KKR: ಚಾಂಪಿಯನ್​ಗೆ ಮಣ್ಣು ಮುಕ್ಕಿಸಿದ ಆರ್​ಸಿಬಿಗೆ ಗೆಲುವಿನ ಶುಭಾರಂಭ

RCB Crushes KKR in IPL 2025 Opener: ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಐಪಿಎಲ್ 2025ರ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್​ಸಿಬಿ) ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧ ಭರ್ಜರಿ ಗೆಲುವು ಸಾಧಿಸಿತು. ಕೆಕೆಆರ್ 175 ರನ್ ಗಳಿಸಿದರೂ, ಆರ್​ಸಿಬಿ 22 ಎಸೆತಗಳು ಬಾಕಿ ಇರುವಾಗಲೇ 7 ವಿಕೆಟ್‌ಗಳಿಂದ ಗೆದ್ದು ಐಪಿಎಲ್ ಅಭಿಯಾನವನ್ನು ಗೆಲುವಿನೊಂದಿಗೆ ಆರಂಭಿಸಿತು.

RCB vs KKR: ಚಾಂಪಿಯನ್​ಗೆ ಮಣ್ಣು ಮುಕ್ಕಿಸಿದ ಆರ್​ಸಿಬಿಗೆ ಗೆಲುವಿನ ಶುಭಾರಂಭ
ಸಾಲ್ಟ್, ಕೊಹ್ಲಿ
Follow us
ಪೃಥ್ವಿಶಂಕರ
|

Updated on:Mar 22, 2025 | 11:15 PM

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ ಮೈದಾನದಲ್ಲಿ ನಡೆದ 18ನೇ ಆವೃತ್ತಿಯ ಐಪಿಎಲ್​ನ (IPL 2025) ಮೊದಲ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್​ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB vs KKR) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೆಕೆಆರ್ ತಂಡವನ್ನು ಏಕಪಕ್ಷೀಯವಾಗಿ ಮಣಿಸಿದ ಆರ್​ಸಿಬಿ ಈ ಆವೃತ್ತಿಯನ್ನು ಗೆಲುವಿನೊಂದಿಗೆ ಆರಂಭಿಸಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ತಂಡ ಅಜಿಂಕ್ಯ ರಹಾನೆ ಮತ್ತು ಸುನಿಲ್ ನರೈನ್ ಅವರ ಶತಕದ ಜೊತೆಯಾಟದ ನೆರವಿನಿಂದ, ಕೋಲ್ಕತ್ತಾ ನೈಟ್ ರೈಡರ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 175 ರನ್‌ಗಳ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಆರ್​ಸಿಬಿ ಇನ್ನು 22 ಎಸೆತಗಳು ಬಾಕಿ ಇರುವಂತೆಯೇ 7 ವಿಕೆಟ್‌ಗಳಿಂದ ಏಕಪಕ್ಷೀಯವಾಗಿ ಗೆಲುವು ಸಾಧಿಸಿತು.

ಆರ್​ಸಿಬಿಗೆ ಸ್ಫೋಟಕ ಆರಂಭ

ಆರ್​ಸಿಬಿಯ ಈ ಸುಲಭದ ಗೆಲುವಿನಲ್ಲಿ ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ ಮತ್ತು ನೂತನ ನಾಯಕ ರಜತ ಪತಿದಾರ್ ಪ್ರಮುಖ ಪಾತ್ರ ವಹಿಸಿದರು. ಈ ಮೂವರೂ ಆಟಗಾರರು ತಮ್ಮ ಆಕ್ರಮಣಕಾರಿ ಬ್ಯಾಟಿಂಗ್‌ನಿಂದ ಪಂದ್ಯವನ್ನು ಏಕಪಕ್ಷೀಯವಾಗಿಸಿದರು. 175 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಆರ್​ಸಿಬಿ ಪರ ಸಾಲ್ಟ್ ಮತ್ತು ಕೊಹ್ಲಿ ಮೊದಲ 6 ಓವರ್‌ಗಳಲ್ಲಿ 80 ರನ್ ಕಲೆಹಾಕಿದರು. ಇಬ್ಬರೂ ಕೇವಲ 8.3 ಓವರ್‌ಗಳಲ್ಲಿ 95 ರನ್‌ಗಳ ಆರಂಭಿಕ ಪಾಲುದಾರಿಕೆಯನ್ನು ಮಾಡಿದರು. ಆದರೆ, ಇದರ ನಂತರ ಬೆಂಗಳೂರು ತಂಡ ಮುಂದಿನ 23 ರನ್ ಗಳಿಸುವಷ್ಟರಲ್ಲಿ ಎರಡು ವಿಕೆಟ್ ಕಳೆದುಕೊಂಡಿತು. 31 ಎಸೆತಗಳಲ್ಲಿ 180 ಸ್ಟ್ರೈಕ್ ರೇಟ್‌ನಲ್ಲಿ 56 ರನ್ ಗಳಿಸಿದ ನಂತರ ಸಾಲ್ಟ್, ವರುಣ್ ಚಕ್ರವರ್ತಿಗೆ ಬಲಿಯಾದರು. ಸಾಲ್ಟ್ ಅವರ ಇನ್ನಿಂಗ್ಸ್​ನಲ್ಲಿ 9 ಬೌಂಡರಿ ಮತ್ತು 2 ಸಿಕ್ಸರ್‌ಗಳು ಸೇರಿದ್ದವು.

ಕೊಹ್ಲಿ ಗೆಲುವಿನ ಅರ್ಧಶತಕ

ಸಾಲ್ಟ್ ನಂತರ ಬಂದ ದೇವದತ್ ಪಡಿಕಲ್ ಕೂಡ 10 ಎಸೆತಗಳಲ್ಲಿ 10 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು. ಆದರೆ ಅವರಿಬ್ಬರ ವಿಕೆಟ್ ಪತನ ಆರ್​ಸಿಬಿ ಗೆಲುವಿನ ಮೇಲೆ ಹೆಚ್ಚಿನ ಪರಿಣಾಮ ಬೀರಲಿಲ್ಲ. ಉಳಿದ ಕೆಲಸವನ್ನು ನಾಯಕ ಪಾಟಿದಾರ್ ಮತ್ತು ವಿರಾಟ್ ಕೊಹ್ಲಿ ಪೂರ್ಣಗೊಳಿಸಿದರು. ಕೊಹ್ಲಿ ಕೇವಲ 36 ಎಸೆತಗಳಲ್ಲಿ 163 ಸ್ಟ್ರೈಕ್ ರೇಟ್‌ನಲ್ಲಿ 4 ಬೌಂಡರಿ ಮತ್ತು 3 ಸಿಕ್ಸರ್‌ಗಳ ಸಹಾಯದಿಂದ  59 ರನ್ ಗಳಿಸಿದರೆ, ರಜತ್ ಪಾಟಿದಾರ್ ಕೇವಲ 16 ಎಸೆತಗಳಲ್ಲಿ 212 ಸ್ಟ್ರೈಕ್ ರೇಟ್‌ನಲ್ಲಿ 34 ರನ್ ಗಳಿಸಿದರು. ಅವರ ಈ ಇನ್ನಿಂಗ್ಸ್‌ನಲ್ಲಿ 5 ಬೌಂಡರಿ ಮತ್ತು 1 ಸಿಕ್ಸರ್ ಸೇರಿದ್ದವು. ಕೊನೆಯಲ್ಲಿ, ಲಿಯಾಮ್ ಲಿವಿಂಗ್‌ಸ್ಟೋನ್ 5 ಎಸೆತಗಳಲ್ಲಿ 15 ರನ್‌ಗಳ ಕೊಡುಗೆ ನೀಡಿದರು. ಈ ಮೂಲಕ ಆರ್‌ಸಿಬಿ 175 ರನ್‌ಗಳ ಗುರಿಯನ್ನು ಕೇವಲ 22 ಎಸೆತಗಳು ಬಾಕಿ ಇರುವಾಗಲೇ ತಲುಪಿತು.

ರಹಾನೆ- ನರೈನ್ ಜೊತೆಯಾಟ ವ್ಯರ್ಥ

ಇದಕ್ಕೂ ಮುನ್ನ ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್, ಅಜಿಂಕ್ಯ ರಹಾನೆ ಮತ್ತು ಸುನಿಲ್ ನರೈನ್ ಅವರ ಶತಕದ ಜೊತೆಯಾಟದ ನೆರವಿನಿಂದ  175 ರನ್‌ ಕಲೆಹಾಕಿತು. ಆದಾಗ್ಯೂ ಕೋಲ್ಕತ್ತಾ ಆರಂಭಿಕ ಆಘಾತ ಎದುರಿಸಿತು. ಮೊದಲ ಓವರ್‌ನಲ್ಲೇ ಜೋಶ್ ಹ್ಯಾಜಲ್‌ವುಡ್ ಕ್ವಿಂಟನ್ ಡಿ ಕಾಕ್ ಅವರ ವಿಕೆಟ್ ಪಡೆದರು. ಇದಾದ ನಂತರ, ಸುನಿಲ್ ನರೈನ್ ಮತ್ತು ಅಜಿಂಕ್ಯ ರಹಾನೆ ಜವಾಬ್ದಾರಿಯನ್ನು ವಹಿಸಿಕೊಂಡರು. ಇವರಿಬ್ಬರ ನಡುವೆ ಎರಡನೇ ವಿಕೆಟ್‌ಗೆ 55 ಎಸೆತಗಳಲ್ಲಿ 103 ರನ್‌ಗಳ ಜೊತೆಯಾಟ ಇತ್ತು. ಈ ವೇಳೆ ನಾಯಕ ರಹಾನೆ ಕೇವಲ 25 ಎಸೆತಗಳಲ್ಲಿ ತಮ್ಮ ಐಪಿಎಲ್ ವೃತ್ತಿಜೀವನದ 31 ನೇ ಅರ್ಧಶತಕ ಗಳಿಸಿದರು. ಅಂತಿಮವಾಗಿ ಅವರು 31 ಎಸೆತಗಳಲ್ಲಿ 56 ರನ್ ಗಳಿಸಿ ಔಟಾದರು.

IPL 2025: ಸಾಲ್ಟ್- ಕೊಹ್ಲಿ ಸಿಡಿಲಬ್ಬರ; ಪವರ್ ಪ್ಲೇಯಲ್ಲಿ 80 ರನ್ ಚಚ್ಚಿದ ಆರ್​ಸಿಬಿ

ಕೃನಾಲ್- ಹ್ಯಾಜಲ್​ವುಡ್ ಮ್ಯಾಜಿಕ್

ರಹಾನೆ ನಂತರ ವೆಸ್ಟ್ ಇಂಡೀಸ್‌ನ ಸ್ಟಾರ್ ಕ್ರಿಕೆಟಿಗ ನರೈನ್ ಕೂಡ ಐದು ಬೌಂಡರಿ ಮತ್ತು ಮೂರು ಸಿಕ್ಸರ್‌ಗಳ ಸಹಾಯದಿಂದ 44 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಈ ಎರಡು ವಿಕೆಟ್​​ಗಳ ಪತನದ ನಂತರ, ಕೆಕೆಆರ್ ತಂಡದ ಇನ್ನಿಂಗ್ಸ್ ಕುಸಿತ ಕಂಡಿತು. ತಂಡವು ಸತತವಾಗಿ ವಿಕೆಟ್‌ಗಳನ್ನು ಕಳೆದುಕೊಂಡಿತು. ಕೊನೆಯಲ್ಲಿ ಅಂಗ್‌ಕ್ರಿಶ್ ರಘುವಂಶಿ 30 ರನ್ ಗಳಿಸಿದನ್ನು ಬಿಟ್ಟರೆ ಉಳಿದವರಿಂದ ಸಪ್ಪೆ ಪ್ರದರ್ಶನ ಮೂಡಿಬಂತು. ದುಬಾರಿ ಬೆಲೆಯ ವೆಂಕಟೇಶ್ ಅಯ್ಯರ್ 6, ಆಂಡ್ರೆ ರಸೆಲ್ 4, ಹರ್ಷಿತ್ ರಾಣಾ 5 ರನ್​ಗಳಿಗೆ ಸುಸ್ತಾದರು. ಆರ್‌ಸಿಬಿ ಪರ ಕೃನಾಲ್ ಪಾಂಡ್ಯ ಮೂರು ವಿಕೆಟ್ ಪಡೆದರೆ, ಜೋಶ್ ಹ್ಯಾಜಲ್‌ವುಡ್ ಎರಡು ವಿಕೆಟ್ ಪಡೆದರು. ಇದಲ್ಲದೆ, ಯಶ್ ದಯಾಳ್, ರಸಿಕ್ ಸಲಾಂ ಮತ್ತು ಸುಯಾಶ್ ಶರ್ಮಾ ತಲಾ ಒಂದು ವಿಕೆಟ್ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:56 pm, Sat, 22 March 25

ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ